ಬಸವೇಶ್ವರ ಸ್ವಾಮಿ ರಥೋತ್ಸವ


Team Udayavani, Mar 12, 2019, 9:59 AM IST

dvg-2.jpg

ಮಲೇಬೆನ್ನೂರು: ಪಟ್ಟಣದ ಬಸವೇಶ್ವರ ದೇವರ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಡಗರ, ಸಂಭ್ರಮದಿಂದ ನೆರವೇರಿತು.

ಶ್ರೀ ಬೀರಲಿಂಗೇಶ್ವರ ಸ್ವಾಮಿ, ಶ್ರೀ ಕೋಡಿ ಮಾರಮ್ಮ, ಶ್ರೀ ಏಕನಾಥೇಶ್ವರಿ ದೇವಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ಬಸವೇಶ್ವರ ದೇವರುಗಳು ರಥದ ಸುತ್ತಾ ಪ್ರದಕ್ಷಿಣೆ ಹಾಕಿದವು. ನಂತರ ಹಿರಿಯರು ರಥಕ್ಕೆ ಪೂಜೆ ಸಲ್ಲಿಸಿ ರಥದ ಗಾಲಿಗೆ ತೆಂಗಿನಕಾಯಿ ಒಡೆಯುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು, ಮೆಣಸಿನಕಾಳುಗಳನ್ನು ಎಸೆದು ಭಕ್ತಿ
ಸಮರ್ಪಿಸಿದರು. ಮೆರವಣಿಗೆಯಲ್ಲಿ ಕೀಲುಕುದುರೆ, ಭಜನಾ ಮೇಳ, ಝಾಂಜ್‌, ಕುದುರೆ ಕುಣಿತ, ಹಲಗೆ ಮತ್ತು ಡೊಳ್ಳು ತಂಡಗಳು ಪಾಲ್ಗೊಂಡಿದ್ದವು. ರಥೋತ್ಸವದ ಪ್ರಯುಕ್ತ ಜಾತ್ರಾ ಅಂಗಡಿಗಳು ಇದ್ದವು. ಪೊಲೀಸರು ಭದ್ರತೆ ಒದಗಿಸಿದ್ದರು. 

ಹರಿಹರ -ಹೊನ್ನಾಳಿ ಮುಖ್ಯ ರಸ್ತೆಯನ್ನು ರಥೋತ್ಸವ ಮುಗಿಯುವವರೆಗೆ ಬಂದ್‌ ಮಾಡಲಾಗಿತ್ತು. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಪ್ರಾರಂಭದಲ್ಲಿ ಶ್ರೀ ಬೀರಲಿಂಗೇಶ್ವರ ಕಾರ್ಣಿಕ ನಡೆಯಿತು. ಆವಾಹಿತನು ಬಿಲ್ಲನ್ನು ಏರಿ ಸದ್ದು ಎಂದು “ಬಂಗಾರದ ಕಳಸ ಬಿರಿ ಬಿಟ್ಟಿತಲೆ ಅದಕ್ಕೆ ನಾನಿದೀನಿ’ ಎಂದು ಕಾರ್ಣಿಕ ನುಡಿದನು. 

ಶ್ರೀಗುರು ಸಿದ್ದೇಶ್ವರ ಸ್ವಾಮಿ ರಥೋತ್ಸವ 
ಜಗಳೂರು: ತಾಲೂಕಿನ ಬಿದರಕರೆ ಗ್ರಾಮದ ಶ್ರೀಗುರು ಸಿದ್ದೇಶ್ವರ ಸ್ವಾಮಿ ದೊಡ್ಡ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಸೋಮವಾರ ಸಂಜೆ ಶ್ರೀಗುರು ಸಿದ್ದೇಶ್ವರ ದೊಡ್ಡಸ್ವಾಮಿ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ನಂತರ ಪೂಜಾರಿ ತೇರಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ದೇವರನ್ನು ಸ್ಮರಿಸುತ್ತ ರಥವನ್ನು ಎಳೆದರು. ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಹಿಸಿದ್ದರು. ಮಾಜಿ ಶಾಸಕ ಎಚ್‌.ಪಿ ರಾಜೇಶ್‌, ತಾಪಂ ಸದಸ್ಯ ಬಸವರಾಜ್‌, ಮುಖಂಡರಾದ ಸತೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.