ಖಾಸಗಿ ಬಡಾವಣೆಗಳ ವಿನ್ಯಾಸ ಪರಿಶೀಲಿಸಿ
Team Udayavani, Apr 18, 2017, 12:52 PM IST
ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಖಾಸಗಿ ಬಡಾವಣೆಗಳ ವಿನ್ಯಾಸ ತಿಳಿಯಲು ಸೂಕ್ತ ಪರಿಶೀಲನೆ ನಡೆಸಿ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.
ಸೋಮವಾರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆಗೆ ಸಂಬಂಧಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ನೀಡುತ್ತಿರುವ ಮಾಹಿತಿ ವ್ಯತಿರಿಕ್ತವಾಗಿದೆ. ಜೊತೆಗೆ ಅಕ್ರಮ ಬಡಾವಣೆ ನಿರ್ಮಾಣ ಕುರಿತು ದೂರು ಸಹ ಇವೆ.
ಈ ಬಗ್ಗೆ ಸಮರ್ಪಕವಾಗಿ ತಿಳಿಯಲು ಇಲಾಖೆಯಿಂದ ಸೂಕ್ತ ಪರಿಶೀಲನೆ ನಡೆಸಿ ಎಂದರು. ಇದಕ್ಕೂ ಮುನ್ನ ಪಾಲಿಕೆ ಸಿಪಿಐ ಸದಸ್ಯ ಎಚ್.ಜಿ. ಉಮೇಶ್ ಸಚಿವರಿಗೆ ದೂರು ನೀಡಿ, ನಗರದ ಅನೇಕ ಕಡೆ ನಿರ್ಮಾಣಗೊಂಡಿರುವ ಖಾಸಗಿ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯವೇ ಇಲ್ಲ.
ಪಾಲಿಕೆ, ದೂಡಾ ಅಧಿಕಾರಿಗಳು ಸ್ಥಳ ಪರಿಶೀಲಿಸದೇ ಡೋರ್ ನಂಬರ್ ನೀಡುತ್ತಾರೆ. ಬಡಾವಣೆಗಳ ವಿನ್ಯಾಸಕ್ಕೆ ಅನುಮತಿ ನೀಡುತ್ತಿದ್ದಾರೆ. ಅನೇಕ ಬಡಾವಣೆಗಳಲ್ಲಿ ಕುಡಿಯುವ ನೀರು, ಒಳಚರಂಡಿ ಸಮಸ್ಯೆ ಇದೆ. ಇದೀಗ ಪಾಲಿಕೆ ಹಣದಿಂದ ಇವುಗಳ ದುರಸ್ತಿ ಮಾಡಬೇಕಾದ ಸ್ಥಿತಿ ಇದೆ ಎಂದು ದೂರಿದ್ದರು.
ದೂರು ಕುರಿತು ಸಚಿವ ಬೇಗ್ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ಪಾಲಿಕೆ ಅಧಿಕಾರಿಗಳಿಂದ ಬಡಾವಣೆಗಳ ನಿರ್ಮಾಣ ಕುರಿತು ಮಾಹಿತಿ ಪಡೆದರು. ದೂಡಾ ಅಧಿಕಾರಿ ರೇಣುಕಾ ಪ್ರಸಾದ್, ಪಾಲಿಕೆ ವ್ಯಾಪ್ತಿಯಲ್ಲಿ 500 ಖಾಸಗಿ ಬಡಾವಣೆಗಳಿದ್ದು, ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು.
ಇನ್ನು ಪಾಲಿಕೆ ಆಯುಕ್ತ ಬಿ.ಎಚ್.ನಾರಾಯಣಪ್ಪ, 4000-5000 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಆಗಿವೆ. 4000 ಖಾಸಗಿ ಬಡಾವಣೆ ಇವೆ ಎಂದಿದ್ದರು. ಇದನ್ನು ಆಲಿಸಿದ ನಂತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಮೊದಲು ಸಮರ್ಪಕವಾಗಿ ಪರಿಶೀಲನೆ ನಡೆಸಿ ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಮೇಯರ್ ಅನಿತಾ ಮಾಲತೇಶ್, ಉಪ ಮೇಯರ್ ಜಿ. ಮಂಜಮ್ಮ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಭೀಮಾಶಂಕರ್ ಎಸ್. ಗುಳೇದ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಅನಿರುದ್ಧ ಶ್ರವಣ್, ದೂಡಾ ಅಧ್ಯಕ್ಷ ರಾಮಚಂದ್ರಪ್ಪ ಇತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.