![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 25, 2021, 2:34 PM IST
ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿಯನ್ನು ಜಾಗರೂಕತೆ ಹಾಗೂ ಸುರಕ್ಷತೆಯಿಂದ ಆಚರಿಸಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.
ದೀಪಾವಳಿ ಬೆಳಕಿನ ಹಬ್ಬ, ಎಲ್ಲರೂ ಸಡಗರ ಮತ್ತು ಸಂಭ್ರಮ ದಿಂದ ಆಚರಿಸುವ ಹಬ್ಬ. ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಬಳಸುವಾಗಎಚ cರವಹಿಸಬೇಕು.ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಾಗಾಗಿ ಹಬ್ಬದ ಆಚರಣೆ ಜಾಗರೂಕತೆ ಹಾಗೂ ಸುರಕ್ಷತೆಯಿಂದ ಕೂಡಿರಲಿ ಎಂದು ಮನವಿ ಮಾಡಲಾಗಿದೆ.
ಅಪಾರ್ಟ್‌ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕುಳಿತು ಪರಿಸರ ಸ್ನೇಹಿ ಹಬ್ಬದ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಬೇಕು. ಗಿಡ-ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಬೇಕು. ಪಟಾಕಿಗಳು ಶಾಶ್ವತ ಕುರುಡುತನ ಅಥವಾ ಕಿವುಡುತನಗಳಿಗೆ ಎಡೆ ಮಾಡಿಕೊಡುವುದರಿಂದ ಪಟಾಕಿಗಳನ್ನು ಖರೀದಿಸುವ ಮುನ್ನ ಲೇಬಲ್‌ಗಳನ್ನು ಪರಿಶೀಲಿಸಿ, ಗುಣಮಟ್ಟದ ಬಗ್ಗೆ ಖಾತರಿ ಮಾಡಿಕೊಂಡು ಎಚ್ಚರವಹಿಸುವುದರೊಂದಿಗೆ ಅಪಾಯ ತಡೆಯಬೇಕು ಎಂದು ಸಲಹೆ ನೀಡಲಾಗಿದೆ.
ಕಳೆದ ದಶಕದಲ್ಲಿ ಸುಮಾರು ಸಾವಿರಾರು ಮಂದಿ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ. ಶೇ.70 ರಷ್ಟು ಕಣ್ಣಿಗೆ ಸಂಬಂಧಿಸಿದ ಗಾಯಗಳಾಗಿವೆ. ವಾಯು ಹಾಗೂ ಶಬ್ದ ಮಾಲಿನ್ಯ ಮಟ್ಟ ಶೇ.10 ರಿಂದ ಶೇ.15 ರÐುr ಹೆಚ್ಚಾಗುತ್ತದೆ. ಪಟಾಕಿಗಳು ಹೊರಸೂಸುವ ವಿಷಯುಕ್ತ ಅನಿಲ ಆರೋಗ್ಯ ಸಂಬಂಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಪಟಾಕಿ ಸಿಡಿಸಿದ ನಂತರ ಉತ್ಪತ್ತಿಯಾಗುವ ಘನತ್ಯಾಜ್ಯದ ಹೆಚ್ಚಳದಿಂದ ಶುಚಿತ್ವದ ಸಮಸ್ಯೆ ಉಲ್ಬಣಗೊಳುತ್ತ ದೆ ಎಂದು ಎಚ್ಚರಿಸಲಾಗಿದೆ.
ಶಬ್ದ ಮತ್ತು ವಾಯುಮಾಲಿನ್ಯಗಳಲ್ಲಿ ವೈಪರೀತ್ಯ, ಶಾಶ್ವತ ಕುರುಡುತನ ಅಥವಾ ಕಿವುvುತ ನ, ಅಸ್ವಸ್ಥರು, ಮಕ್ಕಳು, ಗರ್ಭಿ ಣಿಯರು ಮತ್ತು ವೃದ್ಧರ ಆರೋಗ್ಯದಲ್ಲಿ ಏರು-ಪೇರು, ಗಿಡ-ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಸಂಚಕಾರ, ಪಟಾಕಿಗಳ ಸದ್ದಿನಿಂದ ಒತ್ತಡ, ನಿದ್ರಾಹೀನತೆ, ರಕ್ತದೊತ್ತಡ, ಹೃದಯಾಘಾತ ಹಾಗೂ ಅ ಗ್ನಿ ಅವಘಡಗಳಿಗೆ ಕಾರಣವಾಗುವಂತಹ ಅನೇಕ ಅಪಾಯಗಳು ಉಂಟಾಗುತ್ತವೆ. 125 ಡೆಸಿಬಲ್‌ಗೂ (ಶಬ್ದದ ಪ್ರಮಾಣ) ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯ ನಡುವೆ ಪಟಾಕಿ ಸಿಡಿಸುವುದನ್ನು ಈಗಾಗಲೆ ನಿಷೇಧಿಸಲಾಗಿದೆ. ಆಸ್ಪತ್ರೆ, ವೃದ್ಧಾಶ್ರಮಗಳ ಹತ್ತಿರ ಪಟಾಕಿಗಳನ್ನು ಸಿಡಿಸಬಾರದು. ಪಟಾಕಿಗೆ ವಿದಾಯ ಹೇಳಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಿ ಎಂದು ಜಿಲ್ಲಾ ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.