ನಾಯಕತ್ವ ಬದಲಾವಣೆಯಿಲ್ಲ, ದೆಹಲಿ ಭೇಟಿಗೆ ವಿಶೇಷ ಅರ್ಥ ಬೇಡ: ಭೈರತಿ ಬಸವರಾಜ್
Team Udayavani, Jul 18, 2021, 2:52 PM IST
ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದಯವರಿಯಲಿದ್ದಾರೆ. ಅವರ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದರು
ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಬದಲಾವಣೆ ಮಾಡಲಾಗುತ್ತದೆ ಎಂಬುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾಧ್ಯಮಗಳಲ್ಲಿ ಚರ್ಚೆಯಾದ ಮಾತ್ರಕ್ಕೆ ನಿಖರ ಅಲ್ಲ. ಯಡಿಯೂರಪ್ಪ ಅವರು ಖಚಿತವಾಗಿ ವಿಸ್ತರಣೆಯಾಗಲೀ, ಪುನಾರಚನೆ ಬಗ್ಗೆ ಆಗಲಿ ಎಲ್ಲಿಯೂ ಹೇಳಿಲ್ಲ. ಮಾಧ್ಯಮದಲ್ಲಿ ಚರ್ಚೆ ಆದಾಕ್ಷಣ ವಿಸ್ತರಣೆ ಆಗಿಬಿಡುತ್ತಾ? ಸಿಎಂ ಹೇಳಿದ್ರೆ ಮಾತ್ರ ಅದಕ್ಕೆ ಪುಷ್ಟಿ ಬರುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಚಿತ್ರರಂಗದ ವಿಚಾರ ಬೀದಿ ಚರ್ಚೆಗೆ ವಿಷಯವಾಗುವಂತೆ ಮಾಡಬೇಡಿ : ಮಾಧ್ಯಮಗಳಿಗೆ ಜಗ್ಗೇಶ ಮನವಿ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ. ದೆಹಲಿಗೆ ಯಾರು ಹೋಗಿ ಬರುತ್ತಿದ್ದಾರೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡುತ್ತೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ನಾನು ಮನೆ ಬಿಟ್ಟು ನಾಲ್ಕೈದು ದಿನ ಆಯ್ತು. ಜಿಲ್ಲಾ ಪ್ರವಾಸದಲ್ಲಿದ್ದೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದೇವೆ. ಅಭಿವೃದ್ಧಿಗೆ ವೇಗ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.