ಬೆಲೆ ಏರಿಕೆಯಲ್ಲಿ ಭಾರತ ವಿಶ್ವ ದಾಖಲೆ

Team Udayavani, Jul 8, 2021, 10:33 PM IST

8-18

ಬಳ್ಳಾರಿ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆಯಲ್ಲಿ ಭಾರತ ವಿಶ್ವ ದಾಖಲೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 70 ರೂಗಳಿಗೆ ಇಳಿಕೆಯಾಗಿದ್ದರೂ, ಕೋವಿಡ್‌ ಸೋಂಕು ಸಂಕಷ್ಟದ ನಡುವೆಯೂ ಕಳೆದ ಎರಡು ತಿಂಗಳಲ್ಲಿ 33 ಬಾರಿ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ದರಗಳನ್ನು ಏರಿಕೆ ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಬಡ ಜನರಿಗೆ ಶಾಪವಾಗಿ ಪರಿಣಮಿಸಿದೆ. ಹಿಂದೆ ಯುಪಿಎ ಅವಧಿಯಲ್ಲಿ ತೈಲ ಬೆಲೆ ಏರಿಕೆ ವಿರೋಧಿ ಸಿದ್ದ ಬಿಜೆಪಿಯವರೇ ಇಂದು ಅವರೇ ತೈಲ ಬೆಲೆಯನ್ನು 100 ರೂಗಳಿಗೆ ಏರಿಕೆ ಮಾಡುವ ಮೂಲಕ ಬಡವರ ರಕ್ತವನ್ನು ಹೀರುತ್ತಿದ್ದಾರೆ ಎಂದು ಆರೋಪಿಸಿದರು.

ಯುಪಿಎ ಅವ ಧಿಯಲ್ಲಿ ಅಬಕಾರಿ ಸುಂಕ, ವ್ಯಾಟ್‌ನ್ನು ಕಡಿಮೆ ವಿಧಿಸಲಾಗಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಅಬಕಾರಿ ಸುಂಕವನ್ನು 26 ರೂ. ವಿಧಿ ಸುತ್ತಿದ್ದು, ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಹಣ ಸಂಗ್ರಹ ಮಾಡಿದೆ. ಇನ್ನು ಉಜ್ವಲ ಯೋಜನೆಯಡಿ ಪ್ರತಿ ಮನೆಗೂ ಅನಿಲ ಸೌಲಭ್ಯ ಕಲ್ಪಿಸಿದ ಕೇಂದ್ರ ಬಿಜೆಪಿ ಸರ್ಕಾರ ಇದೀಗ ಅನಿಲ ದರವನ್ನೂ ಏರಿಕೆ ಮಾಡಿ, ಸಬ್ಸಿಡಿಯನ್ನು ಕಡಿತಗೊಳಿಸಿದೆ. ಪರಿಣಾಮ ಅನಿಲ ಖರೀದಿಸಲಾಗದ ಬಡಜನರು ಪುನಃ ಕಟ್ಟಿಗೆ (ಸೌದೆ)ಯ ಮೊರೆ ಹೋಗುತ್ತಿದ್ದಾರೆ.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲೂ ಕುಸಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜಿಎಸ್‌ಟಿ, ನೋಟು ಅಮಾನ್ಯಿàಕರಣಗಳಂಥ ಹುಚ್ಚು ನಿರ್ಣಯಗಳಿಂದ ದೇಶದಲ್ಲಿ ಆರ್ಥಿಕತೆ, ಜಿಡಿಪಿ ಏರಿಕೆಯಾಗುತ್ತಿಲ್ಲ. ಕೇವಲ ಉದ್ಯಮಿಗಳ ಪರವಾದ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಕೆ ಮಾಡಲೇಬೇಕು ಎಂಬ ಉದ್ದೇಶದಿಂದ ಜುಲೈ 7ರಿಂದ 17ರ ವರೆಗೆ ಹೋಬಳಿ, ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲೂ ಸೇರಿ ಅಧಿವೇಶನ ಒಳಗೂ, ಹೊರಗೂ ಹೋರಾಟ ನಡೆಸಲಾಗುವುದು ಎಂದರು.

