ಶರತ್ ಪ್ರಕರಣ ಎನ್‌ಐಐಗೆ ಒಪ್ಪಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Team Udayavani, Jul 20, 2017, 9:50 AM IST
ದಾವಣಗೆರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳರ ಹತ್ಯೆ, ಕಾರಾಗೃಹ ಇಲಾಖೆ ಡಿಐಜಿ ಡಿ. ರೂಪಾ ವರ್ಗಾವಣೆ ಖಂಡಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.
ಪಕ್ಷದ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅನೇಕ ಕಡೆ ರಾಜಕೀಯ ಪ್ರೇರಿತ ಕಗ್ಗೊಲೆಗಳಾಗುತ್ತಿವೆ. ಹಿಂದೂ ಸಮುದಾಯದವರನ್ನೇ ಗುರಿಯಾಗಿಟ್ಟುಕೊಂಡು ಈ ಕೃತ್ಯ ಎಸಗಲಾಗುತ್ತಿದೆ.
ಏನೆಲ್ಲಾ ಅನಾಹುತ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ದಿಟ್ಟ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈಚೆಗೆ ಬಂಟ್ವಾಳದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿದಂತೆ ಈ ಕ್ಷಣಕ್ಕೂ ಯಾರೊಬ್ಬ ಆರೋಪಿತರನ್ನು ಬಂಧಿಸದೇ ಇರುವುದು ಕಾಂಗ್ರೆಸ್ ಸರ್ಕಾರದ ರಾಜಕೀಯ ಉದ್ದೇಶ ಸ್ಪಷ್ಟವಾಗುತ್ತಿದೆ. ಮತ ಬ್ಯಾಂಕ್‌ಗಾಗಿ ಓಲೈಕೆ ರಾಜಕಾರಣ ಮಾಡುವುದರಲ್ಲಿ ನಿರತವಾಗಿರುವ ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳರ
ಹತ್ಯೆ ಪ್ರಕರಣವನ್ನು ಗಂಭೀರವಾಗಿ ನಡೆಸುತ್ತದೆ ಎಂಬ ವಿಶ್ವಾಸವೇ ಇಲ್ಲ. ಹಾಗಾಗಿ ಶರತ್ ಮಡಿವಾಳ ಹತ್ಯೆರ ಪ್ರಕರಣವನ್ನ
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಐ)ಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳೇ ಸಾವನ್ನಪ್ಪಿರುವುದು ದುರಾಡಳಿತದ ಪ್ರತೀಕ. ಡಿ.ಕೆ. ರವಿ, ಎಂ.ಕೆ. ಗಣಪತಿ ಪ್ರಕರಣ ನಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ ಭ್ರಷ್ಟಾಚಾರ,
ಅವ್ಯವಹಾರ ಬಯಲಿಗೆಳೆದ ಕಾರಣಕ್ಕೆ ಕಾರಾಗೃಹ ಇಲಾಖೆ ಡಿಐಜಿ ಡಿ. ರೂಪಾ ಅವರ ವರ್ಗಾವಣೆ ಮಾಡಲಾಗಿದೆ. ಅನುಕೂಲಕ್ಕೆ ತಕ್ಕಂತೆ ನಡೆಯದ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಸಹಿಸುವುದಿಲ್ಲ ಎನ್ನುವುದಕ್ಕೆ ರೂಪಾ ವರ್ಗಾವಣೆಯೇ ಜೀವಂತ ಸಾಕ್ಷಿ.
ಕೂಡಲೇ ರೂಪಾ ವರ್ಗಾವಣೆ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ನಗರಪಾಲಿಕೆ ಸದಸ್ಯ ಡಿ.ಎನ್. ಕುಮಾರ್, ಎಚ್. ಎನ್. ಶಿವಕುಮಾರ್, ಪಿ.ಸಿ. ಶ್ರೀನಿವಾಸ್, ಎಚ್.ಸಿ. ಜಯಮ್ಮ, ಸಂಕೋಳ್ ಚಂದ್ರಶೇಖರ್, ಎನ್. ರಾಜಶೇಖರ್, ಎಚ್. ಆನಂದಪ್ಪ, ಪ್ರಭು ಕಲುºರ್ಗಿ,
ರಮೇಶ್‌ನಾಯ್ಕ, ರಾಜನಹಳ್ಳಿ ಶಿವಕುಮಾರ್, ಸೋಗಿ ಶಾಂತಕುಮಾರ್, ಟಿಂಕರ್ ಮಂಜಣ್ಣ, ಶಿವನಗೌಡ ಪಾಟೀಲ್, ಧನುಶ್‌ರೆಡ್ಡಿ, ನರೇಶ್, ಸರೋಜಾ ದಿಕೀತ್, ದೇವಿರಮ್ಮ ರಾಮಚಂದ್ರನಾಯ್ಕ, ದೇವನಗರಿ ಎಂ. ಮನು, ವೀರೇಶ್ ಪೈಲ್ವಾನ್, ಬಾಲರಾಜ್
ಎರೇಸೀಮೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.