ಆಶಾ ಕಾರ್ಯಕರ್ತೆಯರ ಧರಣಿ
Team Udayavani, Jul 25, 2020, 3:51 PM IST
ದಾವಣಗೆರೆ: ಮಾಸಿಕ 12 ಸಾವಿರ ರೂ. ಗೌರವಧನ ನಿಗದಿ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿ ವಿತರಣೆ, ಕೋವಿಡ್ ಸೋಂಕಿಗೆ ಒಳಗಾದಂತಹ ಕಾರ್ಯಕರ್ತೆಯರಿಗೆ ಸಂಪೂರ್ಣ ಚಿಕಿತ್ಸೆ, ಪರಿಹಾರಕ್ಕೆ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಶುಕ್ರವಾರ 15 ದಿನ ಪೂರೈಸಿತು.
ಮಾಸಿಕ 12 ಸಾವಿರ ರೂ. ಗೌರವಧನ ನಿಗದಿ, ಕೋವಿಡ್ ನಿಯಂತ್ರಣ ಕೆಲಸದಲ್ಲಿ ತೊಡಗಿರುವರಿಗೆ ಅತ್ಯಗತ್ಯ ಸುರಕ್ಷಾ ಪರಿಕರ ನೀಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಲ್ಲಾ ಕೆಲಸ ಸ್ಥಗಿತಗೊಳಿಸಿ ಕಳೆದ 14 ದಿನಗಳಿಂದ ವಿವಿಧ ಹಂತದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜೂ. 30 ರಂದು ಮತ್ತು ಕಳೆದ 15 ದಿನಗಳಿಂದ ಜಿಲ್ಲಾ, ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರುಗಳಿಗೆ ಮತ್ತು ರಾಜ್ಯದ ಹಲವಾರು ಸಚಿವರಿಗೆ ಮತ್ತು ಶಾಸಕರಿಗೆ ಖುದ್ದಾಗಿ ಆಶಾ ಕಾರ್ಯಕರ್ತೆಯರು ಅವರರವರ ಕ್ಷೇತ್ರಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಆದರೂ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಿಲ್ಲ ಎಂದು ದೂರಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಕಳೆದ 4ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ರವರು ಚರ್ಚೆ ನಡೆಯುತ್ತಿದ್ದು,2-3 ದಿನಗಳಲ್ಲಿ ಸರ್ಕಾರದ ಕ್ರಮದ ಬಗ್ಗೆ ತಿಳಿಸುವುದಾಗಿ ಮಾಧ್ಯಮದಲ್ಲಿ ತಿಳಿಸಿರುತ್ತಾರೆ. ನಂತರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜು. 29 ರಂದು ರಾಜ್ಯ ವ್ಯಾಪಿಯಾಗಿ ಜಿಲ್ಲಾ ಮಟ್ಟದ ಬೃಹತ್ ಹೋರಾಟ ಹಮ್ಮಿಕೊಳ್ಳುವುದರ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.