ಅಂಗಡಿಗಳ ಮೇಲೆ ದಾಳಿ: ದಂಡ
Team Udayavani, Aug 12, 2020, 3:10 PM IST
ಸಾಂದರ್ಭಿಕ ಚಿತ್ರ
ಹರಿಹರ: ತಂಬಾಕು ಉತ್ಪನ್ನಗಳ ಮಾರಾಟ ತಡೆಯಲು ಅಧಿಕಾರಿಗಳ ತಂಡ ಮಂಗಳವಾರ ನಗರದ ಮುಖ್ಯ ರಸ್ತೆ, ಹಳೆ ಪಿ.ಬಿ.ರಸ್ತೆ ಮುಂತಾದೆಡೆ ಸಗಟು ಹಾಗೂ ರೀಟೇಲ್ ಅಂಗಡಿಗಳ ಮೇಲೆ ದಾಳಿ ನಡೆಸಿತು. ಬೀಡಿ, ಸಿಗರೇಟು, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟಮಾಡುತ್ತಿದ್ದವರಿಂದ ದಂಡ ವಸೂಲಿ ಮಾಡಲಾಯಿತು.
ನೇತೃತ್ವ ವಹಿಸಿದ್ದ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಮಾತನಾಡಿ, ಗುಟ್ಕಾ ಹಾಕಿಕೊಂಡು ಎಲ್ಲೆಂದರಲ್ಲಿ ಉಗುಳುವುದರಿಂದ ಕೋವಿಡ್-19 ಮತ್ತಷ್ಟು ವ್ಯಾಪಕವಾಗಿ ಹರಡುತ್ತದೆ. ಕೊಟ್ಪಾ (ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ) ಅಡಿ ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಿಸಲಾಗಿದೆ. ಅಡಿಕೆ ಹಾಗೂ ತಂಬಾಕು ಪ್ರತ್ಯೇಕಿಸಿ ಮಾರಾಟ ಮಾಡುವುದನ್ನೂ ಸಹ ಹೈಕೋರ್ಟ್ ನಿರ್ಬಂಧಿಸಿದೆ. ಅಧಿಕಾರಿಗಳ ಕಣ್ತಪ್ಪಿಸಿ ಗುಟ್ಕಾ ಮಾರಾಟ ಮಾಡಿದ್ದೇ ಆದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಎಸ್.ಎಚ್ .ಪಾಟೀಲ್, ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ, ನಗರಸಭೆ ಆರೋಗ್ಯ ನಿರೀಕ್ಷಕ ಕೋಡಿ ಭೀಮರಾಯ, ಸಾಮಾಜಿಕ ಕಾರ್ಯಕರ್ತ ದೇವರಾಜ್, ಸಿಬ್ಬಂದಿ ರುದ್ರೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.