ಆದೇಶ ಪಾಲಿಸದಿದ್ರೆ ಪರವಾನಗಿ ರದ್ದು
Team Udayavani, Jun 21, 2020, 8:07 AM IST
ಹರಿಹರ: ತಾಲೂಕಿನ ಖಾಸಗಿ ನರ್ಸಿಂಗ್ ಹೋಮ್, ಕ್ಲಿನಿಕ್‌ಗಳ ವೈದ್ಯರು ಸರ್ಕಾರಿ ಆದೇಶ ಪಾಲಿಸುತ್ತಿಲ್ಲ, ಈ ನಿರ್ಲಕ್ಷ ದೋರಣೆ ಮುಂದುವರೆದರೆ ಇಂತಹ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಅಪಾರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಎಚ್ಚರಿಸಿದರು.
ನಗರದ ಎಸ್‌ಜೆವಿಪಿ ಕಾಲೇಜಿನಲ್ಲಿ ಶನಿವಾರ ನಡೆದ ಖಾಸಗಿ ಆಸ್ಪತ್ರೆ ವೈದ್ಯರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿದಿನ ತಮ್ಮ ಬಳಿ ತಪಾಸಣೆಗೆ ಬರುವ ರೋಗಿಗಳ ರೋಗಲಕ್ಷಣ ಸೇರಿದಂತೆ ಸಂಪೂರ್ಣ ವರದಿಯನ್ನು ತಾಲೂಕು ಆರೋಗ್ಯ ಇಲಾಖೆಗೆ ಸಲ್ಲಿಸಲು ಈಗಾಗಲೆ ಹಲವು ಸಲ ಸೂಚಿಸಿದ್ದರೂ ನಿರ್ಲಕ್ಷಿಸಲಾಗುತ್ತಿದೆ. 10 ವರ್ಷದೊಳಗಿನ, 60 ವರ್ಷ ಮೇಲ್ಪಟ್ಟ ಹಾಗೂ ಮದುಮೇಹ, ಕ್ಯಾನ್ಸರ್, ಬಿಪಿ, ಶೀತ, ಕೆಮ್ಮು, ಜ್ವರ, ಗಂಟಲು ಕಡಿತ, ಉಸಿರಾಟ ತೊಂದರೆ ಕಂಡು ಬಂದತಂಹ ವ್ಯಕ್ತಿಗಳಿಗೆ ಕೂಡಲೇ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಆದರೆ ಖಾಸಗಿ ಆಸ್ಪತ್ರೆ ವೈದ್ಯರು ತಾವೇ ಚಿಕಿತ್ಸೆ ನೀಡಿ ರೋಗ ಉಲ್ಬಣಗೊಂಡ ಮೇಲೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸುತ್ತಿರುವುದು ಕ್ರಿಮಿನಲ್ ಅಪರಾಧವಾಗುತ್ತದೆ ಎಂದರು.
ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಎಲ್‌ಓಗಳು ತಮ್ಮ ಕಾರ್ಯ ವ್ಯಾಪ್ತಿಯ ಮನೆ ಮನೆಗೆ ತೆರಳಿ ಗರ್ಭಿಣಿಯರು, ವೃದ್ಧರು, ಮಕ್ಕಳು, ಬೇರೆ ದೇಶ, ಹೊರ ರಾಜ್ಯಗಳಿಂದ ಬಂದವರ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ರೋಗ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್, ಪೌರಾಯುಕ್ತೆ ಎಸ್. ಲಕ್ಷ್ಮೀ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.