ಅಂಬೇಡ್ಕರ್ ವಿಚಾರಧಾರೆ ವಿಶ್ವಕ್ಕೆ ಮಾದರಿ
Team Udayavani, May 2, 2017, 1:01 PM IST
ಹೊನ್ನಾಳಿ: ಸಂವಿಧಾನ ಶಿಲ್ಪಿ ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದು, ಅವರ ಮೇರು ವ್ಯಕ್ತಿತ್ವವನ್ನು ದೇಶದ ಜನತೆಗೆ ಮುಟ್ಟಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಸಲ್ಲುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ತಾಲೂಕಿನ ಬೇಲಿಮಲ್ಲೂರು ಗ್ರಾಮದ ಆಂಜನೇಯ ಸಭಾ ಭವನದಲ್ಲಿ ತಾಲೂಕು ಬಿಜೆಪಿ ವತಿಯಿಂದ ನಡೆದ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನೋತ್ಸವ ಮತ್ತು ಜಿಪಂ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ ಇಂದು ತನ್ನ ಸಮರ್ಥ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮದಿಂದ ಹಂತ ಹಂತವಾಗಿ ಎಲ್ಲಾ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ.
ಕಾಂಗ್ರೆಸ್ಸಿನ ದುರಾಡಳಿತವನ್ನು ಕಾರ್ಯಕರ್ತರು ಮನೆಮನೆಗೆ ತಿಳಿಸಿ ಬಿಜೆಪಿಯನ್ನು ಮುಂಬರುವ ದಿನಗಳಲ್ಲಿ ಆಡಳಿತವನ್ನು ತರುವಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು. ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಸಮಾಜದ ಅತ್ಯಂತ ಹಿಂದುಳಿದವರೂ ಕೂಡ ಆರ್ಥಿಕ ಸದೃಢತೆ ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋಧೀಜಿಯವರ ಪರಿಶ್ರಮದಿಂದ ಅಂಬೇಡ್ಕರ್ ಜಯಂತಿಯನ್ನು ಪ್ರಪ್ರಥಮವಾಗಿ ವಿಶ್ವಸಂಸ್ಥೆಯಲ್ಲಿ ಆಚರಿಸುವಂತಾಯಿತು. ಅವರ ಹುಟ್ಟೂರು ಮಹಾರಾಷ್ಟ್ರದ ವೇವು ಗ್ರಾಮವನ್ನು 200 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
ಜನ ಸಂಘದ ಕಾಲದಿಂದಲೂ ಬಿಜೆಪಿ ದೇಶಾದ್ಯಂತ ತನ್ನದೇ ಆದ ಸಿದ್ಧಾಂತದ ಮೇಲೆ ಜನಪರ ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕಾರ್ಯಕರ್ತರ ಹಗಲಿರುಳೂ ಪರಿಶ್ರಮ ಜನತೆಯ ಸಹಕಾರದಿಂದ ಪಕ್ಷ ಇಂದು ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಿದ್ದು, ಪ್ರಧಾನಿಯವರ ಹಗಲಿರುಳು ಪರಿಶ್ರಮದ ಜನಪರ ಕಾರ್ಯಗಳೇ ಸಾಕ್ಷಿಯಾಗಿವೆ.
ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಮುಂಬರುವ ಮಹಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ. ರಾಜಪ್ಪ, ಜಿಪಂ ಅಧ್ಯಕ್ಷೆ ಉಮಾ ರಮೇಶ್, ಜಿಪಂ ಸದಸ್ಯರಾದ ಸಿ.ಸುರೇಂದ್ರನಾಯ್ಕ, ಎಂ.ಆರ್. ಮಹೇಶ್, ತಾಪಂ ಅಧ್ಯಕ್ಷೆ ಸುಲೋಚನಮ್ಮ,
ದೇವಾಲಯ ಸಮಿತಿ ಅಧ್ಯಕ್ಷ ತೊಳಕಿ ಹಾಲೇಶಪ್ಪ, ಯುವ ಮೋರ್ಚಾ ಅಧ್ಯಕ್ಷ ಸಿ.ಆರ್. ಶಿವಾನಂದ್, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ, ಎಸ್ಸಿ ಮೋರ್ಚಾ ಅಧ್ಯಕ್ಷ ಮಾರುತಿ ನಾಯ್ಕ, ಎಸ್ಟಿ ಮೋರ್ಚಾ ಅದ್ಯಕ್ಷ ರಂಗಪ್ಪ, ಸ್ಲಂ ಮೋರ್ಚಾ ಅಧ್ಯಕ್ಷ ರಂಗಪ್ಪ, ಮುಖಂಡರಾದ ಉಮಾ ಓಂಕಾರ್, ಪ್ರಭುಗೌಡ ಇನ್ನು ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.