ಶಿಬಿರಗಳು ಸಂಘದ ಗುರಿ ಸಾಧನೆಗೆ ಸಹಕಾರಿ
Team Udayavani, Oct 14, 2018, 4:16 PM IST
ಜಗಳೂರು: ಸಂಘದ ಗುರಿ ಮತ್ತು ಉದ್ದೇಶಗಳ ಈಡೇರಿಕೆಗೆ ತರಬೇತಿ ಕಾರ್ಯಕ್ರಮಗಳು ಸಹಾಯಕವಾಗಲಿವೆ
ಎಂದು ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಯು.ಜಿ. ಶಿವಕುಮಾರ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಸಹಕಾರ
ಇಲಾಖೆ, ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸಹಕಾರ ಹಾಲು ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ
ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ನಡೆದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಇಂತಹ ಕಾರ್ಯಾಗಾರದಲ್ಲಿ ಸಹಕಾರ ಸಂಘದ ಸದಸ್ಯರು ತಪ್ಪದೇ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳ ಸಲಹೆ ಸೂಚನೆಗಳನ್ನು ಅನುಸರಿಸುವ ಮೂಲಕ ಸಂಘಗಳ ಉದ್ದೇಶ ಸಾಧಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಿವಮೊಗ್ಗ ಡಿ.ಸಿ.ಸಿ.ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಎಚ್.ಕೆ. ಮಹಾಬಲಗಿರಿ ಸಹಕಾರ ಸಂಘಗಳಿಗೆ ಸಂಬಂಧಿತ ಕಾಯ್ದೆಗಳ ತಿದ್ದುಪಡಿ, ಸಹಕಾರ ಅಭಿವೃದ್ಧಿ ಅಧಿಕಾರಿ ಸಿ.ಗೋಪಾಲ್ ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ದಾವಣಗೆರೆ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್. ಬಸವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕ ಎಸ್.ಶಂಕರ್‌ನಾಯಕ್, ಪ್ರಭಾರ ಸಿಇಒ ಕೆ.ಎಚ್. ಸಂತೋಷ್‌ಕುಮಾರ್, ವ್ಯವಸ್ಥಾಪಕ ಕೆ.ಎಂ.ಜಗದೀಶ್, ನಿವೃತ್ತ ಉಪನ್ಯಾಸಕ ಸುಭಾಶ್ಚಂದ್ರಬೋಸ್, ಹನುಮಂತಾಪುರದ ಬಸವರಾಜ್, ಸಹಾಯಕ ವ್ಯವಸ್ಥಾಪ ಹರೀಶ್, ವಿಸ್ತರಣಾಧಿ ಕಾರಿ ರಶ್ಮಿ, ಶಾಖಾ ವ್ಯವಸ್ಥಾಪಕ ಪ್ರಮೋದ್‌ಕುಮಾರ್, ಡಿ.ಸಿ.ಸಿ. ಬ್ಯಾಂಕ್ ಕ್ಷೇತ್ರಾಧಿಕಾರಿಗಳಾದ ಹಾದಿಮನಿ, ಹಾಲಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.