ಚಿಕ್ಕಹಾಲಿವಾಣ ಗ್ರಾಮ: ಕಾಮಗಾರಿ ಅವ್ಯವಹಾರ ತನಿಖೆಗೆ ಒತ್ತಾಯ
Team Udayavani, Dec 20, 2021, 4:39 PM IST
ದಾವಣಗೆರೆ: ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಹಾಲಿವಾಣ ಗ್ರಾಮದಲ್ಲಿ ಒಂದೇ ಕಾಮಗಾರಿಯನ್ನು ಮೂರು ಬಾರಿ ನಡೆಸಲಾಗಿದೆ ಎಂದು ಅನುದಾನ ಬಿಡುಗಡೆ ಮಾಡಿಸಿಕೊಂಡು ಭ್ರಷ್ಟಾಚಾರ ನಡೆಸಿರುವ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತನಿಖೆ ನಡೆಸಬೇಕು ಎಂದು ಗ್ರಾಮಸ್ಥ ಬಿ. ಪ್ರಕಾಶ್ ಬನ್ನೇರು ಒತ್ತಾಯಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ತಳವಾರ ಈರಪ್ಪ ಎಂಬುವರ ಹೊಲದಿಂದ ತಿಪ್ಪಾ ನಾಯ್ಕ ಎಂಬುವರ ಹೊಲದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಯೋಗ ಖಾತ್ರಿ, “ನಮ್ಮ ಹೊಲ ನಮ್ಮ ರಸ್ತೆ’ ಯೋಜನೆ ಹಾಗೂ ಮತ್ತೆ ಉದ್ಯೋಗ ಖಾತ್ರಿಯಡಿ ಕೈಗೊಳ್ಳಲಾಗಿದೆ. ಎರಡು ಬಾರಿ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲಾಗಿದೆ. ಈಗ ಮತ್ತೆ ಅದೇ ಕಾಮಗಾರಿಗೆ ಅನುದಾನ ಬಿಡುಗಡೆ ಹಂತದಲ್ಲಿದೆ.
ಕಾಮಗಾರಿಯನ್ನು ಮೂರು ಬಾರಿ ನಡೆಸಲಾಗಿದೆ ಎಂದು ಅನುದಾನ ಬಿಡುಗಡೆ ಮಾಡಿಸಿಕೊಂಡಿರುವ ಬಗ್ಗೆ ಪ್ರಶ್ನಿಸಿದರೆ ಹಲ್ಲೆಗೆ ಯತ್ನ ನಡೆಸಲಾಗಿದೆ. ಜೀವ ಬೆದರಿಕೆ ಹಾಕಲಾಗಿದೆ. ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಒಂದೇ ಕಾಮಗಾರಿಯನ್ನು ಮೂರು ಬಾರಿ ಮಾಡಿರುವಂತಹವರು ಗ್ರಾಮ ಪಂಚಾಯತಿ ಸದಸ್ಯರಾಗಿದ್ದರೆ ಸದಸ್ಯತ್ವ ರದ್ದುಪಡಿಸಬೇಕುಎಂದುಮುಖRಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನ ಸಂಬಂಧಿತ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದರು. ಗ್ರಾಮದ ಕೆ.ಎಸ್. ಹನುಮಂತಪ್ಪ, ಎಚ್. ಲಕ್ಷ್ಮಪ್ಪ, ಬಿ.ಕೆ. ಬಸವರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.