ಸಚಿವ ರಮಾನಾಥ ರೈ ವಜಾಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
Team Udayavani, Aug 18, 2017, 10:10 AM IST
ದಾವಣಗೆರೆ: ರಾಷ್ಟ್ರವಿರೋಧಿ ಚಟುವಟಿಕೆಯ ಆರೋಪ ಎದುರಿಸುತ್ತಿರುವ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ನಿಷೇಧ ಹಾಗೂ ಅಂತಹ ಸಂಘಟನೆಗಳಿಗೆ ಕುಮ್ಮುಕ್ಕು ನೀಡುತ್ತಿರುವ ರಮಾನಾಥ ರೈ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಉಪ ವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ.
ಮಹಾನಗರ ಪಾಲಿಕೆ ಆವರಣದಿಂದ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿದ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕದಲ್ಲಿ ಕಳೆದ 2 ವರ್ಷದಲ್ಲಿ ಹಿಂದೂ ಪರ ಸಂಘಟನೆಯ 20ಕ್ಕೂ ಹೆಚ್ಚು ಕಾರ್ಯಕರ್ತರ ಕೊಲೆ
ನಡೆದಿವೆ. ಬೆಂಗಳೂರಿನಲ್ಲಿ ಸಂಘ ಪರಿವಾರದ ಮುಖಂಡ ರುದ್ರೇಶ್, ಬಂಟ್ವಾಳದ ಶರತ್ ಮಡಿವಾಳ ಕೊಲೆಯಲ್ಲಿ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರ ನೇರ ಕೈವಾಡ ಇರುವುದು ಹಾಗೂ ಕೆಲವರು ಬಂಧಿತರಾಗಿರುವುದು ಸಂಘಟನೆಗಳ ರಾಷ್ಟ್ರವಿರೋಧಿ ಚಟುವಟಿಕೆಗೆ ಸಾಕ್ಷಿ.
ರಾಜ್ಯ ಸರ್ಕಾರ ತಕ್ಷಣಕ್ಕೆ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ನಿಷೇಧಿಸಬೇಕೆಂದು ಎಂದು ಧರಣಿನಿರತರು ಒತ್ತಾಯಿಸಿದರು.
ರಾಷ್ಟ್ರವಿರೋಧಿ ಚಟುವಟಿಕೆ ನಡೆಸುತ್ತಿದ್ದ ಕಾರಣಕ್ಕೆ ನಿಷೇಧಗೊಂಡಿರುವ ಸಿಮಿ ಸಂಘಟನೆಯ ಪ್ರತಿರೂಪವಾಗಿ ಅಸ್ತಿತ್ವಕ್ಕೆ ಬಂದಿರುವ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಕಾರ್ಯಚಟುವಟಿಕೆಗೆ ಕೇರಳ ಮೂಲ. ಎರಡು ಸಂಘಟನೆಗಳ ಕಾರ್ಯಕರ್ತರು ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರನ್ನೇ ಗುರಿಯಾಗಿಟ್ಟುಕೊಂಡು ಹತ್ಯೆ ನಡೆಸುತ್ತಿವೆ. ರಾಜ್ಯ ಸರ್ಕಾರಕ್ಕೆ ಸಂಘಟನೆಗಳ ರಾಷ್ಟ್ರವಿರೋಧಿ ಚಟುವಟಿಕೆ ಬಗ್ಗೆ ಮಾಹಿತಿ ಇದೆ.
ಆದರೆ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕಾರಣಕ್ಕೆ ಗೊತ್ತಿದ್ದರೂ ಗೊತ್ತಿಲ್ಲದಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಚೆಗ ಬಂಟ್ವಾಳದಲ್ಲಿ ನಡೆದ ಶರತ್ ಮಡಿವಾಳ ಕೊಲೆಯಲ್ಲಿ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಪಾತ್ರ ಇದೆ ಎಂದು ಹಿಂದೂ ಪರ ಸಂಘಟನೆಗಳು ಹೋರಾಟ ನಡೆಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಪರ ನಿಂತುಕೊಂಡು ಸಂಘಟನೆಗಳ
ಪಾತ್ರವೇ ಇಲ್ಲ ಎಂದು ಬಲವಾಗಿ ಸಮರ್ಥಿಸಿಕೊಂಡಿದ್ದರು. ಈಚೆಗೆ ಶರತ್ ಕೊಲೆಗೆ ಸಂಬಂಧಿಸಿದಂತೆ ಪಿಎಫ್‌ಐ ಮುಖಂಡರು, ಕಾರ್ಯಕರ್ತರ ಬಂಧನವಾಗಿದೆ. ರಾಷ್ಟ್ರವಿರೋಧಿ ಚಟುವಟಿಕೆಯಲ್ಲಿ ನಿರತವಾಗಿರುವ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಪರ ನಿಂತಿದ್ದ ಸಚಿವ ರಮಾನಾಥ ರೈ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವೇ ಸಿಎಂ ಸಿದ್ದರಾಮಯ್ಯನವರು ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
2008ರ ನಂತರ ರಾಜ್ಯದಲ್ಲಿ ನಡೆದಿರುವ ಹಿಂದೂ ಸಂಘಟನೆಗಳ ಎಲ್ಲ ಮುಖಂಡರ, ಕಾರ್ಯಕರ್ತರು ಹಲ್ಲೆ, ಹತ್ಯೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು. ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಬ್ಯಾಂಕ್ ಖಾತೆ, ಚರ, ಸ್ಥಿರಾಸ್ತಿಯನ್ನು ಮುಟ್ಟುಗೋಲು
ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ಎಚ್.ಎನ್. ಶಿವಕುಮಾರ್, ನಗರಪಾಲಿಕೆ ಸದಸ್ಯ ಡಿ.ಎನ್. ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್, ಎನ್. ರಾಜಶೇಖರ್, ರಾಜನಹಳ್ಳಿ ಶಿವಕುಮಾರ್, ಶಿವನಗೌಡ ಪಾಟೀಲ್, ಸರೋಜಾ ದೀಕ್ಷಿತ್, ದೇವಿರಮ್ಮ, ಪ್ರಭು ಕಲುºರ್ಗಿ, ಸೋಗಿ ಶಾಂತಕುಮಾರ್,ಅಣಬೇರು ಶಿವಪ್ರಕಾಶ್, ಟಿಂಕರ್ ಮಂಜಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.