ಕಾಂಗ್ರೆಸ್‌ ಮತ್ತೂಂದು ಹೆಸರೇ ಭ್ರಷ್ಟಾಚಾರ

ಬಿಜೆಪಿ ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿಯನ್ನು ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಉದ್ಘಾಟಿಸಿದರು.

Team Udayavani, Jan 28, 2021, 3:47 PM IST

28-10

ಚಿತ್ರದುರ್ಗ: ಕಾಂಗ್ರೆಸ್‌ ಮುಕ್ತ ಭಾರತವೆಂದರೆ, ಭ್ರಷ್ಟಾಚಾರ ಮುಕ್ತ ಭಾರತ ಎಂದರ್ಥ. ಕಾಂಗ್ರೆಸ್‌ ಪಕ್ಷದ ಮತ್ತೂಂದು ಹೆಸರೇ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಆರೋಪಿಸಿದರು.
ನಗರದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2004 ರಿಂದ 2014 ರವರೆಗೆ ಡಾ.ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಅವ ಧಿಯಲ್ಲಿ ಸಾಲು ಸಾಲು ಹಗರಣಗಳು ನಡೆದವು. ಕೋಟ್ಯಂತರ ರೂ. ಲೂಟಿ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಒಂದೇ ಒಂದು ಹಗರಣ ನಡೆದಿಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಕೀರ್ತಿ ಮೋದಿ ಹಾಗೂ ವಾಜಪೇಯಿ ಅವರಿಗೆ ಸಲ್ಲಬೇಕು ಎಂದರು.
ಲಾಲ್‌ ಬಹದ್ದೂರು ಶಾಸ್ತ್ರಿ ಹೊರತುಪಡಿಸಿ ಕಾಂಗ್ರೆಸ್‌ನ ಬಹುತೇಕರು ಭ್ರಷ್ಟಾಚಾರದ ಕೊಳೆ ಅಂಟಿಸಿಕೊಂಡಿದ್ದಾರೆ. ಜವಾಹರಲಾಲ್‌ ನೆಹರೂ ಅವರಿಂದ ಮನಮೋಹನ್‌ ಸಿಂಗ್‌ವರೆಗೆ ಕಾಂಗ್ರೆಸ್‌ನ ಎಲ್ಲ ಪ್ರಧಾನಿಗಳು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ರಾಷ್ಟ್ರ
ಮತ್ತು ರಾಜ್ಯ ಘಟಕದ ಅಧ್ಯಕ್ಷರೇ ಜಾಮೀನು ಮೇಲೆ ಹೊರಗಿದ್ದಾರೆ ಎಂದು ಕುಟುಕಿದರು. ಭಾರತಕ್ಕೆ ಸ್ವಾತಂತ್ರ ತಂದುಕೊಟ್ಟ ಹಾಗೂ ಮಹಾತ್ಮ ಗಾಂ ಧೀಜಿ ಈ ಪಕ್ಷದಲ್ಲಿದ್ದ ಪುಣ್ಯ ಕಾಂಗ್ರೆಸ್‌ಗಿತ್ತು. ಈವರೆಗೆ ಈ ಎರಡು ಪುಣ್ಯಗಳು ಕಾಂಗ್ರೆಸ್‌ಗೆ ಮತ ತಂದುಕೊಟ್ಟವು. 1990 ರಲ್ಲಿ ಕಾಂಗ್ರೆಸ್‌ 1,900 ಶಾಸಕರನ್ನು ಹೊಂದಿದ್ದರೆ, ಬಿಜೆಪಿಗೆ ಮೂರು ಶಾಸಕರಿದ್ದರು. ಈಗ ಕಾಲ ಸಂಪೂರ್ಣ ಬದಲಾಗಿದ್ದು, ಬಿಜೆಪಿ 1,900 ಶಾಸಕರನ್ನು ಹೊಂದಿದೆ. ನಕಲಿ ಗಾಂಧಿ ಕುಟುಂಬದ ರಾಜಕಾರಣದಿಂದ ಕಾಂಗ್ರೆಸ್‌ ವಿರೋಧ ಪಕ್ಷವಾಗಲು ಸಾಧ್ಯವಾಗದ ಹೀನಾಯ
ಸ್ಥಿತಿ ತಲುಪಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್‌ ವಂಶಪಾರಂಪರ್ಯ ನಾಯಕತ್ವಕ್ಕೆ ಜೋತು ಬಿದ್ದು, ಜಾತಿ ರಾಜಕಾರಣಕ್ಕೆ ಕುಮ್ಮಕ್ಕು ನೀಡಿ, ಮಿತಿ ಮೀರಿದ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿತು. ವೋಟಿಗಾಗಿ ಧರ್ಮಗಳ ತುಷ್ಟೀಕರಣ ಮಾಡಿತು. ವಿಚಾರಧಾರೆ ಮರೆತು, ಮಹಾತ್ಮ ಗಾಂಧೀಜಿ ಅವರಿಗೆ ದ್ರೋಹ ಬಗೆದಿದೆ ಎಂದು ನಳೀನ್‌ಕುಮಾರ್‌ ಕಟೀಲ್‌ ಕಿಡಿಕಾರಿದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಬಿಜೆಪಿ ಬೆಳವಣಿಗೆ, ಕೇಂದ್ರ ಸರ್ಕಾರದ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ
ಕಾರ್ಯವೈಖರಿ ಸಹಿಸಲು ಸಾಧ್ಯವಿಲ್ಲದ ಶಕ್ತಿಗಳು ಗಲಭೆಗೆ ಕುಮ್ಮಕ್ಕು ನೀಡುತ್ತಿವೆ. ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನದ ಬಗ್ಗೆ ಯುವ ಶಕ್ತಿ
ಆಲೋಚಿಸುವ ಅಗತ್ಯವಿದೆ. ಇಂತಹ ಕೃತ್ಯಗಳನ್ನು ನೋಡಿ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಂ.ಚಂದ್ರಪ್ಪ, ಕೆ.ಪೂರ್ಣಿಮಾ, ವಿಧಾನ ಪರಿಷತ್‌ ಸದಸ್ಯ ಚಿದಾನಂದಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್‌, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಮಹೇಶ್‌ ತೆಂಗಿನಕಾಯಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಇದ್ದರು.

ಓದಿ : ವೀರಭದ್ರೇಶ್ವರ ರಥೋತ್ಸವ ಸಂಭ್ರಮ; ಜ.26ರ ರಾತ್ರಿ ರಥ ಎಳೆದ ಭಕ್ತರು

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.