ಅವೈಜ್ಞಾನಿಕ ಪರೀಕ್ಷಾ ಪದ್ಧತಿ ರದ್ದತಿಗೆ ಆಗ್ರಹಿಸಿ ಬೈಕ್ ರ್ಯಾಲಿ
Team Udayavani, Mar 1, 2019, 10:10 AM IST
ದಾವಣಗೆರೆ: ಅವೈಜ್ಞಾನಿಕ ಪರೀಕ್ಷಾ ಪದ್ಧತಿಯನ್ನ ದಾವಣಗೆರೆ ವಿಶ್ವವಿದ್ಯಾಲಯ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ(ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೈಕ್ ರ್ಯಾಲಿ ನಡೆಸಿದರು.
ದಾವಣಗೆರೆ ವಿಶ್ವವಿದ್ಯಾಲಯಯ ಜಾರಿಗೊಳಿಸಿರುವ ಸರಿ-ಬೆಸ ಸೆಮಿಸ್ಟರ್ ಪದ್ಧತಿಯಿಂದ ವಿದ್ಯಾರ್ಥಿ ಸಮುದಾಯಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ. ಈಗಿನ ನಿಯಮದಂತೆ ಪ್ರಥಮ ಸೆಮಿಸ್ಟರ್‌ನಲ್ಲಿ ಫೇಲಾದವರು 2ನೇ ಸೆಮಿಸ್ಟರ್‌ನಲ್ಲಿ ಮರು ಪರೀಕ್ಷೆ ಬರೆಯುವಂತಿಲ್ಲ. 3ನೇ ಸೆಮಿಸ್ಟರ್‌ನಲ್ಲಿ ಬರೆಯಬೇಕು. ಇಂತಹ ಅವೈಜ್ಞಾನಿಕ ಪದ್ಧತಿಯನ್ನು ಈ ಕೂಡಲೇ ರದ್ದುಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ದಾವಣಗೆರೆ ವಿಶ್ವವಿದ್ಯಾಲಯ ಸೆಮಿಸ್ಟರ್ ಅಂಕಪಟ್ಟಿ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳಿಗೆ ಆಗುವ ತೊಂದರೆ ನಿವಾರಿಸುವ ಹಿನ್ನೆಲೆಯಲ್ಲಿ ಸಕಾಲದಲ್ಲಿ ಅಂಕಪಟ್ಟಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಪಾಷಾ, ಶಶಿಧರ್ ಪಾಟೀಲ್, ಎಚ್.ಎಂ. ಮನೋಜ್‌ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.