ಮಾ. 5ರಿಂದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

5ರಂದು ಧ್ವಜಾರೋಹಣ-ಹರಿದ್ರಾಲೇಪನ, ದೀಪೋತ್ಸವ-ಕುಂಕುಮೋತ್ಸವ 10ರವರೆಗೆ ವಿವಿಧ ಕಾರ್ಯಕ್ರಮ

Team Udayavani, Feb 15, 2020, 11:34 AM IST

15-February-04

ಬಾಳೆಹೊನ್ನೂರು: ಶಾಂತಿ-ನೆಮ್ಮದಿ ಬದುಕಿಗೆ ಧರ್ಮ ಪಾಲನೆ ಅಗತ್ಯವಿದ್ದು, ಸರ್ಮೋದಯದ ಬಾಳಿಗೆ ಆಚಾರ್ಯರು, ಋಷಿ ಮುನಿಗಳು ಮತ್ತು ಸಂತ ಶರಣರು ಕೊಟ್ಟ ಕೊಡುಗೆ ಅಪಾರ ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳು ಹೇಳಿದರು.

ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಫಾಲ್ಗುಣ ಶು| ತ್ರಯೋದಶಿ ಪವಿತ್ರ ದಿನದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಕಾರ್ಯಕ್ರಮಗಳು ಮಾರ್ಚ್‌ 5ರಿಂದ ಮಾ.10ರ ಮಂಗಳವಾರದವರೆಗೆ ಜರುಗಲಿದೆ ಎಂದು ಹೇಳಿದರು.

ಮಾರ್ಚ್‌ 5ರಂದು ಧ್ವಜಾರೋಹಣ, ಹರಿದ್ರಾಲೇಪನ, ದೀಪೋತ್ಸವ, ಕುಂಕುಮೋತ್ಸವ ನಡೆಯಲಿದೆ ಮಾ.6 ಶುಕ್ರವಾರ ದೀಪೋತ್ಸವ-ಕುಂಕುಮೋತ್ಸವ, ಶ್ರೀ ವೀರಭದ್ರಸ್ವಾಮಿ ಚಿಕ್ಕರಥೋತ್ಸವ ಹಾಗೂ ಶಿವಾದ್ವೈತ ಧರ್ಮ ಪರಿಷತ್‌ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಖಾತೆ ಸಚಿವ ಸಚಿವ ಕೆ.ಎಸ್‌. ಈಶ್ವರಪ್ಪನವರು ಉದ್ಘಾಟಿಸಲಿದ್ದಾರೆ.

ಅಖೀಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಸಿಂಧನೂರು-ಕನ್ನೂರಿನ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಅವರಿಂದ ನುಡಿ ತೋರಣ, ಬೆಳಗುಂಪ ಹಿರೇಮಠದ ಅಭಿನವ ಪರ್ವತೇಶ್ವರ ಶಿವಾಚಾರ್ಯ ಸ್ವಾಮೀಜಿಯಿಂದ ಬೆಳಕಿನ ನುಡಿ ನಡೆಯಲಿದೆ ಎಂದರು.

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌ .ಧರ್ಮೇಗೌಡ, ಕಡೂರು ಶಾಸಕ ಬೆಳ್ಳಿಪ್ರಕಾಶ್‌, ತರೀಕೆರೆ ಶಾಸಕ ಡಿ.ವಿ.ಸುರೇಶ್‌, ಹರಿಹರ ಮಾಜಿ ಶಾಸಕ ಎಚ್‌. ಎಸ್‌.ಶಿವಶಂಕರಪ್ಪ ಹಾಗೂ ಇತರರ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪ್ರೇಕ್ಷಾ ಮತ್ತು ಶಾರದಾ ಎಸ್‌. ಅವರಿಂದ ಭರತನಾಟ್ಯ ಜರುಗಲಿದೆ ಎಂದರು.

ಮಾ.7ರ ಶನಿವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮಾನಿಹಳ್ಳಿ ಪರುವರ್ಗಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ನುಡಿ ತೋರಣ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಅಥಣಿಯ ರಾಷ್ಟ್ರ ಪ್ರಶಸ್ತಿ ವಿಜೇತ ಮಾಸ್ಟರ್‌ ಬಸವರಾಜ ಶಂಕರ ಉಮರಾಣಿ ಅವರಿಗೆ 2020ರ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ ಎಂದರು.

