ಪ್ರವರ್ಗ-1 ವಿದ್ಯಾರ್ಥಿಗಳಿಗೂ ಶೈಕ್ಷಣಿಕ ಸೌಲಭ್ಯ ದೊರೆಯಲಿ

Team Udayavani, Apr 5, 2022, 2:24 PM IST

pravarga

ದಾವಣಗೆರೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಂತೆಯೇ ಪ್ರವರ್ಗ-1 ಜಾತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಶೈಕ್ಷಣಿಕ ಸೌಲಭ್ಯ ಮತ್ತು ಶುಲ್ಕ ವಿನಾಯತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟ ಒತ್ತಾಯಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ವಿ. ಲೋಕೇಶಪ್ಪ, ರಾಜ್ಯದಲ್ಲಿ 1972ರಿಂದ 2012ರವರೆಗೆ ಪ್ರವರ್ಗ-1 ಜಾತಿ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಂತೆಯೇ ಶುಲ್ಕ ವಿನಾಯತಿ, ಸಂಪೂರ್ಣ ಶೈಕ್ಷಣಿಕ ಸೌಲಭ್ಯ ಇತ್ತು. ಈಗ ನಿಲ್ಲಿಸಲಾಗಿದೆ. 2012ರಲ್ಲಿ ಇದ್ದಂತೆಯೇ ಪ್ರವರ್ಗ-1ರ ಜಾತಿಗಳ ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸಬೇಕು ಎಂದರು.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕಳೆದ ಶೈಕ್ಷಣಿಕ ವರ್ಷದಿಂದ ಪ್ರವರ್ಗ-1ರ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಮತ್ತು ಶುಲ್ಕ ವಿನಾಯತಿ ನಿಲ್ಲಿಸಲಾಗಿದೆ. ಕುಲಪತಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಮುಂದುವರೆಸುವುದಾಗಿ ಹೇಳಿದ್ದಾರೆ. ಅಚ್ಚರಿ ಮತ್ತು ಆತಂಕದ ವಿಚಾರವೆಂದರೆ ಪ್ರವರ್ಗ-1 ಎಂಬ ಕಾಲಂ ತೆಗೆದು ಹಾಕಲಾಗಿದೆ. ರಾಜ್ಯ ಸರ್ಕಾರ ಕೂಡಲೇ 2012ರಂತೆ ಪ್ರವರ್ಗ-1 ಜಾತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಶೈಕ್ಷಣಿಕ ಸೌಲಭ್ಯಮತ್ತು ಶುಲ್ಕ ವಿನಾಯತಿ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರದಲ್ಲಿ ಪ್ರವರ್ಗ-1 ಜಾತಿಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಕಾಪು ಕ್ಷೇತ್ರದ ಲಾಲಾಜಿ ಮೆಂಡನ್‌ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.

ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಪ್ರವರ್ಗ-1ರ ಜಾತಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಇಲ್ಲ. ಹಾಗಾಗಿ ಪ್ರಬಲ ಸಮುದಾಯದವರೊಂದಿಗೆ ಸೆಣಸಾಡಲಾಗುತ್ತಿಲ್ಲ. ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಯಲ್ಲಿ ನಮಗಾಗಿಯೇ ಪ್ರತ್ಯೇಕ ಮೀಸಲಾತಿ ನೀಡಬೇಕು. 1 ಕೋಟಿಯಷ್ಟು ಜನರಿರುವ ಪ್ರವರ್ಗ-1ರ ಜಾತಿ ಬಾಂಧವರ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ತೆಗೆದಿರಿಸಬೇಕು ಎಂಬುದು ಒಕ್ಕೂಟದ ಒತ್ತಾಯ ಎಂದು ತಿಳಿಸಿದರು.

ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಜನಾಂಗದವರ ವಸತಿ ನಿರ್ಮಾಣದ ವೆಚ್ಚವನ್ನು ಇತರೆ ವರ್ಗದವರಂತೆ ಸಮಾನವಾಗಿ ಹೆಚ್ಚಿಸಬೇಕು. ಅಲೆಮಾರಿ, ಅರೆಅಲೆಮಾರಿ ಬುಡಕಟ್ಟು ಜಾತಿ ಜನಾಂಗದ ಪ್ರಮಾಣಪತ್ರದಲ್ಲಿ ಅಲೆಮಾರಿ ಎಂಬುದಾಗಿ ನಮೂದಿಸಬೇಕು ಎಂದು ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜಮ್ಮ ಮಾತನಾಡಿ, ಪ್ರವರ್ಗ-1ರ ಜಾತಿಯವರಿಗೆ ದೊರೆಯುತ್ತಿದ್ದ ಮೀಸಲಾತಿ, ವಿವಿಧ ಸೌಲಭ್ಯಗಳೇ ಇಲ್ಲದಂತಾಗಿದೆ. ಸರ್ಕಾರ ಕೂಡಲೇ ಶೈಕ್ಷಣಿಕ ಸೌಲಭ್ಯ, ಶುಲ್ಕ ವಿನಾಯತಿ ಇತರೆ ಸೌಲಭ್ಯ ಮುಂದುವರೆಸಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಒಕ್ಕೂಟದ ಸೂರ್ಯಪ್ರಕಾಶ್‌ ಕೋಲಿ, ಎಸ್‌. ತಿಪ್ಪೇಸ್ವಾಮಿ, ಎಸ್‌.ಎಂ. ಸುರೇಶ್‌, ಭೋಜರಾಜ್‌, ಮಂಜು ನಾಥ್‌, ಏಕಾಂತಪ್ಪ, ದೇವೇಂದ್ರಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.