ಅರಸೀಕೆರೆ ಪಟ್ಟಣ ಪಂಚಾಯ್ತಿ ಮಾಡಲು ಪ್ರಯತ್ನ
Team Udayavani, Jun 30, 2018, 4:52 PM IST
ಹರಪನಹಳ್ಳಿ: ಜನಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಅರಸೀಕೆರೆ ಗ್ರಾಮ ಪಂಚಾಯ್ತಿಯನ್ನು ಉನ್ನತೀಕರಿಸಿ ಪಟ್ಟಣ ಪಂಚಾಯ್ತಿಯನ್ನಾಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ ತಿಳಿಸಿದರು.
ತಾಲೂಕಿನ ಅರಸೀಕೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಅರಸೀಕರೆ ಹೋಬಳಿಯ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅರಸೀಕೆರೆ ಹೋಬಳಿ ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅದರಿಂದ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಆಸ್ಪತ್ರೆ ದುರಸ್ತಿ, ವಿದ್ಯುತ್ ಸಂಸ್ಕರಣಾ ಘಟಕದ ಕಾಮಗಾರಿಗಳು ನನೆಗುದಿಗೆ ಬಿದ್ದಿದೆ. ಕೆರೆಗೆ ನೀರು ತುಂಬಿಸುವ ಕೆಲಸವನ್ನು ಮಾಡುವುದಾಗಿ ಹೇಳುತ್ತಿದ್ದವರು ಯಾವುದೇ ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿಲ್ಲ ಎಂದು ಮಾಜಿ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಅರಸೀಕರೆ ಬಸ್ ನಿಲ್ದಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೂಡಲೇ ಪ್ರಾರಂಭಿಸುತ್ತೇನೆ. ಇದು ನನ್ನ ಗ್ರಾಮ. ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಮುಖಂಡ ಕೆ.ಎಂ. ವಿಶ್ವನಾಥಯ್ಯ ಮಾತನಾಡಿ, ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಇಲ್ಲಿನ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಜನರ ನಂಬಿಕೆ ಹುಸಿ ಮಾಡದಂತೆ ಸ್ಥಳೀಯವಾಗಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಮುಖಂಡರಾದ ರಾಜಪ್ಪ, ಆನಂದಪ್ಪ, ಮಬೂಲ್‌ಸಾಬ್, ಕೆ.ಬಸವರಾಜ್, ಬಿ.ವೈ. ವೆಂಕಟೇಶನಾಯ್ಕ, ಕವಲಹಳ್ಳಿ ಭರಮಣ್ಣ, ವಿ.ತಿಮ್ಮೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.