ಶಾಮನೂರು ಶಿವಶಂಕರಪ್ಪ ಅವರಿಂದ ರಂಭಾಪುರಿ ಬೆಳಗು ಪತ್ರಿಕೆ ಬಿಡುಗಡೆ, ಮುಖ್ಯ ಅತಿಥಿಗಳಾಗಿ ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವಿಶ್ವನಾಥ ಹಿರೇಮಠ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್‌, ಎಸ್‌.ಬಿ. ದಯಾನಂದ ಅವರಿಗೆ ರಂಭಾಪುರಿ ಶ್ರೀಗಳಿಂದ ಗೌರವ ಸನ್ಮಾನ ನಡೆಯಲಿದೆ. ಹಾಸನದ ಗಾನವಿ ವೀರಭದ್ರಪ್ಪನವರಿಂದ ಭರತನಾಟ್ಯ ಮತ್ತು ರಾತ್ರಿ ಗದಗದ ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಸೌರಭ. ನಂತರ ಹೊನ್ನಾಳಿಯ ಕುಳಗಟ್ಟಿ ತಂಡದವರಿಂದ “ಕಣ್ಣೀರಲ್ಲಿ ಕರಗಿದ ಮಾಂಗಲ್ಯ’ ನಾಟಕ ನಡೆಯಲಿದೆ ಎಂದರು.

ಮಾ.8ರ ಭಾನುವಾರ ಶಯನೋತ್ಸವ-ಶ್ರೀ ಜಗದ್ಗುರು ಶಿವಾನಂದ ಎಸ್ಟೇಟಿನಲ್ಲಿ ಪೂಜಾ-ಪ್ರಸಾದ, ಬಸವನಕೋಗು ದೇವಸ್ಥಾನ ಆವರಣದಲ್ಲಿ ಕೆಂಡಾರ್ಚನೆ ಹಾಗೂ ಸಂಜೆ ಶಿವಾದ್ವೈತ ಧರ್ಮ ಪರಿಷತ್ತು ಸಮಾರಂಭದ ನೇತೃತ್ವವನ್ನು ಸೂಡಿ ಜುಕ್ತಿ ಹಿರೇಮಠದ ಡಾ|ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಅಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ನುಡಿ ತೋರಣ, ಮುಖ್ಯ ಅಥಿತಿಗಳಾಗಿ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ.ಪಾಟೀಲ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಹಿಳಾ ಸಮಾಜದ ಅಧ್ಯಕ್ಷೆ ಗೌರಮ್ಮ ಬಸವೇಗೌಡ, ಕಾμ ಬೆಳೆಗಾರ ಎಚ್‌ .ಬಿ.ರಾಜಗೋಪಾಲ್‌ ಪಾಲ್ಗೊàಳ್ಳಲಿದ್ದಾರೆ. ಗುಂಡೇಹಳ್ಳಿ ನಾಗಭೂಷಣ ಜಗದೀಶ ಬಣಕಾರ ಅವರಿಂದ ಯೋಗಾಸನ ಪ್ರದರ್ಶನ ಜರುಗಲಿದೆ.

ಮಾ.9ರ ಸೋಮವಾರ ವಸಂತೋತ್ಸವ ಹಾಗೂ ಸಂಜೆ ಶಿವಾದ್ವೈತ ಧರ್ಮ ಪರಿಷತ್‌ ಸಮಾರಂಭದ ನೇತೃತ್ವವನ್ನು ಎಸಳೂರು ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಬೆಂಗಳೂರು ವಿಭೂತಿಪುರಮಠದ ಡಾ| ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಂದ ನುಡಿ ತೋರಣ, ಹಲಗೂರು ಬೃಹನ್ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಬೆಳಕಿನ ನುಡಿ, ಮುಖ್ಯ ಅತಿಥಿಗಳಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಶೃಂಗೇರಿ ಮಾಜಿ ಶಾಸಕ ಡಿ.ಎನ್‌.ಜೀವರಾಜ್‌, ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಎಂ.ಎಸ್‌.ಚೆನ್ನಕೇಶವ ಪಾಲ್ಗೊಳ್ಳಲಿದ್ದಾರೆ.

ಮಾ.10 ಮಂಗಳವಾರ ಭದ್ರಾನದಿ ತೀರದಲ್ಲಿ ಸುರಗಿ ಸಮಾರಾಧನೆಯೊಂದಿಗೆ 2020ರ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ರಾಜ್ಯಾದ್ಯಂತ ವಿವಿಧೆಡೆಯಿಂದ ಸಕಲ ಭಕ್ತರು ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.