ಅಂಬೇಡ್ಕರ್ ಆದರ್ಶ ಪಾಲಿಸಿ
Team Udayavani, Apr 17, 2017, 1:25 PM IST
ಹೊನ್ನಾಳಿ: ಸಂವಿಧಾನ ಶಿಲ್ಪಿ ಭಾರತರತ್ನ ಡಾ| ಬಿ.ಆರ್. ಅಂಬೆಡ್ಕರ್ ಅವರು ಪ್ರಬುದ್ಧ ಭಾರತ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಮಾನವತಾವಾದಿ. ಅವರ ವಿಚಾರಧಾರೆಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ| ಬಿ.ಆರ್. ಅಂಬೆಡ್ಕರ್ 126ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ದೂರದೃಷ್ಠಿ ಆಡಳಿತದಲ್ಲಿ ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ದೇಶದ ಮಾನವತಾವಾದಿಗೆ ಅಪ್ರತಿಮ ಗೌರವ ನೀಡಿ ಅವರ ಸಾಧನೆಗಳನ್ನು ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದಿದ್ದಾರೆ.
ಪ್ರಥಮ ಬಾರಿಗೆ ವಿಶ್ವ ಸಂಸ್ಥೆಯಲ್ಲಿ ಡಾ| ಅಂಬೇಡ್ಕರ್ ಅವರ ಜನ್ಮ ದಿನವನ್ನು ವಿಶ್ವಜ್ಞಾನ ದಿನವನ್ನಾಗಿ ಆಚಾರಿಸಿರುವುದು ಭಾರತೀಯರಿಗೆಲ್ಲರಿಗೂ ಹೆಮ್ಮೆ ತರುವ ವಿಚಾರ ಎಂದರು. ಇಂದು ಅಂಬೇಡ್ಕರ್ ಜನ್ಮದಿನವನ್ನು ದೇಶವಿದೇಶಗಳಲ್ಲಿ ಆಚರಿಸುತ್ತಿದ್ದು, ಅವರ ಆಶಯದಂತೆ ಎಲ್ಲರಿಗೂ ಸಮಾನ ಶಿಕ್ಷಣ ಬದುಕಲು ಸಮಾನ ಅವಕಾಶಗಳನ್ನು ಕಲ್ಪಿಸಿ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಕೆ.ಎನ್. ಶಿವಕುಮಾರ್, ಜಿಪಂ ಸದಸ್ಯರಾದ ಸಿ. ಸುರೇಂದ್ರ ನಾಯ್ಕ, ಎಂ.ಆರ್. ಮಹೇಶ್, ಗ್ರಾಪಂ ಸದಸ್ಯರಾದ ಮಹೇಂದ್ರಗೌಡ, ಜಗದೀಶ್ ಏ.ಕೆ. ಕರಿಯಪ್ಪ, ಪರಮೇಶ್ವರಪ್ಪ, ಮುಖಂಡರಾದ ಮಂಜಣ್ಣ, ಕರಿಬಸಪ್ಪ, ಎಸ್.ಟಿ. ಮಂಜುನಾಥ್, ಹಳದಪ್ಪ, ಬಂಗಾರಿ ಬಸಪ್ಪಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.