ದುಗ್ಗಮ್ಮ ದೇವಿ ಜಾತ್ರೆಗೆ ಸಕಲ ಸಿದ್ಧತೆ: ಗೌಡ್ರ ಚನ್ನ ಬಸಪ್ಪ
ಮಾ. 13ರಿಂದ ಜಾತ್ರಾ ಮಹೋತ್ಸವ ಆರಂಭ
Team Udayavani, Mar 13, 2022, 10:15 AM IST
ದಾವಣಗೆರೆ: ಐತಿಹಾಸಿಕ ಪ್ರಸಿದ್ಧ ನಗರದೇವತೆ ಶ್ರೀ ದುಗ್ಗಮ್ಮ ದೇವಿ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮಾ. 13ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದರು.
ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಜಾತ್ರೆ ಕುರಿತು ಅವರು ಮಾಹಿತಿ ನೀಡಿದರು. ಮಾ. 13ರಿಂದ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಮೊದಲ ದಿನ ಬೆಳಿಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ಕಂಕಣಧಾರಣೆ ನಂತರ ರಾತ್ರಿ ಸಾರು ಹಾಕುವ ಕಾರ್ಯಕ್ರಮ ನಡೆಯಲಿದೆ ಎಂದರು.
ಮಾ. 15ರಂದು ಬೆಳಿಗ್ಗೆ ದಾಸೋಹದ ಮಹೋಪಕರಣ ಸಮಾರಂಭೋತ್ಸವ, ರಾತ್ರಿ ಅಮ್ಮನವರಿಗೆ ಭಕ್ತಿ ಸಮರ್ಪಣೆ, ರಾತ್ರಿ 9ರಿಂದ ಸಾಂಸ್ಕೃತಿಕ ಮೇಳ, ಡೊಳ್ಳು ಕುಣಿತ, ಸಿಡಿಮದ್ದಿನ ಪ್ರದರ್ಶನ ಜತೆಗೆ ಬೆಳ್ಳಿಯ ರಥದಲ್ಲಿ ಅಮ್ಮನವರ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯುಲಿದೆ. ಮಾ. 16ರಂದು ಶ್ರೀ ದುರ್ಗಾಂಬಿಕಾ ದೇವಿಯ ಮಹಾಪೂಜಾ ಸಮಾರಂಭ ಹಾಗೂ ಬೆಳಿಗ್ಗೆ ಚರಗ ಚೆಲ್ಲುವ ಕಾರ್ಯಕ್ರಮ ನಡೆಯಲಿದೆ.
ಮಾ. 18ರಿಂದ 27ರವರೆಗೆ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ರಾತ್ರಿ 8 ಗಂಟೆಯಿಂದ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಾ. 18ರಿಂದ 20ವರೆಗೆ ಪ್ರಸಿದ್ಧ ಪೈಲ್ವಾನರಿಂದ ಮಲ್ಲಯುದ್ಧ,ಬಯಲು ಜಂಗಿ ಕುಸ್ತಿ ನಗರದ ಬೀರಲಿಂಗೇಶ್ವರ ಕುಸ್ತಿ ಆಖಾಡದಲ್ಲಿನಡೆಯಲಿದೆ ಎಂದರು. ಮಾ. 18ರಂದು ದಿ| ಶಾಮನೂರು ಪಾರ್ವತಮ್ಮ ಜ್ಞಾಪನಾರ್ಥವಾಗಿ ಶಾಸಕ ಡಾ| ಶಾಮನೂರು ಶಿವಶಂಕರಪ್ಪ ಮತ್ತು ಮಕ್ಕಳು, ಮೊಮ್ಮಕ್ಕಳ ವತಿಯಿಂದ ಪ್ರಸಾದ ವ್ಯವಸ್ಥೆ ಇರಲಿದೆ.
ಮಾ. 19ರಂದು ದಾವಣಗೆರೆ ಧರ್ಮಪ್ರವರ್ತಕ ರಾಜನಹಳ್ಳಿ ಹನುಮಂತಪ್ಪನವರ ಸವಿನೆನಪಿಗಾಗಿ ಧರ್ಮಪ್ರಕಾಶ ಆರ್. ರಾಮಶೆಟ್ಟರ, ಮೊಮ್ಮಕ್ಕಳು ಮತ್ತು ಆರ್. ಶ್ರೀನಿವಾಸಮೂರ್ತಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಅವರಿಂದ ಪ್ರಸಾದ ವ್ಯವಸ್ಥೆ ಇದೆ. ಮಾ. 20ರಂದು ಮುದೇಗೌಡ್ರು ದಿ| ಪರಮೇಶ್ವರಪ್ಪ ಹಾಗೂ ದಿ| ಲಲಿತಮ್ಮ ಜ್ಞಾಪಕಾರ್ಥವಾಗಿ ಮುದೇಗೌಡ್ರು ಸಿದ್ದರಾಜು, ಮುದೇಗೌಡ್ರು ಮುರುಗೇಶ್, ಮುದೇಗೌಡ್ರು ಗಿರೀಶ್, ಮುದೇಗೌಡ್ರು ಜಗದೀಶ್ ಅವರಿಂದ ಪ್ರಸಾದ ವ್ಯವಸ್ಥೆ ಇದೆ. ಮಾ. 18, 19, 20ರಂದು ಮೂರು ದಿನ ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದರು.
ಧರ್ಮದರ್ಶಿಗಳಾದ ಬಿ.ಎಚ್. ವೀರಭದ್ರಪ್ಪ, ಜೆ.ಕೆ. ಕೊಟ್ರಬಸಪ್ಪ, ತಿಪ್ಪೇಸ್ವಾಮಿ, ಹನುಮಂತರಾವ್ ಸಾಳಂಕಿ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಕೋಣ ಬಲಿ ಇಲ್ಲ
ದುರ್ಗಾಂಬಿಕಾ ದೇವಿ ಜಾತ್ರೆಯಲ್ಲಿ ಕೋಣ ಬಲಿ ಕೊಡುವುದಿಲ್ಲ. ಬದಲಾಗಿ ಕೋಣದ ರಕ್ತವನ್ನು ಸಿರಿಂಜ್ ಮೂಲಕ ತೆಗೆದು ಚರಗಕ್ಕೆ ಹಾಕಿ ಚರಗ ಚೆಲ್ಲಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿಯೋ ಕೋಣ ಬಲಿ ಕೊಟ್ಟಿರುವುದನ್ನು ನೋಡಿ ದುರ್ಗಾಂಬಿಕಾ ದೇವಿ ಜಾತ್ರೆಯಲ್ಲಿ ಕೋಣ ಬಲಿ ಕೊಡಲಾಗಿದೆ ಎಂಬ ತಪ್ಪು ಸಂದೇಶ ನೀಡಲಾಗುತ್ತಿದೆ. ಇದಕ್ಕೆ ಯಾರು ಅಸ್ಪದ ಕೊಡಬಾರದು ಎಂದು ಧರ್ಮದರ್ಶಿ ಬಿ.ಎಚ್.ವೀರಭದ್ರಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.