ಹರಿಹರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

Team Udayavani, Feb 11, 2017, 12:49 PM IST

dvg6.jpg

ಹರಿಹರ: ಮಧ್ಯ ಕರ್ನಾಟಕದಲ್ಲೇ ಪ್ರಸಿದ್ಧವಾದ ಶ್ರೀ ಹರಿಹರೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ನಗರದಲ್ಲಿ ಶುಕ್ರವಾರ ಶ್ರದ್ಧೆ, ಭಕ್ತಿ, ಸಡಗರದಿಂದ ನೆರವೇರಿತು. ಬೆಳಗ್ಗೆ ಗಣ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ ಆಗಮಿಸಿದ ರಥ ಶಿವಮೊಗ್ಗ ವೃತ್ತದವರೆಗೆ ಸಾಗಿ ದೇವಸ್ಥಾನಕ್ಕೆ ವಾಪಾಸಾಯಿತು.

ಸಾವಿರಾರು ಭಕ್ತಜನರು ಗೋವಿಂದಾ… ಗೋವಿಂದಾ…, ಹರ ಹರ ಮಹಾದೇವ್‌ ಎಂದು ಉದ್ಘೋಷಗಳನ್ನು ಕೂಗುತ್ತಾ ರಥ ಎಳೆದರು. ಕೆಲವರು ತೇರಿನ ಮುಕುಟಕ್ಕೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. 

ಮಹಿಳೆಯರು ಉದ್ದ ಸಾಲಿನಲ್ಲಿ ನಿಂತು, ಪುರಾಣ ಪ್ರಸಿದ್ಧ ಹರಿಹರೇಶ್ವರನ ದರ್ಶನ ಪಡೆದು, ಹೂ, ಹಣ್ಣು, ಕಾಯಿ ಸಮರ್ಪಿಸಿದರು. ಮಾಜಿ ಶಾಸಕ ಬಿ.ಪಿ.ಹರೀಶ್‌, ಕಾಂಗ್ರೆಸ್‌ ಮುಖಂಡ ಎಸ್‌.ರಾಮಪ್ಪ, ಜಿಪಂ ಮಾಜಿ ಅಧ್ಯಕ್ಷ ಎಸ್‌.ಎಂ.ವೀರೇಶ್‌, ನಗರಸಭೆ ಅಧ್ಯಕ್ಷೆ ಆಶಾ ಎಂ.ರಾವ್‌, ತಹಶೀಲ್ದಾರ್‌ ಜಿ.ನಳಿನ, ದೇವಸ್ಥಾನದ ಕಾರ್ಯದರ್ಶಿ ಎಚ್‌.ವೆಂಕಟೇಶ್‌, ಮುಜರಾಯಿ ಶಿರಸ್ತೆದಾರ ಎಚ್‌.ಬಿ.ಹಾಲೇಶ್‌, ಕಾರ್ಯ ನಿರ್ವಾಹಕಿ ಸಂಗೀತಾ ಕೆ. ಜೋಶಿ, ಶಾನಭೋಗರಾದ ಎಸ್‌.ಗಣಪತಿರಾವ್‌, ಎಚ್‌.ಗಿರೀಶ್‌, ಪಟೇಲರಾದ ಜಿ.ಚನ್ನಬಸಪ್ಪ, ಗುರುಪ್ರಸಾದ್‌, ಜನಪ್ರತಿನಿಧಿಗಳು ಭಾಗವಹಿಸಿದ್ದರು. 

ದೇವಸ್ಥಾನದ ಸಮೀಪದ ಬಿರ್ಲಾ ಕಲ್ಯಾಣ ಮಂಟಪದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಭಕ್ತ ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಬಿಸಿಲಿನ ಧಗೆ ತಣಿಸಲು ಮಜ್ಜಿಗೆ, ಶರಬತ್‌ ಸಹ ವಿತರಿಸಲಾಯಿತು. ಶಿಬಾರಾ ವೃತ್ತದಲ್ಲೂ ಸಹ ಶಿಬಾರ ಸಮಿತಿ ವತಿಯಿಂದ ಮೈಲಾರ ಲಿಂಗೇಶ್ವರ ಜಾತ್ರೆಗೆ ತೆರಳುವ ಭಕ್ತರು ಹಾಗೂ ಹರಿಹರೇಶ್ವರ ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು. 

ಫೆ.11ರಂಧು ಬೆಳಗ್ಗೆ ಗಣಪತಿ ಪೂಜೆ, ರುದ್ರಾಭಿಷೇಕ, ಅಲಂಕಾರ, ಸ್ಥಾಪಿತ ದೇವತಾ ಪೂಜೆ, ನಾಂದಿ ಕಂಕಣ ವಿಸರ್ಜನೆ ಪೂಜೆ, ಧ್ವಜ ವಿಸರ್ಜನೆ, ಅವಭೃತ ಸ್ನಾನಗಳೊಂದಿಗೆ ಉತ್ಸವಾದಿಗಳು ಪೂರ್ಣಗೊಳ್ಳುವವು. ರಥೋತ್ಸವ ನಿಮಿತ್ತ ದೇವಸ್ಥಾನ ರಸ್ತೆಯಲ್ಲಿ ಖಾರಾ ಮಂಡಕ್ಕಿ, ಬೆಂಡು, ಬತಾಸೆ, ಮಕ್ಕಳ ಆಟಿಕೆ, ಬಳೆ ಸೇರಿದಂತೆ ಮಹಿಳೆಯರ ಅಲಂಕಾರಿಕ ವಸ್ತುಗಳ ನೂರಾರು ಅಂಗಡಿಗಳು ತಲೆಎತ್ತಿದ್ದು, 3 ದಿನ ಜಾತ್ರಾ ಸಡಗರ ನಡೆಯಲಿದೆ. 

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.