ಖೋ ಖೋ ಕ್ರೀಡಾಪಟು ಶ್ರೀನಿವಾಸ್‌ಗೆ ಸನ್ಮಾನ
: ರಾಜ್ಯ ಖೋ ಖೋ ಸಂಸ್ಥೆ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಓ. ಶ್ರೀನಿವಾಸ್ ಅವರನ್ನು ಅಶೋಕ ನ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
Team Udayavani, Feb 25, 2021, 3:58 PM IST
ಚಳ್ಳಕೆರೆ: ನಗರದ ಅಶೋಕ ನ್ಪೋರ್ಟ್ಸ್ ಕ್ಲಬ್‌ನ ಖೋ ಖೋ ತಂಡದ ಆಟಗಾರ ಒ. ಶ್ರೀನಿವಾಸ್ ಅವರು ರಾಜ್ಯ ಖೋ ಖೋ ಸಂಸ್ಥೆಯ ಜಂಟಿ
ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಶೋಕ ನ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರೀನಿವಾಸ್ ಅವರನ್ನು
ಅಭಿನಂದಿಸಿ ಸನ್ಮಾನಿಸಲಾಯಿತು.
ನೂತನ ಜವಾಬ್ದಾರಿಯಲ್ಲಿ ಇನ್ನೂ ಉತ್ತಮವಾಗಿ ಕಾರ್ಯ ನಿರ್ವಹಿಸಿ ಖ್ಯಾತಿ ಗಳಿಸುವಂತೆ ಕ್ಲಬ್ ಕಾರ್ಯದರ್ಶಿ ನಾರಾಯಣರಾವ್ ಮೋಹಿತೆ ಆಶಿಸಿದರು. ಅಶೋಕ ನ್ಪೋರ್ಟ್ಸ್ ಕ್ಲಬ್ ಕಳೆದ ಹಲವಾರು ವರ್ಷಗಳಿಂದ ಯುವ ಆಟಗಾರರನ್ನು ಗುರುತಿಸಿ ಪ್ರೋತ್ಸಾಹಿಸುತ್ತ ಬಂದಿದೆ. ಹಲವಾರು ಆಟಗಾರರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಓ. ಶ್ರೀನಿವಾಸ್ ಖೋ ಖೋ ಪಂದ್ಯಾವಳಿಯನ್ನು ಹೆಚ್ಚೆಚ್ಚು ಆಯೋಜಿಸಿ ಆಟಗಾರರಿಗೆ ಉತ್ತೇಜನ ನೀಡಬೇಕೆಂದರು. ರಾಜ್ಯ ಖೋ ಖೋ ಸಂಸ್ಥೆಯ
ಜಂಟಿ ಕಾರ್ಯದರ್ಶಿ ಓ. ಶ್ರೀನಿವಾಸ್ ಮಾತನಾಡಿ, ನಾನು ಈ ಮಟ್ಟಕ್ಕೆ ಬೆಳೆಯಲು ಅಶೋಕ ನ್ಪೋರ್ಟ್ಸ್ ಕ್ಲಬ್ ಪ್ರಮುಖ ಕಾರಣ.
ನಾರಾಯಣರಾವ್ ಅವರ ಮಾರ್ಗದರ್ಶನದಲ್ಲಿ ನಾನು ಈ ಸಾಧನೆ ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ಖೋ ಖೋ ಪಂದ್ಯಾವಳಿಯನ್ನು ಹೆಚ್ಚೆಚ್ಚು ಆಯೋಜಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಎಂ. ಯತೀಶ್, ಪಾಪಣ್ಣ, ಮಂಜುನಾಥ, ಮರವಾಯಿ ಶ್ರೀನಿವಾಸ್, ಶ್ರೀಧರ್, ಅನಿಲ್ ಕುಮಾರ್, ರಾಜೇಶ್, ಸಿದ್ದೇಶ್, ನಾಗರಾಜು, ಶಿವಕುಮಾರ್, ವಿ. ವೀರೇಶ್, ತಿಮ್ಮಣ್ಣ ಮತ್ತಿತರರು ಉಪಸ್ಥಿತರಿದ್ದರು.
ಓದಿ : ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.