ಬಿಎಸ್ವೈ ವಿರುದ್ಧ ಎಸಿಬಿಗೆ ದೂರು
Team Udayavani, Feb 12, 2019, 6:10 AM IST
ದಾವಣಗೆರೆ: ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಣದ ಆಮಿಷ ತೋರಿಸಿ, ಭ್ರಷ್ಟಾಚಾರಕ್ಕೆ ಪ್ರಚೋದನೆ ನೀಡಿರುವ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿವೆ.
ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅನ್ಯ ಪಕ್ಷದ ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಣ, ಅಧಿಕಾರದ ಆಮಿಷ ಒಡ್ಡುವ ಮೂಲಕ ಭ್ರಷ್ಟಾಚಾರಕ್ಕೆ ಪ್ರೇರೆಪಿಸುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐನ ಜಿಲ್ಲಾ ಘಟಕದ ಪದಾಧಿಕಾರಿಗಳು ಎಸಿಬಿ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಕೆ.ಎಸ್. ಹರೀಶ್, ಎಲ್.ಎಚ್. ಸಾಗರ್, ಪ್ರಧಾನ ಕಾರ್ಯದರ್ಶಿ ಪ್ರಮೋದ್, ಕೆ.ವಿ. ಜಾವಿದ್, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಆಲಿ ರಹಮತ್ ಪೈಲ್ವಾನ್, ಚಂದ್ರು, ವಿನಯ್ ಜೋಗಪ್ಪ ಇತರರು ದೂರು ಸಲ್ಲಿಸಿದ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.