ಚಾರ್ಜ್‌ಶೀಟ್‌ನಿಂದ ಹೆಸರು ಕೈ ಬಿಡಲು ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತ ಬಲೆಗೆ!
Team Udayavani, Dec 3, 2024, 5:31 PM IST
ದಾವಣಗೆರೆ: ಚಾರ್ಜ್‌ಶೀಟ್‌ನಿಂದ ಹೆಸರುಗಳ ಕೈ ಬಿಡಲು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐಯನ್ನು ಮಂಗಳವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ ಬಂಧನಕ್ಕೆ ಒಳಗಾದವರು.
ದಾವಣಗೆರೆಯ ಮಣಿಕಂಠಾಚಾರ್ಯ ಎಂಬುವರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಚಾರ್ಜ್‌ಶೀಟ್‌ನಲ್ಲಿದ್ದ ಮಣಿಕಂಠಾಚಾರ್ಯ ಅವರ ತಾಯಿ ಭಾಗಮ್ಮ ಆಚಾರ್ಯ ಮತ್ತು ಪತ್ನಿ ಅರ್ಚನಾ ಆಚಾರ್ಯ ಅವರಿಬ್ಬರ ಹೆಸರುಗಳ ಕೈ ಬಿಡಲು ಈರಣ್ಣ 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಮಣಿಕಂಠಾಚಾರ್ಯ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮಂಗಳವಾರ ಠಾಣೆಯಲ್ಲಿ ಈರಣ್ಣ ಮಣಿಕಂಠಾಚಾರ್ಯ ಅವರಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಈರಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಉಪಾಧೀಕ್ಷಕಿ ಕಲಾವತಿ ನೇತೃತ್ವದಲ್ಲಿ ನಿರೀಕ್ಷಕರಾದ ಸಿ. ಮಧುಸೂಧನ್, ಪ್ರಭು ಬಿ. ಸೂರಿನ, ಪಿ. ಸರಳಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೂವರು ಸುಲಿಗೆಕೋರರ 8 ಕಿ.ಮೀ. ಬೆನ್ನತ್ತಿ ಬಂಧಿಸಿದ ಪೊಲೀಸರು!
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.