ದೇಶಾಭಿಮಾನ ಬೆಳೆಸಿಕೊಳ್ಳಿ
Team Udayavani, Jan 28, 2019, 7:12 AM IST
ಹೊನ್ನಾಳಿ: ಎಲ್ಲರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಅಗಣಿತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಅದನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ ಎಂದು ಯೋಧ ಬಿ.ಡಿ. ಬಸಪ್ಪ ಹೇಳಿದರು.
70ನೇ ಗಣರಾಜ್ಯೋತ್ಸವ ಪ್ರಯುಕ್ತ ಕತ್ತಿಗೆ ಗ್ರಾಮದ ಕೆಪಿಟಿಸಿಎಲ್ ಕಚೇರಿ ಆವರಣದಲ್ಲಿ ಶನಿವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶದ ಮೇಲೆ ಆಕ್ರಮಣ ಮಾಡಲು ನಿರಂತರವಾಗಿ ಹೊಂಚು ಹಾಕುವ ವೈರಿಗಳು, ಭಯೋತ್ಪಾದಕರು ಮತ್ತಿತರರ ವಿರುದ್ಧ ನಮ್ಮ ಸೇನೆ ಶ್ರಮವಹಿಸಿ ಹೋರಾಡುತ್ತಿದೆ. ಅದೇ ರೀತಿ, ನಾಡಿನಲ್ಲಿನ ಆಂತರಿಕ ವೈರಿಗಳ ಬಗ್ಗೆಯೂ ಎಲ್ಲರೂ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ದೇಶದ ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆಯಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಯುವಜನತೆ ಚಿಂತನೆ ನಡೆಸಬೇಕು ಎಂದು ಹೇಳಿದರು. ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುಮಾ ಹಾಗೂ ಕೆಪಿಟಿಸಿಎಲ್ ಸಿಬ್ಬಂದಿ, ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.