ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Team Udayavani, Feb 14, 2019, 6:27 AM IST

dvg-5.jpg

ಹೊನ್ನಾಳಿ: ಕಾರಿನ ಟಯರ್‌ ಸ್ಫೋಟಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಮೂವರು ಹಾಗೂ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೂ ಮೃತಪಟ್ಟ ಘಟನೆ ತಾಲೂಕಿನ ಹರಳಹಳ್ಳಿಯಲ್ಲಿ ಸಂಭವಿಸಿದೆ.

ಹರಳಹಳ್ಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ಬುಧವಾರ ಸಂಜೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು ಅರಬಗಟ್ಟೆ ಗ್ರಾಮದ ರಮೇಶ್‌ (38), ಉಷಾ (28), ಚಂದ್ರು (6) ಮತ್ತು ಕಾರು ಚಲಾಯಿಸುತ್ತಿದ್ದ ದಾವಣಗೆರೆಯ ಎಸ್ಸೆಸ್‌ ಲೇಔಟ್‌ ನಿವಾಸಿ, ಗುತ್ತಿಗೆದಾರ ಜಯದೇವಯ್ಯ ಹಿರೇಮಠ್… (45) ಮೃತಪಟ್ಟಿದ್ದಾರೆ.

ಬಸ್ಸಿಗಾಗಿ ಕಾಯುತ್ತಿದ್ದರು: ಮೃತಪಟ್ಟ ಮೂವರು ಅರಬಗಟ್ಟೆ ಗ್ರಾಮದ ಚೀಲೋಡಿ ಮನೆತನದ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ಇದೇ ಮಾರ್ಗದಲ್ಲಿ ಗುತ್ತಿಗೆದಾರ ಜಯದೇವಯ್ಯ ತಮ್ಮ ಕಾರಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಗ್ರಾಮದ ಬಸ್‌ ನಿಲ್ದಾಣದ ಸಮೀಪದಲ್ಲೇ ಇವರ ಕಾರಿನ ಟಯರ್‌ ಸ್ಫೋಟಗೊಂಡಿದೆ.

ಪರಿಣಾಮ ನಿಯಂತ್ರಣ ತಪ್ಪಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಕ್ಷಣಾರ್ಧದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಹರಿದಿದೆ. ನಂತರ ಅಲ್ಲೇ ಇದ್ದ ಮರಕ್ಕೆ ಅಪ್ಪಳಿಸಿ ನಿಂತಿದೆ. ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಮರದ ಪಕ್ಕದಲ್ಲೇ ಮತ್ತಷ್ಟು ಜನ ಬಸ್ಸಿಗಾಗಿ ಕಾಯುತ್ತ ನಿಂತಿದ್ದು ಕಾರು ಮರಕ್ಕೆ ಡಿಕ್ಕಿ ಹೊಡೆಯದಿದ್ದರೆ ಇನ್ನೂ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎನ್ನಲಾಗಿದೆ.
 
ಘಟನೆಯಿಂದ ಬಸ್‌ ಏರಿ ತಾವು ಹೋಗಬೇಕಿದ್ದ ಊರಿಗೆ ತಲುಪಬೇಕು ಎನ್ನುವಷ್ಟರಲ್ಲಿ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಜನ ಜಮಾಯಿಸಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೊನ್ನಾಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.