ಅಹೋರಾತ್ರಿ ಧರಣಿ ಆರಂಭ
Team Udayavani, Jan 17, 2017, 12:43 PM IST
ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಜಿಲ್ಲೆಯ ಗ್ರಾಪಂ ನೌಕರರು ಜಿಲ್ಲಾ ಪಂಚಾಯತ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ವಿಮಾನಮಟ್ಟಿ ಬಳಿಯ ಗಣೇಶ ದೇವಸ್ಥಾನದಿಂದ ಸೋಮವಾರ ಬೆಳಿಗ್ಗೆ ಮೆರವಣಿಗೆ ಮೂಲಕ ಜಿಪಂ ಕಚೇರಿ ಆವರಣಕ್ಕೆ ಆಗಮಿಸಿ, ಧರಣಿ ಆರಂಭಿಸಿದ ನೌಕರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಕ್ಷಣ ತಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಧರಣಿನಿರತರನ್ನು ಉದ್ದೇಶಿಸಿ, ಮಾತನಾಡಿದ ಸಂಘಟನೆಯ ಮುಖಂಡ ಕೆ. ಲಕ್ಷ್ಮಿನಾರಾಯಣ ಭಟ್, ಸರ್ಕಾರ ಗ್ರಾಮ ಪಂಚಾಯಿತಿ ನೌಕರರನ್ನು ಕಡೆಗಣಿಸುತ್ತಲೇ ಬಂದಿದೆ. ನಾವು ಹಲವು ಬಾರಿ ಹೋರಾಟ ಮಾಡಿ, ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ದೂರಿದರು.
ಗ್ರಾಪಂನ ಜಾಡಮಾಲಿಗೆ 12,870, ಜವಾನರಿಗೆ 10,010, ನೀರಗಂಟಿಗಳಿಗೆ 10,588, ಕರ ವಸೂಲಿಗಾರರಿಗೆ 12,122 ರೂ. ವೇತನ ಹಾಗೂ 398 ರೂ. ತುಟ್ಟಿಭತ್ಯೆ ನೀಡಲು ಪದೇ ಪದೇ ಆಗ್ರಹಿಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ಇದುವರೆಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀರಗಂಟಿಗಳಿಗೆ ಖಾಲಿ ಇರುವ ಕರ ವಸೂಲಿಗಾರರ ಹುದ್ದೆಗೆ ಭಡ್ತಿ, ಎಲ್ಲಾ ಗ್ರಾಪಂ ನೌಕರರಿಗೆ ಸೇವಾ ಪುಸ್ತಕ ತೆರೆಯುವುದು, ಸಂಗ್ರಹವಾದ ತೆರಿಗೆ ಹಣದಲ್ಲಿ ಸೇ.40ರಷ್ಟು ಹಣವನ್ನು ಸಿಬ್ಬಂದಿ ವೇತನಕ್ಕೆ ಮೀಸಲಿಡುವುದು, ತೆರಿಗೆ ಪರಿಷ್ಕರಣೆ ಮಾಡಿ, ಆದಾಯ ಮೂಲ ಹೆಚ್ಚಿಸಬೇಕು.
ಜನಶ್ರೀ ವಿಮೆ ಜಾರಿಮಾಡಿ ನೌಕರರಿಗೆ ಆರೋಗ್ಯ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಇನ್ನು ಸಂಬಳ ನೀಡಿಕೆಯಲ್ಲಿ ಸಾಕಷ್ಟು ವಿಳಂಬ ನೀತಿ ಅನುಸರಿಸಲಾಗುತ್ತದೆ. ಕೆಲ ಕಡೆಗಳಲ್ಲಿ 5 ವರ್ಷದ ಕಾಲ ಸಂಬಳವೇ ಬಂದಿಲ್ಲ. ಕೆಲ ಕಡೆಗಳಲ್ಲಿ 50 ತಿಂಗಳ ಸಂಬಳ ಬಾಕಿ ಉಳಿಸಿಕೊಳ್ಳಲಾಗಿದೆ.
ಇದರಿಂದ ಈ ಜನ ಉಪವಾಸ ಇರಬೇಕಾದ ಸ್ಥಿತಿ ನಿರ್ಮಾಣ ಆಗುತ್ತಿದೆ ಎಂದು ಬೇಸರಿಸಿದರು. ಸಂಘಟದ ಜಿಲ್ಲಾಧ್ಯಕ್ಷ ಕೆ.ಎಂ. ಉಮೇಶ್, ಕಾರ್ಯದರ್ಶಿ ಎಸ್.ಸಿ. ಶ್ರೀನಿವಾಸಾಚಾರ್, ಕೃಷ್ಣಮೂರ್ತಿ, ಓಂಕಾರಪ್ಪ, ಎಂ. ಚೇತನ್, ಚಂದ್ರಪ್ಪ, ಬಾಡಾ ನಾಗರಾಜ, ಕೆಂಚಪ್ಪ, ತಿಪ್ಪಣ್ಣ, ನರಸಿಂಹಪ್ಪ, ವೆಂಕಟೇಶ್, ಶೇಖರಪ್ಪ, ಹನುಮಂತಪ್ಪ, ರೇವಣ್ಣ, ಮಹಾಂತೇಶ್, ಪರಶುರಾಮ ಧರಣಿ ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.