ಚಿರತೆ ಬೋನಿಗೆ ಬಿದ್ದಿಲ್ಲ ಎಂದು ಕೊಂದೇ ಬಿಟ್ಟರು!

Team Udayavani, Jul 3, 2017, 3:45 AM IST

Ban03071701Medn.jpg

ಮನುಷ್ಯ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ಇಂದು ನಿನ್ನೆಯದಲ್ಲ. ನಿರಂತರವಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಎರಡು ಪ್ರತ್ಯೇಕ ಘಟನೆಗಳು ಸಾಕ್ಷಿಯಾಗಿದ್ದು, ನಾಡಿಗೆ ಬಂದ ಚಿರತೆಯೊಂದನ್ನು ರೊಚ್ಚಿಗೆದ್ದ ಗ್ರಾಮಸ್ಥರು ಹೊಡೆದುರುಳಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದ್ದರೆ, ಚಿರತೆಯೊಂದು ದಾಳಿ ನಡೆಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೋಲಾರದ ಟೇಕಲ್‌ನಲ್ಲಿ ನಡೆದಿದೆ.

ಹರಪನಹಳ್ಳಿ: ಸೆರೆ ಹಿಡಿವ ಕಾರ್ಯಚರಣೆ ವೇಳೆ, ಚಿರತೆ ದಾಳಿಯಿಂದ ರೊಚ್ಚಗೆದ್ದ ಗ್ರಾಮಸ್ಥರು ಚಿರತೆಯನ್ನೇ ಹೊಡೆದು ಕೊಂದ ಘಟನೆ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಚಿರತೆ ದಾಳಿಯಿಂದ ನಂದಿಬೇವೂರು ಗ್ರಾಮದ ಸಿದ್ದೇಶ (35), ಹುಚ್ಚವ್ವಹಳ್ಳಿ ಮಲ್ಲೇಶ್‌ (34) ಶೇಕಾವಲಿ (34), ನಾಗೇಶಪ್ಪ (30) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಂದಿಬೇವೂರು ಗ್ರಾಮದ ಚಿಗಟೇರಿ ಬಸಪ್ಪ ಎಂಬುವವರ ಕನಕಾಂಬರ ಹೂವಿನ ತೋಟದಲ್ಲಿ ಕೂಲಿಕಾರರು ಹೂವನ್ನು ಬಿಡಿಸುವಾಗ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಭಯಭೀತರಾದ ಗ್ರಾಮಸ್ಥರು ತಕ್ಷನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಈ ವೇಳೆ ಚಿರತೆ ಪೊದೆಯಲ್ಲಿ ಅವಿತುಕೊಂಡಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ತೋಟದ ಸುತ್ತ ಬಲೆ ಹಾಕಿದ್ದಾರೆ. ಇದಾದ ಸ್ವಲ್ಪ ಸಮಯದಲ್ಲಿ ತೋಟದ ಸುತ್ತ ಜಮಾಯಿಸಿದ ಗ್ರಾಮಸ್ಥರ ಮೇಲೆ ಚಿರತೆ ದಾಳಿ ನಡೆಸಿದೆ. ದಾಳಿಯಿಂದ ಹಲವಾರು ಜನ ಗಾಯಗೊಂಡ ಪರಿಣಾಮ ರೊಚ್ಚಿಗೆದ್ದ ಗ್ರಾಮಸ್ಥರು ದೊಣ್ಣೆ ಹಿಡಿದು ಚಿರತೆ ಮೇಲೆ ಪ್ರತಿದಾಳಿ ನಡೆಸಿದ್ದು ಚಿರತೆ ಮೃತಪಟ್ಟಿದೆ.

ಚಿರತೆ ಶವವನ್ನು ವಶಕ್ಕೆ ಪಡೆದ ವಲಯ ಅರಣ್ಯಾಧಿಕಾರಿ ಅಬ್ದುಲ್‌ ಬಷೀರ್‌,  ಕಣವಿಹಳ್ಳಿ ಬಳಿಯ ಅರಣ್ಯ ಪ್ರವಾಸಿ ಮಂದಿರದ ಬಳಿ ಚಿರತೆ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಸಾಮಾನ್ಯವಾಗಿ ಚಿರತೆಯು ಮನುಷ್ಯನ ಮೇಲೆ ಆಕ್ರಮಣ ಮಾಡುವುದಿಲ್ಲ. ಇದೊಂದು ಆಕಸ್ಮಿಕ ಘಟನೆ ಆಗಿರಬಹುದು. ವ್ಯಕ್ತಿ ಮರದ ಕೆಳಗಡೆ ಮಲಗಿರುವಾಗ ಅಥವಾ ಮೂತ್ರವಿಸರ್ಜನೆ ಮಾಡುವಾಗ ತನ್ನಂತೆಯೇ ಒಂದು ಪ್ರಾಣಿ ಎಂದು ತಿಳಿದು ಚಿರತೆ ಇಲ್ಲಿ ಆಕ್ರಮಣ ಮಾಡಿರುವ ಸಾಧ್ಯತೆ ಇದೆ. ಸಂಜೆ ಹೊತ್ತು ಕಾಡಿನಲ್ಲಿ ಓಡಾಡುವುದನ್ನು ಕೆಲದಿನಗಳ ಕಾಲ ಕಡಿಮೆ ಮಾಡಬೇಕು.
– ಸಂಜಯ ಗುಬ್ಬಿ, ವನ್ಯಜೀವಿ ತಜ್ಞ

