ನಾಡೋಜ ಚಿದಾನಂದ ಮೂರ್ತಿ ಹುಟ್ಟೂರಿನಲ್ಲಿ ನೀರವ ಮೌನ
Team Udayavani, Jan 11, 2020, 4:12 PM IST
ದಾವಣಗೆರೆ: ಹಿರಿಯ ಸಂಶೋಧಕ ಹಾಗೂ ಸಾಹಿತಿ ಡಾ. ಚಿದಾನಂದ ಮೂರ್ತಿಯವರ ನಿಧನದ ಸುದ್ದಿ ತಿಳಿದ ‘ಚಿಮೂ’ರವರ ಸ್ವಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದಲ್ಲೀಗ ನೀರವ ಮೌನ ಆವರಿಸಿದೆ.
ಚಿದಾನಂದ ಮೂರ್ತಿಯವರು ಹುಟ್ಟಿದ್ದು ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ 1931ರ ಮೇ 10ರಂದು. ಅವರ ತಂದೆ ಕೊಟ್ಟೂರಯ್ಯ ಹಾಗೂ ತಾಯಿ ಪಾರ್ವತಮ್ಮ. ತಂದೆ ಶಿಕ್ಷಕರಾಗಿದ್ದವರು. ಮನೆಯೇ ಮೊದಲ ಪಾಠ ಶಾಲೆಯಾಗಿತ್ತು. ಬಾಲ್ಯದ ಶಿಕ್ಷಣ ಹಿರೇಕೋಗಲೂರು ಹಾಗೂ ಸಂತೆಬೆನ್ನೂರಿನಲ್ಲಿ ಪೂರೈಸಿದ ಅವರು ನಂತರದ ದಿನಗಳಲ್ಲಿ ದಾವಣಗೆರೆಯ ಜಯದೇವ ಹಾಸ್ಟೆಲ್ ನಲ್ಲಿದ್ದುಕೊಂಡು ತಮ್ಮ ವಿದ್ಯಾಭ್ಯಾಸ ನಡೆಸಿದ್ದರು. ಮುಂದೆ ಉನ್ನತ ಶಿಕ್ಷಣಕ್ಕಾಗಿ ಮೈಸೂರಿಗೆ ತೆರಳಿ ತಮ್ಮ ವಿದ್ಯಾಭ್ಯಾಸ ಮುಂದುವರೆಸಿದರು.ಸತತ 40 ವರ್ಷಗಳಿಂದಲೂ ಕನ್ನಡಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡವರು.
ಸಂಶೋಧನೆಗಳಿಂದ ಹೆಸರಾದವರು
ಕನ್ನಡ ಶಕ್ತಿ ಕೇಂದ್ರದ ಮೂಲಕ ಕನ್ನಡಿಗರನ್ನು ಸಂಘಟಿತರನ್ನಾಗಿಸುವ ಕೆಲಸ ಮಾಡಿದವರು. ಇತಿಹಾಸ ಸಂಶೋಧನೆಯ ಪುಸ್ತಕಗಳನ್ನು ಬರೆದಿರುವ ಚಿದಾನಂದ ಮೂರ್ತಿಯವರದು ಬದ್ದತೆ, ಚಿಂತನೆಯ ವ್ಯಕ್ತಿತ್ವ. ಅವರ ಹುಟ್ಟೂರಾದ ಹಿರೇಕೋಗಲೂರಿನಲ್ಲಿ ಅವರ ಹೆಸರಿನಲ್ಲಿ ಪ್ರತಿಷ್ಠಾನವಿದೆ. ಸುಮಾರು 4 ಲಕ್ಷ ರೂಗಳನ್ನು ಬ್ಯಾಂಕಿನಲ್ಲಿರಿಸಿ ಅದನ್ನು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದರು.
ಇದಲ್ಲದೆ ಹಿರೇಕೋಗಲೂರಿನಲ್ಲಿ ಚಿಮೂ ಹೆಸರಿನಲ್ಲಿ ಸಾಂಸ್ಕೃತಿಕ ಭವನವಿದ್ದು ಅನೇಕ ಸಾಹಿತ್ಯಪರ ಚಟುವಟಿಕೆಗಳು ನಡೆಯುತ್ತಾ ಬಂದಿವೆ. ಹಿರೇಕೋಗಲೂರು ಗ್ರಾಮದ ಅವರ ಒಡನಾಡಿಗಳು ಹಾಗೂ ಹಿರಿಯ ಪತ್ರಕರ್ತ ಚಿಕ್ಕೋಳ್ ಈಶ್ವರಪ್ಪ ಅವರ ಬಾಲ್ಯದ ದಿನಗಳು ಹಾಗೂ ಗ್ರಾಮದೊಂದಿಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಅವರ ಹುಟ್ಟೂರಿನಲ್ಲೇ ಅಂತ್ಯಕ್ರಿಯೆ ನಡೆಸಬೇಕೆಂದು ಕುಟುಂಬದವರಲ್ಲಿ ಮನವಿ ಮಾಡಿದ್ದಾರೆ. ಗ್ರಾಮಸ್ಥರು ಸಹ ಚಿದಾನಂದ ಮೂರ್ತಿಯವರ ಆತ್ಮಕ್ಕೆ ಶಾಂತಿಕೋರಿ ಅವರಿಗೆ ಶ್ರದ್ದಾಂಜಲಿ ಅರ್ಪಿಸಿದ್ದಾರೆ. ಹುಟ್ಟಿಬೆಳೆದ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಸಬೇಕು ಹಾಗೂ ಗ್ರಾಮದಲ್ಲೇ ಸ್ಮಾರಕ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಅಲ್ಲದೆ ಇದೇ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಚಿದಾನಂದ ಮೂರ್ತಿ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಭಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಅಲ್ಲದೆ ಸಾಂಸ್ಕೃತಿಕ ಭವನದ ಮುಂದಿರುವ ರಸ್ತೆಗೆ ಚಿದಾನಂದ ಮೂರ್ತಿಯವರ ಹೆಸರನ್ನು ಇಡಲಾಗುವುದು ಹಾಗೂ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.