ಡೆತ್‌ ಆಡಿಟ್‌ ಆಗಬೇಕು: ಕೋವಿಡ್‌ ಎರಡನೇ ಅಲೆ ಆವರಿಸುವ ಕುರಿತು ತಜ್ಞರ ಸಮಿತಿ ಮುನ್ಸೂಚನೆ ನೀಡಿದ್ದರೂ ನಿರ್ಲಕ್ಷéವಹಿಸಿದ ರಾಜ್ಯ ಸರ್ಕಾರ, ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಜನರ ಮಾರಣ ಹೋಮಕ್ಕೆ ಕಾರಣವಾಗಿದೆ. ಕೋವಿಡ್‌ ಸೋಂಕಿನ ಸಾವಿನಲ್ಲೂ ಸುಳ್ಳು ಲೆಕ್ಕ ತೋರಿಸುತ್ತಿದೆ. ದೇಶದಲ್ಲಿ 20-25 ಲಕ್ಷ ಜನರು ಸೋಂಕಿಗೆ ಬಲಿಯಾಗಿದ್ದರೂ ಕೇವಲ 4 ಲಕ್ಷ ಜನರ ಸಾವಿನ ಸುಳ್ಳು ಲೆಕ್ಕವನ್ನು ಮಾತ್ರ ತೋರಿಸಲಾಗುತ್ತಿದೆ. ರಾಜ್ಯದಲ್ಲೂ ಇದೇ ಸುಳ್ಳು ಲೆಕ್ಕದ ಪರಿಸ್ಥಿತಿ ಇದೆ. ಹಾಗಾಗಿ ಡೆತ್‌ ಆಡಿಟ್‌ ಆಗಬೇಕು ಎಂದು ಒತ್ತಾಯಿಸಿದರು.

ಕೋವಿಡ್‌ ಸಾವಿನ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು. ಕಳ್ಳಲೆಕ್ಕ ಬೇಡ, ಅದಕ್ಕಾಗಿ ನಮ್ಮಪಕ್ಷದ ಕಾರ್ಯಕರ್ತರು, ದೇಶದಾದ್ಯಾಂತ 7500 ಪಟ್ಟಣ, 7200 ಬ್ಲಾಕ್‌ಗಳಿಂದ ಕೋವಿಡ್‌ ಡೆತ್‌ ಆದ ಕುಟುಂಬಗಳ ಮನೆ ಮನೆಗೆ ಭೇಟಿ ನೀಡಿ ಸಾವಿಗೆ ಕಾರಣ ಏನು, ವೆಚ್ಚ ಎಷ್ಟಾಗಿದೆ, ಪರಿಹಾರ ದೊರೆತಿದೆಯಾ ಎಂಬ ಇತ್ಯಾದಿ ಮಾಹಿತಿಗಳನ್ನು ಕಲೆ ಹಾಕಿ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ ಅಧಿಕಾರ ತಪ್ಪಿಸುವ ಕಾರಣಕ್ಕಾಗಿ ಮೇಯರ್‌-ಉಪ ಮೇಯರ್‌ ಚುನಾವಣೆ ಮುಂದೂಡುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಆರೋಪಿಸಿದರು.

ಭಿನ್ನಾಭಿಪ್ರಾಯ ಸಹಜ: ಇದೇ ವೇಳೆ ಮುಂದಿನ ಮುಖ್ಯಮಂತ್ರಿ ಕುರಿತ ಚರ್ಚೆ ಅಪ್ರಸ್ತುತ ಎಂದ ಈಶ್ವರಖಂಡ್ರೆ, ಕುಟುಂಬದಲ್ಲಿ ಅಣ್ಣತಮ್ಮಂದಿರು ಎಂದಾಕ್ಷಣ ಭಿನ್ನಾಭಿಪ್ರಾಯ ಸಹಜ. ಹಾಗಂತ ಅದನ್ನೇ ಮುಂದಿಟ್ಟುಕೊಂಡು ಮಾಧ್ಯಮಗಳು ಬಿತ್ತರಿಸುವುದು ಒಳ್ಳೆಯದಲ್ಲ. 130 ವರ್ಷಗಳ ಹಿನ್ನೆಲೆಯುಳ್ಳ ಕಾಂಗ್ರೆಸ್‌ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ಬಸವನಗೌಡ ಪಾಟೀಲ್‌ ಯತ್ನಾಳ್‌ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಮಾಜಿ ಸಂಸದ ಶಿವರಾಮೆಗೌಡ, ಮಾಜಿ ಶಾಸಕರಾದ ಬಿ.ಎಂ. ನಾಗರಾಜ್‌, ಕೆ.ಎಸ್‌.ಎಲ್‌.ಸ್ವಾಮಿ, ಜಿಪಂ ಸದಸ್ಯರಾದ ಅಲ್ಲಂ ಪ್ರಶಾಂತ್‌, ನಾರಾ ಭರತ್‌ ರೆಡ್ಡಿ, ಜಿಲ್ಲಾಧ್ಯಕ್ಷ ಜಿ.ಎಸ್‌. ಮೊಹಮ್ಮದ್‌ ರಕ್‌, ಬಿ.ರಾಂಪ್ರಸಾದ್‌, ಬೆಣಕಲ್‌ ಬಸವರಾಜಗೌಡ, ಕಮಲಾ ಮರಿಸ್ವಾಮಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.