ಕೃಷಿ- ಕುಡಿಯುವ ನೀರಿಗೆ ಆದ್ಯತೆ: ಹರೀಶ್
Team Udayavani, Apr 24, 2018, 4:24 PM IST
ಹರಿಹರ: ನಗರ ಹಾಗೂ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗು ಕೃಷಿ ಜಮೀನುಗಳಿಗೆ ವರ್ಷವಿಡಿ ನೀರು ಒದಗಿಸಲು ಶಾಶ್ವತ ಯೋಜನೆ ರೂಪಿಸುವುದು ತಮ್ಮ ಗುರಿ ಎಂದು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಬೇಸಿಗೆಯಲ್ಲೂ ಉಂಟಾಗುವ ಕುಡಿಯುವ ನೀರಿನ ಬವಣೆ ನೀಗಿಸಲು ಬೃಹತ್ ನೀರು ಸಂಗ್ರಹಾಗಾರ ನಿರ್ಮಿಸಲಾಗುವುದು. ತಾಲೂಕಿನ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಕೊನೆ ಭಾಗಕ್ಕೆ ನೀರು ತಲುಪುವಂತೆ ಅಕ್ರಮ ಪಂಪ್ ಸೆಟ್ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಬೈರನಪಾದ ಏತ ನೀರಾವರಿ ಯೋಜನೆ ಅನುಷ್ಠಾನ, ದೇವರ ಬೆಳಕೆರೆ ಪಿಕಪ್ ಡ್ಯಾಂ ಅಲ್ಲದೆ ಕೊಂಡಜ್ಜಿ ಕೆರೆ ಅಭಿವೃದ್ಧಿಪಡಿಸಿ, ನಾಲೆಗಳಲ್ಲಿ ಸದಾ ನೀರು ಹರಿಯುವಂತೆ ಮಾಡುವುದು. ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಲಕ್ಷ ಕೋಟಿ ರೂ. ನ ಕೃಷಿ ಬಜೆಟ್ನಲ್ಲಿ ಸೇರಿಸಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಹಾಗೂ ಕಳೆದ ಬಿಜೆಪಿ ಅವಧಿಯಲ್ಲಿ ಕ್ಷೇತ್ರದಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಯೋಜನೆಗಳಿಂದಾಗಿ ಜನ ತಮ್ಮನ್ನು ಬೆಂಬಲಿಸಲಿದ್ದು, ತಾಲೂಕಿನಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.