ಚುನಾವಣೆಗೆ ರಣತಂತ್ರ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ : ಸಿಎಂ
Team Udayavani, Sep 18, 2021, 8:53 PM IST
ದಾವಣಗೆರೆ: ಮುಂಬರುವ ಚುನಾವಣೆಗಳನ್ನು ಯಾವ ರೀತಿ ಎದುರಿಸಬೇಕು. ಏನು ರಣತಂತ್ರ ರೂಪಿಸಬೇಕು ಎಂಬ ಬಗ್ಗೆ ದಾವಣಗೆರೆಯಲ್ಲಿ ರವಿವಾರ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರವಿವಾರ ನಡೆಯುವ ರಾಜ್ಯ ಕಾರ್ಯಕಾರಿಣಿ ಸಭೆ ನಿಮಿತ್ತ ಶನಿವಾರ ಸಂಜೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಖಾಸಗಿ ಹೋಟೆಲ್ ಸಭಾಭವನದಲ್ಲಿ ಏರ್ಪಡಿಸಿದ್ದ ದೀನ್ದಯಾಳ್, ಅಟಲ್ಜಿ ಹಾಗೂ ಮೋದಿ ಸಾಧನೆ ಕುರಿತ ವರ್ಣಚಿತ್ರಗಳ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷವನ್ನು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಇನ್ನಷ್ಟು ಬಲವರ್ಧನೆಗೊಳಿಸಲು ಚಿಂತನೆ ಮಾಡಲಾಗುವುದು. ಇದಲ್ಲದೇ ಪ್ರಸ್ತುತ ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ಸಚಿವರಾದ ಆರ್. ಅಶೋಕ್, ಶ್ರೀರಾಮುಲು ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್ಗಳ ತೀರ್ಪು ಆನ್ಲೈನ್ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.