ಭಾಗ್ಯಗಳ ಯೋಜನೆಗೆ ಕೇಂದ್ರದ ಹಣ
Team Udayavani, Jul 5, 2017, 3:19 PM IST
ಚನ್ನಗಿರಿ: ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಹಲವು ಭಾಗ್ಯಗಳ ಯೋಜನೆಗೆ ಶೇ.90 ಹಣ ಕೇಂದ್ರದಿಂದ ಬರುತ್ತದೆ. ಆದರೆ ಭಾಗ್ಯಗಳ ಯೋಜನೆ ನಮ್ಮ ಸರ್ಕಾರದ್ದೆ ಎಂದು ರಾಜ್ಯ ಸರ್ಕಾರ ಬಿಂಬಿಸುತ್ತಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.
ಪಟ್ಟಣದ ರುಕ್ಕುಮಾಯಿ ಕಲ್ಯಾಣ ಮಂಟಪದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನಿಲ ಸಂಪರ್ಕ ಮೇಳ
ಹಾಗೂ ಸುರಕ್ಷತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಜನತೆ ಯಾವ ಸರ್ಕಾರ ಅನುದಾನ ನೀಡುತ್ತಿದೆ ಎಂದು ಮನಗಾಣಬೇಕು. ರೈತರು ಬ್ಯಾಂಕ್‌ಗಳಲ್ಲಿ ತಾವು ಬೆಳೆದ ಬೆಳೆಗಳಿಗೆ ಬೆಳೆವಿಮೆ ಮಾಡಿಸಿಕೊಳ್ಳಬೇಕು. ಇದು ಮುಂದಿನ ದಿನಗಳಲ್ಲಿ ಫಲಕಾರಿ ಆಗುತ್ತದೆ. ಕೇಂದ್ರ ಸರ್ಕಾರ ಅನೇಕ ಯೋಜನೆಗಳು ಜನಪರವಾಗಿ ಇದ್ದು, ಇದನ್ನು ಜನತೆ ಬಳಕೆ ಮಾಡಿಕೊಳ್ಳಬೇಕು ಎಂದರು.
ಪ್ರಧಾನಮಂತ್ರಿಗಳು ಜಿಎಸ್‌ಟಿ ಜಾರಿಗೆ ತರುವುದರ ಮೂಲಕ ದೇಶದಲ್ಲಿ ಅರ್ಥ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. ಮೂರು ವರ್ಷದ ಆಡಳಿತದಲ್ಲಿ ಸ್ವತಂತ್ರಪೂರ್ವದಲ್ಲಿ ಯಾವೊಬ್ಬ ಪ್ರಧಾನ ಮಂತ್ರಿಗಳು ಮಾಡಿರದ ಕೆಲಸಗಳನ್ನು ಮೋದಿಜೀ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರತಿಯೊಬ್ಬ ಬಿಪಿಎಲ್ ಕಾಡ್ ìದಾರರಿಗೆ ಮುಂದಿನ ದಿನಗಳಲ್ಲಿ ಗ್ಯಾಸ್
ನೀಡುವ ಚಿಂತನೆಯಲ್ಲಿ ಕೇಂದ್ರ ಸರ್ಕಾರ ಆಲೋಚನೆ ನಡೆಸಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಜಿಲ್ಲೆಯಲ್ಲಿ 11500 ಫಲಾನುಭವಿಗಳು ಆಗಿದ್ದು ತಾಲೂಕಿನಲ್ಲಿ 1470 ಫಲಾನುಭವಿಗಳ ಆಯ್ಕೆ ನಡೆದಿದೆ. ಒಟ್ಟು ಈ ಯೋಜನೆಗೆ 8 ಸಾವಿರ ಕೋಟಿ ಹಣ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ ಎಂದರು.
ತಾಪಂ ಅಧ್ಯಕ್ಷೆ ಸುಜಾತ ಬಸವರಾಜ್ ಮಾತನಾಡಿ, ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳು
ಜಾರಿಯಲ್ಲಿವೆ. ಅವುಗಳ ಬಗ್ಗೆ ತಿಳಿಸುವಂತಹ ನಿಟ್ಟಿನಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು. ಮುಂಬರುವಂತಹ
ಚುನಾವಣೆಯಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಈಗಾಗಲೇ ತಾಲೂಕಿನಲ್ಲಿ
ಬಿಜೆಪಿ ಆಡಳಿತದಲ್ಲಿ ನಡೆದಿರುವಂತಹ ಕಾಮಗಾರಿಗಳು ಮಾತ್ರ ಜನತೆ ನೋಡುತ್ತಿದ್ದಾರೆ. ಪಟ್ಟಣದಲ್ಲಿ ಅಭಿವೃದ್ಧಿ
ಎಂಬುದು ಮರಿಚೀಕೆಯಾಗಿರುವುದು ಕಾಣಬಹುದು. ಆದ್ದರಿಂದ ಕಾರ್ಯಕರ್ತರು ಬಿಜೆಪಿಯ ಸಾಧನೆ ಬಗ್ಗೆ ಮನೆ-ಮನೆಗೂ ತಲುಪಿಸಿ ಸಂಘಟನೆ ಮಾಡಬೇಕು ಎಂದರು.
ಶಾಸಕ ಮಾಡಾಳು ವಿರೂಪಾಕ್ಷಪ್ಪ, ಜಿಪಂ ಸದಸ್ಯರಾದ ಸಾಕಮ್ಮ, ಯಶೋಧಮ್ಮ, ಮಂಜುಳಾ, ಲೋಕೇಶಪ್ಪ, ಪುರಸಭೆ ಉಪಾಧ್ಯಕ್ಷೆ ಸುನಿತಾ ಗಣೇಶ್, ಮಾಲತೇಶ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.