ಪಠ್ಯದಿಂದ ಭಗತ್ ಸಿಂಗ್ ಪಾಠ ಕೈಬಿಟ್ಟಿದಕ್ಕೆ ಆಕ್ರೋಶ
ರಾಜ್ಯ ಸರ್ಕಾರ ಪಠ್ಯಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದ್ದು ಸರಿಯಲ್ಲ: ಅನಂತರಾಜ
Team Udayavani, May 25, 2022, 3:21 PM IST
ಜಗಳೂರು: ಪಠ್ಯಪುಸ್ತಕಗಳಲ್ಲಿ ಭಗತ್ ಸಿಂಗ್, ನಾರಾಯಣಗುರು, ಪೆರಿಯಾರ್ ಹಾಗೂ ಪ್ರಗತಿಪರ ಪಠ್ಯ ಕೈಬಿಟ್ಟು ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಕೋಮುವಾದಿ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಎಸ್‌ಎಫ್‌ಐ ತಾಲೂಕು ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಹಾಗೂ ರಾಜ್ಯ ಸಮಿತಿ ಸದಸ್ಯ ಅನಂತರಾಜ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ನೂತನ ಶಿಕ್ಷಣ ನೀತಿಯ ಜಾರಿಗೆ ಮುಂದಾಗಿದ್ದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚಿಸಿದೆ. ಈ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಆರ್‌ಎಸ್‌ಎಸ್ ಹಿನ್ನೆಲೆಯುಳ್ಳವರು. ಇದರ ಪರಿಣಾಮವಾಗಿ ಈ ಸಮಿತಿ ಶಿಫಾರಸು ಮಾಡಿರುವ ಪಠ್ಯಕ್ರಮದಲ್ಲಿ ಈ ಮೊದಲಿದ್ದ ಹತ್ತನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ದೇಶಪ್ರೇಮಿ ಭಗತ್ ಸಿಂಗ್ ಮತ್ತು ಸಮಾಜ ವಿಜ್ಞಾನದಲ್ಲಿ ಸಾಮಾಜಿಕ ಸುಧಾರಕ ಶ್ರೀ ನಾರಾಯಣಗುರು, ಪೆರಿಯಾರ್ ರವರ ಕುರಿತ ಪಾಠ ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಗತಿಪರ, ವೈಚಾರಿಕತೆ, ಜಾತ್ಯತೀತ ಮೌಲ್ಯಗಳನ್ನು ಬೆಳೆಸಲು ಪೂರಕವಾಗಿದ್ದ ಅನೇಕ ಪಾಠಗಳನ್ನು ಕೈ ಬಿಡಲಾಗಿದೆ. ಬದಲಿಗೆ ಸಂಘ ಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ, ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಲಾಗಿದೆ. ನಾಡಿನ ಮಕ್ಕಳು ಓದುವ ಪಠ್ಯಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಆಂಜಿನಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.