ಎಪಿಎಂಸಿಗೆ ನೂತನ ಸಾರಥಿಗಳ ಆಯ್ಕೆ


Team Udayavani, Feb 10, 2017, 12:42 PM IST

dvg7.jpg

ಜಗಳೂರು: ಇಲ್ಲಿನ ಎಪಿಎಂಸಿ ನೂತನ ಅಧ್ಯಕ್ಷರಾಗಿ ಯು.ಜಿ.ಶಿವಕುಮಾರ್‌, ಉಪಾಧ್ಯಕ್ಷರಾಗಿ ಉಮಾದೇವಿ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಆರಂಭವಾದ ಚುನಾವಣೆಯ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ಯು.ಜಿ.ಶಿವಕುಮಾರ್‌, ಬಿಜೆಪಿಯ ಶ್ರೀಶೈಲಾಚಾರಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. 

ಉಪಾಧ್ಯಕ್ಷ ಸ್ಥಾನಕ್ಕೆ ಉಮಾದೇವಿ ಒಬ್ಬರೇ ನಾಮಪತ್ರ ಸಲ್ಲಿಸಿದರು. ಈ ನಡುವೆ ನಾಮಪತ್ರ ಪರಿಶೀಲನೆ ನಂತರ ನಡೆದ ನಾಮಪತ್ರ ವಾಪಾಸ್ಸು ಪಡೆಯುವ ಪ್ರಕ್ರಿಯೆಯಲ್ಲಿ ಶ್ರೀಶೈಲಾಚಾರಿ ನಾಮಪತ್ರ ವಾಪಾಸ್ಸು ಪಡೆದರು. ಅಧ್ಯಕ್ಷರಾಗಿ ಯು.ಜಿ.ಶಿವಕುಮಾರ್‌, ಉಪಾಧ್ಯಕ್ಷರಾಗಿ ಉಮಾದೇವಿ ಆಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ತಹಶೀಲ್ದಾರ್‌ ಶ್ರೀಧರಮೂರ್ತಿ ಘೋಷಿಸಿದರು. 

ಸದಸ್ಯರಾದ ಎನ್‌.ಎಸ್‌.ರಾಜು, ಡಿ.ಟಿ.ಗುರುಮೂರ್ತಿ, ಎಸ್‌.  ಕೆ.ರಾಮರೆಡ್ಡಿ, ಎಂ.ನಿರ್ಮಲ, ಆರ್‌.ವಿ.ಗೋವಿಂದರಾಜ್‌, ಕೆ.ಹನುಮಂತಪ್ಪ,  ರೇಣುಕಾನಂದ, ಬಿ.ಎನ್‌. ತಿಪ್ಪೇಸ್ವಾಮಿ, ಎಸ್‌.ಜೆ. ಮಲ್ಲಿಕಾರ್ಜುನಸ್ವಾಮಿ,  ಜಿ.ಪಿ.ಶರಣಪ್ಪ ನಾಮನಿರ್ದೇಶನ ಸದಸ್ಯರಾದ ಬಿ.ಬಾಲಮ್ಮ, ಉಮಾಪತಿ, ಎಚ್‌.ಎಸ್‌.ಶಿವಕುಮಾರ್‌, ಎಪಿಎಂಸಿ ಕಾರ್ಯದರ್ಶಿ ಹಾಲಪ್ಪ ಇತರರಿದ್ದರು. 

ತರಕಾರಿ ಮಾರುಕಟ್ಟೆ ಸ್ಥಾಪನೆಗೆ ಆದ್ಯತೆ: ಜಗಳೂರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಜಗಳೂರು ತಾಲೂಕಿನಾದ್ಯಂತ ರೈತರು ಹೆಚ್ಚು ತರಕಾರಿ ಬೆಳೆಯುತ್ತಿದ್ದು, ಅಗತ್ಯ ತರಕಾರಿ ಮಾರುಕಟ್ಟೆ ಸ್ಥಾಪಿಸಲು ಶ್ರಮಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷ ಯು.ಜಿ.ಶಿವಕುಮಾರ್‌ ತಿಳಿಸಿದರು. 

ಈ ವರ್ಷ ತಾಲೂಕಿನಲ್ಲಿ ಭೀಕರ ಬರ ಎದುರಾಗಿ ಬೆಳೆ ಹಾನಿಯಾಗಿರುವುದರಿಂದ ಸಹಜವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಕ ಕಡಿಮೆಯಾಗಿದೆ. ಸರ್ಕಾರದ ಬಿಡುಗಡೆಯಾಗುವ ಅನುದಾನ ಮತ್ತು ಎಪಿಎಂಸಿ ಸಂಗ್ರಹವಾಗುವ ಆದಾಯವನ್ನು ಕ್ರೂಢಿಕರಿಸಿ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು. 

ಶಾಸಕರಿಂದ ಅಭಿನಂದನೆ: ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಾಮನಿರ್ದೇಶನ ಸದಸ್ಯರನ್ನು ಶಾಸಕ ಎಚ್‌.ಪಿ.ರಾಜೇಶ್‌ ಅಭಿನಂದಿಸಿದರು. ಬರಪೀಡಿತ ತಾಲೂಕಿನ ರೈತರ ಸಮಸ್ಯೆಗಳಿಗೆ ಪೂರಕವಾದ ನಿರ್ಣಯ ತೆಗೆದುಕೊಂಡು ಉತ್ತಮ ಆಡಳಿತ ನಡೆಸಬೇಕು. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿ ಎಪಿಎಂಸಿ ಪ್ರಾಂಗಣವನ್ನು ಅಭಿವೃದ್ಧಿಪಡಿಸಬೇಕು ಎಂದು ಕಿವಿಮಾತು ಹೇಳಿದರು.  

ತಾಪಂ ಉಪಾಧ್ಯಕ್ಷ ಮುದೇಗೌಡ್ರ, ಬ್ಲಾಕ್‌  ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಜಿಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಮುಖಂಡರಾದ ಮೊಬೈಲ್‌ ಮಂಜುನಾಥ್‌, ಬಿಸ್ತುವಳ್ಳಿ ಬಾಬು, ದೇವೇಂದ್ರಪ್ಪ, ಮಾರಣ್ಣ, ಪ್ರಭಣ್ಣ, ಶಿವನಗೌಡ, ಗಿರೀಶ್‌ ಒಡೆಯರ್‌ ಇತರರಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.