ರೈಲ್ವೆ ಸೇತುವೆಗಾಗಿ ಜೆಡಿಎಸ್ ರಸ್ತೆತಡೆ; ಮುಂದುವರಿದ ಪ್ರತಿಭಟನೆ
Team Udayavani, Mar 24, 2017, 1:02 PM IST
ದಾವಣಗೆರೆ: ಅಶೋಕ ಚಿತ್ರಮಂದಿರದ ಬಳಿಯ ರೈಲ್ವೆ ಗೇಟ್‌ಗೆ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ, 4 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಗುರುವಾರ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
ಸತತ ನಾಲ್ಕು ದಿನಗಳ ಧರಣಿಗೂ ಜಿಲ್ಲಾಡಳಿತ ಸ್ಪಂದಿಸದಿರುವುದರಿಂದ ಗಾಂಧಿ ವೃತ್ತದ ಬಳಿ ಒಂದು ತಾಸಿಗೂ ಹೆಚ್ಚು ಹೊತ್ತು ರಸ್ತೆತಡೆ ನಡೆಸಿದ 30 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪಕ್ಷದ ಯುವ ಘಕಟದ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾ ಖಾನ್ ಮಾತನಾಡಿ, ಕಳೆದ 20ರಿಂದ ನಾವು ಅಹೋರಾತ್ರಿ ಧರಣಿ ಆರಂಭಿಸಿದ್ದೇವೆ.
ನಮ್ಮ ಬೇಡಿಕೆ ಈಡೇರುವ ತನಕ ಧರಣಿ ಸ್ಥಳದಿಂದ ಮೇಲೇಳುವುದಿಲ್ಲ ಎಂಬುದಾಗಿ ತಿಳಿಸಿದ್ದೇವೆ. ಆದರೆ, ಇದುವರೆಗೆ ಜಿಲ್ಲಾಡಳಿತ ನಮ್ಮ ಮನವಿ ಆಲಿಸಲು ಮುಂದೆ ಬರುತ್ತಿಲ್ಲ. ಮೊದಲ ದಿನ ಬಂದು ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಕ್ರಮ ವಹಿಸುವುದಾಗಿ ಹೇಳಿದ್ದರು.
ಆದರೆ, ಇದುವರೆಗೆ ಈ ಕುರಿತು ಯಾವುದೇ ಸಭೆ ಆಗಲಿ, ನಾವು ಕೊಟ್ಟ ಮನವಿಗಳಿಗೆ ಉತ್ತರವನ್ನಾಗಲಿ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಮೂರು ವರ್ಷಗಳಿಂದಇಲ್ಲಿಯವರೆಗೆ ಯಾವ ಬೆಳವಣಿಗೆ ಆಗಿದೆ. ಅನುದಾನ ಬಂದಿದ್ದರೂ ಕಾಗಮಾರಿ ಆರಂಭಗೊಳ್ಳದೇ ಇರಲು ಕಾರಣ ಏನು? ಎಂಬ ವಿವರ ನೀಡಬೇಕು.
ನಾವು ಈ ಹಿಂದೆ ಫೆ.27ರಂದು ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದರ ಮೇಲೆ ಕೈಗೊಂಡ ಕ್ರಮಗಳೇನು? ಮಾ. 20ರಂದು ಜಿಲ್ಲಾಧಿಕಾರಿಗಳು ನಮಗೆ ನೀಡಿದ ಭರವಸೆ ಹಿನ್ನೆಲೆಯಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಮಾಹಿತಿ ಕೊಡಬೇಕು. ಅಲ್ಲಿಯವರೆಗೆ ನಾವು ಧರಣಿ ಕೈ ಬಿಡುವುದಿಲ್ಲ.
ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದರು. ಟಿ. ಅಸರ್, ಕೆ. ಶ್ರೀನಿವಾಸ್, ಪಿ. ದಾದಾಪೀರ್, ಖಾದರ್ ಬಾಷ, ಹನಮಂತ ರೆಡ್ಡಿ, ಅಹಮದ್ ಬಾಷ, ಸೈಯದ್ ರಸೂಲ್ ಸಾಬ್, ನವೀನ್, ರೇಣುಕಾ ಯಲ್ಲಮ್ಮ, ಹನುಮಂತಪ್ಪ, ಆಯೂಬ್ ಬೇಗ್, ಸೋಮಶೇಖರ್ ಹೋರಾಟದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.