ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು: ಬಿ.ಎ. ಬಸವರಾಜ್ ವಿಶ್ವಾಸ
Team Udayavani, Nov 1, 2021, 1:12 PM IST
ದಾವಣಗೆರೆ: ಹಾನಗಲ್, ಸಿಂದಗಿ ವಿಧಾನ ಸಭಾ ಕ್ಷೇತ್ರದ ಎರಡು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾನಗಲ್, ಸಿಂದಗಿ ಎರಡು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೇನೆ. ಜನರ ನಾಡಿ ಮಿಡಿತ ಗೊತ್ತಾಗಿದೆ. ಜನರು ಎರಡೂ ಕ್ಷೇತ್ರಗಳಲ್ಲಿ ಆಶೀರ್ವದಿಸುವ ವಿಶ್ವಾಸ ಇದೆ ಎಂದರು.
ಹಾನಗಲ್, ಸಿಂದಗಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮುಂದಿನ ಚುನಾವಣಾ ಫಲಿತಾಂಶದ ದಿಕ್ಸೂಚಿ ಅಲ್ಲ. ನಮಗೆ ಸಂಪೂರ್ಣ ಬಹುಮತ ಇದೆ. ಗೆದ್ದೇ ಗೆಲ್ಲುತ್ತೇವೆ. ಎರಡು ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಬಿಜೆಪಿ ಸೋಲಲಿದೆ ಎಂದು ವಿಪಕ್ಷಗಳು ಹೇಳುತ್ತಿವೆ. ಮಂಗಳವಾರ ಬೆಳಗ್ಗೆ ಎಲ್ಲವೂ ಗೊತ್ತಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ:ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ನನ್ನದು: ತಮಿಳು ನಟ ವಿಶಾಲ್
ನನಗೆ ಈವರೆಗೂ ಬಿಟ್ ಕಾಯಿನ್ ಏನು ಎಂಬುದು ಗೊತ್ತೇ ಇಲ್ಲ. ಆ ಬಗ್ಗೆ ಮಾಹಿತಿಯೂ ಇಲ್ಲ. ಬಿಟ್‌ಕಾಯಿನ್ ಪ್ರಕರಣವನ್ನ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿಯವರೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಡಾಲರ್ ಬೆಲೆಯ ಏರಿಳಿತವೂ ಇದೆ. ಹಾಗಾಗಿ ತೈಲ ಬೆಲೆ ಹೆಚ್ಚಳವಾಗು ತ್ತಿದೆ. ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ತೈಲ ಬೆಲೆ ಕಡಿಮೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಕಿನ ಹಬ್ಬ ದೀಪಾವಳಿಯಲ್ಲಿ ಎಲ್ಲರೂ ಪರಿಸರಕ್ಕೆ ಹಾನಿಯಾಗದಂತೆ ಹಸಿರು ಪಟಾಕಿ ಬಳಸಬೇಕು. ಪರಿಸರ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ ಬೆಳಕಿನ ಹಬ್ಬ ದೀಪಾವಳಿಯ ಕೊಡುಗೆಯಾಗಿ ದಾವಣಗೆರೆ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.