ಬಂಧನ ವಿರೋಧಿಸಿ ಮನವಿ
Team Udayavani, Jun 8, 2018, 2:56 PM IST
ಹರಪನಹಳ್ಳಿ: ರಾಜ್ಯ ದೇವದಾಸಿ ವಿಮೋಚನ ಸಂಘಟನೆಯ ರಾಜ್ಯಾಧ್ಯಕ್ಷೆ ಬಿ. ಮಾಳಮ್ಮ, ಕೆಪಿಆರ್‌ಎಸ್ ಮುಖಂಡ
ಶಿವಶಂಕರ್ ಸೇರಿದಂತೆ ಪ್ರಗತಿಪರ, ದಲಿತ ಮುಖಂಡರನ್ನು ಬಂಧಿಸಲಾಗಿದ್ದು, ಕೂಡಲೇ ಬಿಡುಗಡೆ ಮಾಡಬೇಕೆಂದು
ಆಗ್ರಹಿಸಿ ತಾಲೂಕು ದೇವದಾಸಿ ವಿಮೋಚನ ಸಂಘಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಕೆಪಿಆರ್‌ಎಸ್ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಗೋನಾಳ
ಗ್ರಾಮದ ದಲಿತ ಯುವಕನೊಬ್ಬನ ಕೈ ಕತ್ತರಿಸಿದ ಆರೋಪಿಯನ್ನು ಬಂಧಿಸಬೇಕು ಮತ್ತು ಗ್ರಾಮದಲ್ಲಿ ಶಾಂತಿ ಕಾಪಾಡಬೇಕು.
ಅಲ್ಲಿನ ಮರಳು ಮಾಫಿಯಾ ಚಟುವಟಿಕೆಗಳನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದಿಂದ
ಶಾಂತಿಯುತ ಪಾದಯಾತ್ರೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಅಲ್ಲಿನ ಪೋಲಿಸರು ಬಂಧಿ ಸಿದ ಕ್ರಮವನ್ನು ಖಂಡಿಸಿದ ಸಂಘಟನೆಗಳು, ಇಂತಹ ಘಟನೆಗೆ ಕಾರಣವಾದ ಅಂಶಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೋರಾಟಗಾರರ ಬಂಧನ ಪ್ರಜಾಸತ್ತಾತ್ಮಕ ಹಕ್ಕುಗಳ ದಮನ ಮಾಡುವ ಹುನ್ನಾರವಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕ್ರಮ ಹೋರಾಟವನ್ನು ಹತ್ತಿಕ್ಕುವ ಕುತಂತ್ರದ ಕೆಲಸವಾಗಿದೆ.
ತಕ್ಷಣವೇ ಬಂಧಿತ ಪ್ರತಿಭಟನಾಕಾರರನ್ನು ಬೇಶರತ್ ಬಿಡುಗಡೆಗೊಳಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು. ಸರ್ಕಾರ ಕೂಡಲೇ ಹಲ್ಲೆಗೊಳಗಾಗಿರುವ ದಲಿತ ಯುವಕನಿಗೆ ರಕ್ಷಣೆ ನೀಡಿ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಜಿಲ್ಲಾ ಸಂಘಟನೆಯ ಅಧ್ಯಕ್ಷೆ ಟಿ.ವಿ.ರೇಣುಕಮ್ಮ, ಕೆಪಿಆರ್‌ಎಸ್‌ನ ಕೆ.ಟಿ.ರಾಜಪ್ಪ, ಕೃಷಿ ಕೂಲಿಕಾರರ ಸಂಘದ ಮುಖಂಡ ಎಚ್. ರಹಮತ್‌ಉಲ್ಲಾ, ಎಸ್. ಕೆಂಚಮ್ಮ, ಎಸ್. ರೇಣುಕ, ಎನ್. ಹಾಲೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.