ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ
ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡದಿರಿ
Team Udayavani, Mar 11, 2022, 4:05 PM IST
ದಾವಣಗೆರೆ: ಪ್ರತಿಯೊಬ್ಬರು ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಮತ್ತು ಷಬ್-ಎ-ಬರಾತ್ ಆಚರಿಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಮನವಿ ಮಾಡಿದರು.
ಗುರುವಾರ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೋಳಿ ಹಬ್ಬ ಮತ್ತು ಷಬ್ -ಎ-ಬರಾತ್ ಹಬ್ಬದ ಪ್ರಯುಕ್ತ ನಡೆದ ನಾಗರಿಕ ಸೌಹಾರ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಸಡಗರ, ಸಂಭ್ರಮದಿಂದ ಹಬ್ಬಗಳಾಚರಣೆ ಮಾಡಬೇಕು ಎಂದರು.
ಹೋಳಿ ಹಬ್ಬ ಹಾಗೂ ಷಬ್-ಎ-ಬರಾತ್ ಹಬ್ಬಗಳು ಒಟ್ಟಿಗೆ ಬಂದಿರುವುದರಿಂದ ಜಿಲ್ಲೆ ಹಾಗೂ ನಗರದಲ್ಲಿ ಸಾರ್ವಜನಿಕರು ಪ್ರಾರ್ಥನೆ ಸಲ್ಲಿಸುವುದು ಮತ್ತು ಕಾಮದಹನ ಮಾಡುವುದರಿಂದ ಕೆಲವು ಕಡೆ ಸಣ್ಣಪುಟ್ಟ ತೊಡಕಾಗುವ ಸಾಧ್ಯತೆಗಳಿರುತ್ತವೆ. ನಗರದ ಮೂರು ಖಬರಸ್ಥಾನಗಳಲ್ಲಿ ಮುಸ್ಲಿಂ ಸಮುದಾಯದವರಿಂದ ರಾತ್ರಿಯ ನಮಾಜ್ ನಂತರ ಪ್ರಾರ್ಥನೆ ಸಲ್ಲಿಸುವ ಕಾರ್ಯ ನಡೆಯಲಿದೆ ಮತ್ತು ಕಾಮದಹನದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ರಾತ್ರಿ ವೇಳೆ ಓಡಾಡುವುದು, ಸುತ್ತಾಡುವುದು ಮಾಡಬಾರದು. ಹಿರಿಯರಿಗಿಂತ ಹೆಚ್ಚಾಗಿ ಯುವಕರು ಕಾನೂನು ವ್ಯಾಪ್ತಿ ಮೀರಿ ಸಂಭ್ರಮಿಸುವ ಘಟನೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಾಗಿ ಎರಡು ಸಮುದಾಯದ ಮುಖಂಡರು ಯುವಸಮೂಹಕ್ಕೆ ಬುದ್ಧಿವಾದ ಹೇಳಿ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು. ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರ ಗಮನಕ್ಕೆ ತರದೇ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದು. ದ್ವಿಚಕ್ರವಾಹನದ ಸೈಲೆನ್ಸರ್ ಮೂಲಕ ಹೆಚ್ಚಿನ ಶಬ್ದ ಮಾಲಿನ್ಯ ಉಂಟುಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ದುರ್ಗಾಂಬಿಕಾ ಜಾತ್ರೆ ಪ್ರಯುಕ್ತ ನಗರದೆಲ್ಲೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ನಗರಪಾಲಿಕೆ ಯವರ ಅನುಮತಿ ಇಲ್ಲದೆ ಯಾವುದೇ ಪೋಸ್ಟರ್, ಬ್ಯಾನರ್ ಹಾಕಬಾರದು. ಹೋಳಿ ಸಂದರ್ಭದಲ್ಲಿ ಮಹಿಳೆಯರ ಜೊತೆಗೆ ಗೌರವಯುತವಾಗಿ ನಡೆದುಕೊಳ್ಳುವ ಮೂಲಕ ಹಬ್ಬವನ್ನು ಸಂತೋಷವಾಗಿ ಆಚರಿಸಬೇಕು ಎಂದು ಹೇಳಿದರು.
