ರೆಡ್ಡಿ ಹೊಸ ಪಕ್ಷದಿಂದ ಬಿಜೆಪಿಗೆ ನಷ್ಟವಿಲ್ಲ: ರೇಣುಕಾಚಾರ್ಯ
Team Udayavani, Dec 25, 2022, 11:53 PM IST
ಹೊನ್ನಾಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಅವರಿಗೆ ನಷ್ಟವೇ ಹೊರತು ಬಿಜೆಪಿಗಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರೆಡ್ಡಿಯವರಿಗೆ ಎಲ್ಲವನ್ನೂ ನೀಡಿದೆ. ಹಾಗಾಗಿ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಲ್ಲಿ ಇದ್ದರೆ ಮಾತ್ರ ಅವರಿಗೆ ಶಕ್ತಿ ಬರುತ್ತದೆ. ಅದನ್ನು ಬಿಟ್ಟು ಹೊಸ ಪಕ್ಷ ಕಟ್ಟುವುದರಿಂದ ಅವರ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದರು.
ಇಂತಹ ನೂರು ಜನ ಪಕ್ಷ ಕಟ್ಟಿದರೂ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ರೆಡ್ಡಿ ಭ್ರಮಾಲೋಕದಲ್ಲಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಅವರನ್ನು ಬಂಧಿಸಿದ್ದು ಸಿಬಿಐನವರು. ಅವರ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದು ಕಾಂಗ್ರೆಸ್ ಮುಖಂಡರು. ರೆಡ್ಡಿ ಮೊದಲು ಆರೋಪ ಮುಕ್ತರಾಗಿ ಬಂದು ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಮನವಿ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.