ಬಿಎಸ್‌ವೈ ಮತ್ತೆ ಸಿಎಂ ಕನಸು ನನಸಾಗದು
Team Udayavani, Feb 28, 2017, 1:17 PM IST
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ 75 ವರ್ಷ ತುಂಬಿದ ನಂತರ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶವೇ ಸಿಗುವುದಿಲ್ಲ ಎಂಬ ಕಾರಣಕ್ಕೆ ಅವರು ಈಗಲೇ ವಿಧಾನ ಸಭಾ ವಿಸರ್ಜನೆಗೆ ಒತ್ತಾಯಿಸುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.
ಸೋಮವಾರ ರೇಣುಕಾ ಮಂದಿರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಜನ ವೇದನ ಸಮಾವೇಶದಲ್ಲಿ ಮಾತನಾಡಿದ ಅವರು, ಹೇಗಾದರೂ ಸರಿ ಮತ್ತೆ ಮುಖ್ಯಮಂತ್ರಿ ಆಗಲು ತುಂಬಾ ಅವಸರದಲ್ಲಿರುವ ಯಡಿಯೂರಪ್ಪರಿಗೆ 2018ಕ್ಕೆ 75 ವರ್ಷವಾಗಲಿದೆ. ಅವರ ಪಕ್ಷದ ನೀತಿ ಪ್ರಕಾರ 75 ವರ್ಷವಾದವರಿಗೆ ಅಧಿಕಾರ ಕೊಡುವಂತಿಲ್ಲ.
ಹಾಗಾಗಿಯೇ ಅವರು ಬೋಗಸ್ ಡೈರಿ ವಿಷಯ ಮುಂದಿಟ್ಟುಕೊಂಡು ವಿಧಾನ ಸಭಾ ವಿಸರ್ಜನೆಗೆ ಒತ್ತಾಯಿಸುತ್ತಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಯಡಿಯೂರಪ್ಪನವರು ಬೋಗಸ್ ಡೈರಿ ಮುಂದಿಟ್ಟುಕೊಂಡು ಜನರು, ಸರ್ಕಾರವನ್ನು ದಿಕ್ಕು ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಅಪಾರ ಗೌರವ ಇದೆ.
ನಿಜಕ್ಕೂ ಅವರಲ್ಲಿ ದಾಖಲೆ ಇದ್ದಲ್ಲಿ ಸಿಬಿಐ ಒಳಗೊಂಡಂತೆ ಯಾವುದೇ ತನಿಖೆಗೆ ಒಳಪಡಿಸಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದಕ್ಕೆ ಯಾರೂ ಬೇಡ ಎನ್ನುವುದೇ ಇಲ್ಲ. ಅದನ್ನು ಬಿಟ್ಟು ಇಂತಹ ಬೇಜಾವಾಬ್ದಾರಿ ಹೇಳಿಕೆ ನೀಡುವುದು, ಸುಳ್ಳು ಹೇಳುವುದು ಪ್ರಜಾಪ್ರಭುತ್ವಕ್ಕೆನೇ ಅವಮಾನ ಮಾಡುವ ವಿಷಯ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನ.8 ರಂದು ಏಕಾಏಕಿ ನೋಟು ಅಮಾನ್ಯ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅನಾವಶ್ಯಕವಾಗಿ ದೇಶದ ಆರ್ಥಿಕ ಹಿನ್ನಡೆ, ಅರಾಜಕತೆಗೆ ಕಾರಣವಾಗಿದ್ದಾರೆ. ನೋಟು ಅಮಾನ್ಯದಿಂದ ದೇಶದ ಬ್ಯಾಂಕ್ ಗಳಲ್ಲಿ 6.70 ಲಕ್ಷ ಕೋಟಿ ಅನುತ್ಪಾದಕ ಸಾಲ ಇದೆ. ಮಾರ್ಚ್ ನಂತರ ವಹಿವಾಟು ಇಲ್ಲದೆ ಅನೇಕ ಕಂಪನಿಗಳು ದಿವಾಳಿಯಾಗಲಿವೆ.
ಇನ್ನು ಪ್ರಧಾನಿ ಮಾಡುತ್ತಿರುವಂತಹ ಪ್ರಚೋದನಾತ್ಮಕ ಭಾಷಣ ಕೇಳಿದರೆ ದೇಶ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬ ಭಯ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾನು ಮುಖ್ಯಮಂತ್ರಿಯಾದ 24 ಗಂಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಜೈಲಿಗೆ ಕಳಿಸುವುದಾಗಿ ಯಡಿಯೂರಪ್ಪ ಹೇಳುತ್ತಿದ್ದಾರೆ.
ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಎರಡು ಗಂಟೆಯಲ್ಲೇ ಅನ್ನಭಾಗ್ಯ ಯೋಜನೆ ಘೋಷಿಸಿ, ಸಾಲ ಮನ್ನಾ ಮಾಡಿದರು. 4 ವರ್ಷದಲ್ಲಿ ನೀರಾವರಿಗೆ 42 ಸಾವಿರ ಕೋಟಿ, 1 ಕೋಟಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ಹಾಲು ಕೊಡುವ ಕೀÒರಭಾಗ್ಯ, 10 ಲಕ್ಷ ಮನೆ ನಿರ್ಮಾಣ, 17 ಸಾವಿರ ಕಿಲೋ ಮೀಟರ್ ಜಿಲ್ಲಾ, 6 ಸಾವಿರ ಕಿಲೋ ಮೀಟರ್ ಜಿಲ್ಲಾ ಹೆದ್ದಾರಿ ನಿರ್ಮಿಸಿದ್ದಾರೆ.
ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರು, ಮೇವು, ಉದ್ಯೋಗಕ್ಕಾಗಿ 1,200 ಕೋಟಿ ನೀಡಿದ್ದಾರೆ. ಕಾಂಗ್ರೆಸ್‌ನದು ಅಭಿವೃದ್ಧಿವಾದ, ಬಿಜೆಪಿಯವರದು ಕೋಮುವಾದ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲರೂ ಒಗ್ಗೂಡಿ ಪಕ್ಷ ಸಂಘಟಿಸಿ, ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.