Benne Dose: ದಾವಣಗೆರೆ ಬೆಣ್ಣೆ ದೋಸೆಗೂ ಜಿಲ್ಲಾಡಳಿತದಿಂದ ಬ್ರ್ಯಾಂಡಿಂಗ್
Team Udayavani, Dec 2, 2023, 8:28 AM IST
ದಾವಣಗೆರೆ: ವಿಶಿಷ್ಟ ರುಚಿಯಿಂದ ಗಮನ ಸೆಳೆದಿರುವ “ದಾವಣಗೆರೆ ಬೆಣ್ಣೆದೋಸೆ’ಗೆ ಶುಕ್ರದೆಸೆ ಬಂದಿದೆ. ಜಿಲ್ಲಾಡಳಿತದಿಂದಲೇ ಬ್ರ್ಯಾಂಡಿಂಗ್ ಮಾಡಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಣ್ಣೆದೋಸೆಯ ಸವಿರುಚಿ ಹರಡಿಸುವ ಪ್ರಯತ್ನ ನಡೆದಿದೆ. ದಾವಣಗೆರೆ ಬೆಣ್ಣೆದೋಸೆಗೊಂದು ಬ್ರ್ಯಾಂಡ್ ಸೃಷ್ಟಿಸಿ ಇದನ್ನು ಪ್ರವಾಸೋದ್ಯದ ಜತೆ ಮೇಳೈಸುವ ಹೊಸ ಪ್ರಯತ್ನಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಬೆಣ್ಣೆದೋಸೆಯ ಗುಣಮಟ್ಟ ಖಾತ್ರಿ ಪಡಿಸಿಕೊಳ್ಳಲು ಜಿಲ್ಲಾಡಳಿತ ಇಲ್ಲಿಯ ಬೆಣ್ಣೆದೋಸೆ ಹೋಟೆಲ್‌ಗಳನ್ನು ಆಹಾರ ಸುರಕ್ಷತಾ ಕಾಯ್ದೆಯನ್ವಯ ಪರಿಶೀಲನೆ ನಡೆಸಲಿದೆ. ದೋಸೆಗೆ ಬಳಸುವ ಧಾನ್ಯಗಳು, ಬೆಣ್ಣೆ ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆ ಸೇರಿ ಎಲ್ಲ ಆಯಾಮಗಳಲ್ಲಿ ಅಲ್ಲಿನ ಶುಚಿತ್ವ, ಗುಣಮಟ್ಟವನ್ನು ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಮಾನದಂಡಗಳ ಮೂಲಕ ಪರಿಶೀಲಿಸಲಾಗುತ್ತದೆ. ಬಳಿಕವಷ್ಟೇ ಜಿಲ್ಲಾಡಳಿತದಿಂದ ಬ್ರ್ಯಾಂಡಿಂಗ್ ಪ್ರಮಾಣ ಪತ್ರ ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಇಂಥ ಹೋಟೆಲ್ ಗಳನ್ನು ಜೋಡಣೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ.
ಬೆಣ್ಣೆ ದೋಸೆ ಹೋಟೆಲ್‌ಗಳಿಗೆ ಪ್ರಮಾಣ ಪತ್ರ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಪಾಲಿಕೆ ಆಯುಕ್ತರು, ಆಹಾರ ಸುರಕ್ಷತಾ ಕಾಯ್ದೆ ಅಂಕಿತ ಅಧಿಕಾರಿಗಳು, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಒಳಗೊಂಡ ಸಮಿತಿ ರಚಿಸಿ ಅಧ್ಯಯನ ವರದಿ ನೀಡಲು ಸಹ ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.