2ರಂದು ರಕ್ತದಾನ ಶಿಬಿರ
Team Udayavani, Jul 31, 2021, 11:43 AM IST
ಹೊನ್ನಾಳಿ: ತಾಲೂಕಿನ ರಾಂಪುರ ಕ್ಷೇತ್ರದ ಶಿವಯೋಗಿ ಹಾಲಸ್ವಾಮೀಜಿ ಸಂಸ್ಥಾನದ ಲಿಂ.ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆ.2 ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತ ಹೊನ್ನಾಳಿ ಎಂ.ಎಸ್.ಶಾಸ್ತ್ರಿ ಹೊಳೆಮಠ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಸ್ವಾಮೀಜಿಯವರ ಭಕ್ತರು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಇದೇ ವೇಳೆ ಲಿಂ.ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿಯವರ ಗುರುಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹೊಟ್ಯಾಪುರದ ಗಿರಿಸಿದ್ದೇಶ್ವರ ಶಿವಚಾರ್ಯಸ್ವಾಮೀಜಿ ಹಾಗೂ ರಾಂಪುರ ಮಹಾ ಸಂಸ್ಥಾನದ ಶಿವಕುಮಾರ ಹಾಲಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೊರೊನಾ ವಿರುದ್ಧ ವ್ಯಾಕ್ಸಿನ್ ಹಾಕಿಸಿಕೊಂಡವರು ರಕ್ತದಾನ ಮಾಡಬಾರದು ಎಂದು ಕೆಲವರಲ್ಲಿ ಗೊಂದಲ ಇದೆ.
ಆದರೆ ವ್ಯಾಕ್ಸಿನ್ ಹಾಕಿಸಿಕೊಂಡ 14 ದಿನದ ನಂತರ ರಕ್ತದಾನ ಮಾಡಬಹುದು ಎಂದು ಹೇಳಿದರು. ಹೊಸಹಳ್ಳಿ ತಿಪ್ಪೇಶ್, ಶಿಂಗಟಗೆರೆ ನಾಗರಾಜಯ್ಯ, ಮೆಡಿಕಲ್ ಸ್ಟೋರ್ ಮಾಲೀಕ ಶಿವಾನಂದಸ್ವಾಮಿ, ದೇವರಾಜ್, ಶ್ರೀನಿವಾಸ್, ಕುರುವ ಮಂಜುನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.