CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆಗೆ ತಿರುಗೇಟು, ಶಿವಗಂಗಾ ಲೆಕ್ಕಕ್ಕಿಲ್ಲ ಎಂದ ಸಚಿವ ಎಸ್ಸೆಸ್ಸೆಂ
Team Udayavani, Jan 12, 2025, 10:18 PM IST
ಹರಪನಹಳ್ಳಿ: ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ನಡುವೆ ಏಟು-ತಿರುಗೇಟುಗಳು ಮುಂದುವರಿಯುತ್ತಲೇ ಇದೆ. ಡಿ.ಕೆ. ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರತ್ಯುತ್ತರ ನೀಡಿದ್ದಾರೆ.
ಪಟ್ಟಣದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಮ್ಮಲ್ಲಿ ಯಾವುದೇ ಭಿನ್ನಮತ ವಿಲ್ಲ, ಔತಣಕೂಟದಲ್ಲಿ ಊಟಕ್ಕೆ ಸೇರುವುದು ತಪ್ಪಲ್ಲ ಎಂದು ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಎಂದು ತಿಳಿಸಿದರು.
ಶಾಸಕ ಶಿವಗಂಗಾ ಲೆಕ್ಕಕ್ಕಿಲ್ಲ:
ಡಿ.ಕೆ.ಶಿವಕುಮಾರ ಸಿಎಂ ಆಗುತ್ತಾರೆ ಎಂಬ ಚನ್ನಗಿರಿ ಶಾಸಕ ಶಿವಗಂಗಾ ಹೇಳಿಕೆಗೆ ಉತ್ತರಿಸಿದ ಅವರು ಶಿವಗಂಗಾ ಯಾವ ಲೆಕ್ಕ ಆತ ನನ್ನ ವಿರುದ್ಧ ಕೂಡ ಮಾತನಾಡುತ್ತಾನೆ, ಆತ ಲೆಕ್ಕಕ್ಕಿಲ್ಲ ಎಂದು ನುಡಿದರು.
ಈರುಳ್ಳಿ ಘಟಕ ಸ್ಥಾಪನೆ
ಹರಪನಹಳ್ಳಿಯಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಈರುಳ್ಳಿ ಘಟಕ ಸ್ಥಾಪನೆಗೆ ಶಾಸಕರಿಂದ ಪ್ರಸ್ತಾವನೆ ಬಂದರೆ ಮಂಜೂರು ಮಾಡಿಸುವುದಾಗಿ ಅವರು ಭರವಸೆ ನೀಡಿದರು. ಪಟ್ಟಣದ ಪುರಸಭೆಯ ಮೇಲ್ದರ್ಜೆಗೇರಿಸಿ ನಗರಸಭೆಯಾಗಿ ಮಾಡಲು ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.