ರಕ್ತದಾನ ಮಾಡಿ ಹೋರಾಟ ಆರಂಭ: ಜಯ ಮೃತ್ಯುಂಜಯ ಶ್ರೀ
Team Udayavani, Dec 23, 2020, 7:31 PM IST
ದಾವಣಗೆರೆ: ಕಳೆದ ಎರಡು ದಶಕಗಳಿಂದ ಆಡಳಿತ ನಡೆಸಿದ ಎಲ್ಲಾ ಮುಖ್ಯಮಂತ್ರಿಗಳಿಗೂ ಸಮಾಜದಿಂದ ಸನ್ಮಾನ, ಗೌರವ ಮಾಡಲಾಗಿದೆ. 2ಎ ಮೀಸಲಾತಿ ಕುರಿತಂತೆ ಸಾಕಷ್ಟು ಮನವಿಯನ್ನೂ ಸರ್ಕಾರಕ್ಕೆ ನೀಡಲಾಗಿದೆ.
ಶಾಂತಿಯುತವಾಗಿ ಹೋರಾಟ ಸಹ ಮಾಡಿ ಸರ್ಕಾರದ ಗಮನ ಸೆಳೆದಿದ್ದೇವೆ. ಯಾರೂಸಹ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡಿಲ್ಲ. ಆದ್ದರಿಂದ ನಮ್ಮ ಜನ್ಮದಿನದಂದು ರಕ್ತದಾನಶಿಬಿರ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಎಚ್ಚರಗೊಳಿಸುತ್ತಿದ್ದೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮಂಗಳವಾರ ಡಾ| ಸದ್ಯೋಜಾತ ಮಠದಲ್ಲಿ ಹಮ್ಮಿಕೊಂಡಿದ್ದ ತಮ್ಮ ಜನ್ಮದಿನಾಚರಣೆ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿ ವಿಧಾನಸೌಧದ ಬಳಿ ಉಪವಾಸಸತ್ಯಾಗ್ರಹ ಮಾಡಿದ್ದೇವೆ. ಇದೀಗ ಜನ್ಮಭೂಮಿದಾವಣಗೆರೆಯಿಂದಲೇ ರಕ್ತ ಕೊಡುವ ಮೂಲಕ ಹೋರಾಟಕ್ಕೆ ಚಾಲನೆ ಕೊಡಬೇಕೆಂದು ಬಂದಿದ್ದೆ. ಆದರೆ ಮಹಾಪೌರರಾದ ಅಜಯ್‌ಕುಮಾರ್‌ರವರು ಕೂಡಲಸಂಗಮದಲ್ಲೇ ನೀವು ರಕ್ತದಾನ ಮಾಡಿ. ಭಕ್ತರು ಮೊದಲು ಇಲ್ಲಿಂದ ರಕ್ತ ಕೊಟ್ಟುಹೋರಾಟ ಆರಂಭಿಸುತ್ತೇವೆ ಎಂದಿದ್ದರಿಂದ ಕೂಡಲಸಂಗಮದಿಂದಲೇ ರಕ್ತದಾನ ಮಾಡಿ ಹೋರಾಟ ಆರಂಭಿಸುವೆ ಎಂದು ತಿಳಿಸಿದರು.
