Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Team Udayavani, Nov 4, 2024, 1:24 PM IST
ದಾವಣಗೆರೆ: ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ ಒಳಗೊಂಡಂತೆ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉಪ ವಿಭಾಗಾಧಿಕಾರಿ ಕಚೇರಿ ವೃತ್ತದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.
ನಂತರ ಉಪ ವಿಭಾಗಾಧಿಕಾರಿ ಕಚೇರಿಗೆ ಮುಂದಾಗುತ್ತಿದ್ದಂತೆಯೇ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಪೊಲೀಸ್ ಕವಾಯತ್ ಮೈದಾನಕ್ಕೆ ಕರೆದೊಯ್ದರು.
ರಾಜ್ಯ ಸರ್ಕಾರ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದರ ವಿರುದ್ಧ ನಮ್ಮ ಹೋರಾಟ ನಿರಂತವಾಗಿ ನಡೆಯಲಿದೆ. ಪಹಣಿ ಕಾಲಂ 11 ರಲ್ಲಿ ವಕ್ಫ್ ಬೋರ್ಡ್ ಹೆಸರನ್ನು ನಮೂದಿಸುವ ಮೂಲಕ ಆಸ್ತಿ ಕಬಳಿಸಲಾಗುತ್ತಿದೆ. ಯಾವುದೇ ರೈತರು, ಇತರರು ವಕ್ಪ್ ಬೋರ್ಡ್ ಹೆಸರಿನಲ್ಲಿ ಆಸ್ತಿ ಕಳೆದುಕೊಂಡಿದ್ದರೆ, ಇಲ್ಲವೇ ಸಮಸ್ಯೆ ಹೊಂದಿದ್ದರೆ ಅಂತಹವರ ನೆರವು, ಹೋರಾಟಕ್ಕಾಗಿ ಜಿಲ್ಲಾ ಬಿಜೆಪಿ ಪಹಣಿ ಪರಿಶೀಲನಾ ಅಭಿಯಾನ ಕೈಗೊಂಡಿದೆ. ಯಾರೇ ಆಗಿರಲಿ ವಕ್ಫ್ ಬೋರ್ಡ್‌ನಿಂದ ಸಮಸ್ಯೆ ಹೊಂದಿದ್ದಲ್ಲಿ 98450-95092 ನಂಬರ್‌ಗೆ ಕರೆ ಮಾಡಿ, ಇಲ್ಲವೇ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು ಎಂದು ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ ತಿಳಿಸಿದರು.
ವಕ್ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾನ್ಸರ್‌ನಂತೆ. ಧರ್ಮಾಂಧತೆಯ ಮೂಲಕ ಹಿಂದು ಸಮಾಜ, ಮಠ, ಮಾನ್ಯಗಳು, ದೇವಸ್ಥಾನಗಳ ಆಸ್ತಿಯನ್ನು ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರು ಹೇಳಿದ್ದರಿಂದಲೇ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರನ್ನು ನಮೂದು ಮಾಡಲಿಕ್ಕೆ ಆಗುತ್ತದೆ. ಇಲ್ಲವಾದಲ್ಲಿ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.