ಕೂಲಿ ಕಾರ್ಮಿಕನ ಅರ್ಧ ದೇಹ ತಿಂದ ಚಿರತೆ!
ಟೇಕಲ್‌:
ವಿಶ್ರಾಂತಿ ಪಡೆಯಲೆಂದು ಗಿಡದ ಕೆಳಗೆ ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ದಾಳಿ ನಡೆಸಿರುವ ಚಿರತೆಯೊಂದು ವ್ಯಕ್ತಿಯ ದೇಹದ ಅರ್ಧ ಭಾಗವನ್ನು ತಿಂದಿರುವ ಭೀಕರ ಘಟನೆ ಕೋಲಾರದ ವೀರಕಪುತ್ರ ಗ್ರಾಮದಲ್ಲಿ ನಡೆದಿದೆ.

ಟೇಕಲ್‌ ಹೋಬಳಿಯ ಬಂಡೂರು ಅಗ್ರಹಾರ ಗ್ರಾಮದ ವಾಸಿ ವೆಂಕಟೇಶಪ್ಪ(45) ಚಿರತೆ ಅಟ್ಟಹಾಸಕ್ಕೆ ಬಲಿಯಾದ ದುರ್ದೈವಿ. ಸುತ್ತಮುತ್ತಲ ಗ್ರಾಮಗಳಿಗೆ ಕೂಲಿಗಾಗಿ ತೆರಳುತ್ತಿದ್ದ ವೆಂಕಟೇಶಪ್ಪ, ಎಂದಿನಂತೆ ಕೂಲಿ ಕೆಲಸ ಮುಗಿಸಿ ಗ್ರಾಮಕ್ಕೆ ವಾಪಸ್ಸಾಗುವ ಸಂದರ್ಭ ವೀರಪುತ್ರ ಗ್ರಾಮದ ಬಳಿ ವಿಶ್ರಾಂತಿಗೆಂದು ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಸ್ಥಳಕ್ಕೆ ಭೇಟಿ ನೀಡಿದ ಮಾಲೂರು  ವಲಯ ಅರಣ್ಯಾಧಿಕಾರಿ ವಾಸುದೇವಮೂರ್ತಿ, ಜಿಲ್ಲಾ ವಲಯ ಅರಣ್ಯಾಧಿಕಾರಿ ರಾಮಲಿಂಗರೆಡ್ಡಿ ಮಾತನಾಡಿ, ಇಲಾಖೆಯಿಂದ ಸಿಗುವ 5 ಲಕ್ಷ ರೂ.ಪರಿಹಾರವನ್ನು ನೀಡುವ ಭರವಸೆ ನೀಡಿದರು. 

ಅಧಿಕಾರಿಗಳ ಮಾತಿಗೆ ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು ಮೃತನಿಗೆ ತಂದೆ-ತಾಯಿ ಸೇರಿದಂತೆ 7 ಮಂದಿ ಮಕ್ಕಳಿದ್ದು ಹೆಚ್ಚುವರಿ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದರು. ಗ್ರಾಮಸ್ಥರ ಮನವಿಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭ ಮಾಲೂರು ಶಾಸಕ ಮಂಜುನಾಥಗೌಡರು ಮೃತನ ಕುಟುಂಬಕ್ಕೆ 20 ಸಾವಿರ ಪರಿಹಾರ ನೀಡಿ ಸಾಂತ್ವನ ಹೇಳಿದರು.

ಚಿರತೆ ಹಾವಳಿ ತಪ್ಪಿಸಲು ಮನವಿ: ಟೇಕಲ್‌ ಹೋಬಳಿ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಿದ್ದು, ಕುರಿ, ಮೇಕೆ, ನಾಯಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸಿದ್ದರಿಂದ ಆತಂಕಗೊಂಡ ಗ್ರಾಮಸ್ಥರು, ಸೂಕ್ತ ಪರಿಹಾರ ನೀಡಿ ಚಿರತೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.