ಮೇಯರ್ ಜಯಮ್ಮ ಗೋಪಿನಾಯ್ಕ ಮಾತನಾಡಿ, ಹೋಳಿ ಹಬ್ಬದಲ್ಲಿ ಕೆಲವು ಕಿಡಿಗೇಡಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರೋಡಿನಲ್ಲಿ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಣ್ಣ ಎರಚುವುದು ಹಾಗೂ ನೀರು ಹಾಕುವುದು, ಬಲವಂತವಾಗಿ ಮೊಟ್ಟೆ ಹೊಡೆಯುವುದು ಅಲ್ಲಲ್ಲಿ ಕಂಡುಬರುತ್ತದೆ. ಈ ಬಗ್ಗೆ ಪೊಲೀಸರು ಗಮನ ಹರಿಸಬೇಕು ಎಂದು ತಿಳಿಸಿದರು.
ಹೋಳಿ, ಷಬ್ ಎ ಬರಾತ್ ಹಬ್ಬ ಹಾಗೂ ದುರ್ಗಾದೇವಿ ಜಾತ್ರೆಯ ಪ್ರಯುಕ್ತ ನಗರದಲ್ಲಿ ನೀರು, ಸ್ವತ್ಛತೆ, ವಿದ್ಯುತ್ ಹಾಗೂ ಎಲ್ಲ ರೀತಿಯ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ಇಡೀ ಜಗತ್ತಿನಲ್ಲೇ ನಾವು ಭಾರತಿಯರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಯಾವುದೇ ಮಸೀದಿಗಳಲ್ಲಿ ಮಂದಿರಗಳಲ್ಲಿ ಹಿಂದೂ ಮುಸ್ಲಿಂ ಗಲಾಟೆಗಳು ಕಂಡುಬಂದಿಲ್ಲ, ಆದರೂ, ಕೆಲವು ಕಿಡಿಗೇಡಿಗಳು ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡು ಕೋಮುಗಲಭೆಸೃಷ್ಟಿಸುತ್ತಾರೆ. ಆದ್ದರಿಂದ ನಾವು ಅಂತಹವುಗಳ ಬಗ್ಗೆ ಗಮನಹರಿಸದೆ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸೋಣ ಎಂದರು.
ಮುಸ್ಲಿಂ ಸಮಾಜದ ಮುಖಂಡ ಸಾದಿಕ್ ಪೈಲ್ವಾನ್ ಮಾತನಾಡಿ, ಮುಸ್ಲಿಮರು ಸಂಪ್ರದಾಯದಂತೆ ನಮಾಜ್ ನಂತರ ಹಿರಿಯರಿಗೆ ಪ್ರಾರ್ಥನೆ ಸಲ್ಲಿಸುವುದು ಕೇವಲ 10 ರಿಂದ 15 ನಿಮಿಷದಲ್ಲಿ ಮುಗಿದು ಹೋಗುತ್ತದೆ. ಈ ಹಿಂದೆ ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಯಾವುದೇ ಅಹಿತಕರ ಘಟನೆಗಳು ಆಗದಂತೆ ತಿಳಿ ಹೇಳಿದ್ದೇವೆ. ಮುಂದೆಯೂ ಕೂಡ ಇದೇ ರೀತಿ ಸಹಕರಿಸಲಿದ್ದೇವೆ. ಹಿಂದೂ-ಮುಸ್ಲಿಮರು ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದೇವೆ. ಒಂದೇ ತಾಯಿಯ ಮಕ್ಕಳಂತೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಿದ್ದೇವೆ. ಇತರ ಜಿಲ್ಲೆಗೂ ಮಾದರಿಯಾಗುವಂತೆ ಹಬ್ಬ ಆಚರಿಸೋಣ ಎಂದು ಮನವಿ ಮಾಡಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ ಬಸರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡರಾದ ಎಲ್.ಡಿ. ಗೋಣೆಪ್ಪ, ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್, ಉಪಮೇಯರ್ ಗಾಯತ್ರಿಬಾಯಿ, ಕೆ.ಬಿ. ಶಂಕರನಾರಾಯಣ್, ಮಹಮ್ಮದ್ ಸಿರಾಜ್, ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.