ಪಂಚಮಸಾಲಿ ಸಮಾಜಕ್ಕೆ ಕೇಂದ್ರದಿಂದ ಒಬಿಸಿ ಹಾಗೂ ರಾಜ್ಯದಿಂದ 2ಎ ಮೀಸಲಾತಿ ನೀಡಬೇಕು ಹಿನ್ನೆಲೆಯಲ್ಲಿ ದಾವಣಗೆರೆಯಿಂದಲೇ ಚಾಲನೆ ಕೊಡಲಾಗಿದೆ.ನಾವು ಇದುವರೆಗೂ ಶಾಂತಿಯುತವಾಗಿ ಸರ್ಕಾರಕ್ಕೆ ಹಲವು ಬಾರಿ ಮನವಿ ನೀಡುವ ಮೂಲಕ ಒತ್ತಾಯ ಮಾಡಿದ್ದೇವೆ. ಇದೀಗ ಸಮಾಜದ ಮುಖಂಡರ ತೀರ್ಮಾನದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ “ರಕ್ತ ಕೊಡುತ್ತೇವೆ, ಮೀಸಲಾತಿ ಕೊಡಿ’ ಎಂಬ ಘೋಷಣೆ ಮೂಲಕ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಜ. 14 ರೊಳಗೆ ಈ ಬಗ್ಗೆ ತೀರ್ಮಾನ ಕೈಗೊಂಡುನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ಕೂಡಲಸಂಗಮದಲ್ಲಿ ಜ. 14 ರಂದು ನಡೆಯುವ ಕೃಷಿ ಸಮ್ಮೇಳನದಲ್ಲಿಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡು ರಕ್ತ ಕೊಟ್ಟು ಹೋರಾಟ ಮಾಡುತ್ತೇವೆ. ಅಲ್ಲಿಂದಲೇ ಬೆಂಗಳೂರಿಗೆ ಪಾದಯಾತ್ರೆ ಮಾಡುವ ಮೂಲಕಶಕ್ತಿಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರ ಅದಕ್ಕೂ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಿಎಂ ಯಡಿಯೂರಪ್ಪ ಈಗಾಗಲೇ ಈಬಗ್ಗೆ ನಮ್ಮ ಜೊತೆ ಮಾತುಕತೆ ನಡೆಸಿದ್ದಾರೆ. ನಮಗೆ 2ಎ ಮೀಸಲಾತಿ ಕಲ್ಪಿಸುತ್ತಾರೆ ಎಂಬವಿಶ್ವಾಸವಿದೆ. ಅವರ ಆಡಳಿತಾವ ಧಿಯಲ್ಲಿಪಂಚಮಸಾಲಿ ಸಮಾಜಕ್ಕೆ ಮೀಸಲಾತಿಸಿಗುತ್ತದೆ ಎಂಬ ವಿಶ್ವಾಸವಿದೆ. ನಮ್ಮ ಹೋರಾಟಮಾತ್ರ ನಿಲ್ಲುವುದಿಲ್ಲ. ಕೆಲವು ಸಚಿವರು ಮತ್ತು ರಾಜಕೀಯ ಮುಖಂಡರು ಗ್ರಾಪಂಚುನಾವಣೆ ಹಿನ್ನೆಲೆಯಲ್ಲಿ ಪಾದಯಾತ್ರೆ ಬೇಡ ಎಂದ ಕಾರಣ ಪಾದಯಾತ್ರೆಯನ್ನು ಜ.14 ಕ್ಕೆ ಮುಂದೂಡಲಾಗಿದೆ ಎಂದರು.
ಮೇಯರ್ ಬಿ.ಜಿ. ಅಜಯ್‌ಕುಮಾರ್, ಶ್ರೀಧರ್ ಪಾಟೀಲ್, ಅಶೋಕ್, ಪ್ರಭುದೇವ್, ಗಂಗಾಧರ ಇತರರು ಇದ್ದರು.ಲಡ್ಡು ವಿತರಣೆ, ವಿಶೇಷ ಸಂಚಿಕೆ ಬಿಡುಗಡೆ, ರಕ್ತದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು
ಹರಿಹರದ ಪಂಚಮಸಾಲಿ ಶ್ರೀಗಳು ಹಾಗೂ ನಾವು ಮೀಸಲಾತಿ ವಿಚಾರದಲ್ಲಿ ಚರ್ಚೆ ನಡೆಸಿದ್ದು ಹೋರಾಟ ಮಾಡುತ್ತಿದ್ದೇವೆ. ಎರಡು ಮಠಗಳು ಮೀಸಲಾತಿ ವಿಚಾರದಲ್ಲಿ ಒಂದಾಗಿವೆ. ಯಾರಿಂದ ಆದರೂ ಸರಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು. -ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.