‘ಕಡ್ಡಾಯ ಹಾಜರಾತಿ’ ಗೆ ಖಾತ್ರಿ ಕಾರ್ಮಿಕರ ಕೆಂಗಣ್ಣು


Team Udayavani, Apr 13, 2022, 2:29 PM IST

labours

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಎನ್‌ಎಂಎಂಎಸ್‌ ಆ್ಯಪ್‌ (ನ್ಯಾಶನಲ್‌ ಮೊಬೈಲ್‌ ಮಾನಿಟರಿಂಗ್‌ ಸಿಸ್ಟಮ್‌) ಮೂಲಕ ದಿನಕ್ಕೆ ಎರಡು ಬಾರಿ ಕಡ್ಡಾಯ ಹಾಜರಾತಿ ಹಾಕಬೇಕೆಂಬ ಕೇಂದ್ರ ಸರ್ಕಾರದ ನಿಯಮ ಕಾರ್ಮಿಕರ ಕಣ್ಣು ಕೆಂಪಾಗಿಸಿದೆ.

ಬೇಸಿಗೆಯ ಸಮಯದಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸರಾಸರಿ 35-40 ಡಿ.ಸೆ.ವರೆಗೂ ಬಿಸಿಲಿನ ಪ್ರಖರತೆ ಇರುತ್ತದೆ. ಸರ್ಕಾರದ ಈ ಕಡ್ಡಾಯ ನಿಯಮಾವಳಿಯಿಂದ ಹಾಜರಾತಿಗಾಗಿ ಬಿರುಬಿಸಿಲಿನಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಕಾದು ಕುಳಿತು ಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಬಿಸಿಲಿನ ಕಾರಣದಿಂದ ಕೇಂದ್ರ ಸರ್ಕಾರ ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ 14 ಜಿಲ್ಲೆಗಳಲ್ಲಿ ಕೆಲಸದ ಪ್ರಮಾಣ ದಲ್ಲಿ ರಿಯಾಯಿತಿ ನೀಡಿದೆ. ಆದರೆ ಎರಡು ಬಾರಿಯ ಹಾಜರಾತಿ ಕಡ್ಡಾಯದಿಂದ ಕಾರ್ಮಿಕರು ಇಡೀ ದಿನ ಬಿಸಿಲಲ್ಲಿ ಬೇಯುವಂತಾಗಿದೆ.

ಆ್ಯಪ್‌ ಮೂಲಕ ಹಾಜರಾತಿ ಹಾಕುವ ನಿಯಮವನ್ನು ಕೇಂದ್ರ ಸರ್ಕಾರ ರಾಜ್ಯದಲ್ಲಿ ಜನವರಿಯಿಂದಲೇ ಆರಂಭಿಸಿದೆ. ಆದರೆ, ಕಳೆದ 3 ತಿಂಗಳಲ್ಲಿ ಇದು ಎಲ್ಲೆಡೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಕೆಲವರು ಬೆಳಗ್ಗೆ ಮಾತ್ರ ಹಾಜರಾತಿ ಹಾಕಿದರೆ, ಮತ್ತೆ ಕೆಲವರು ಸಂಜೆ ಮಾತ್ರ ಹಾಜರಾತಿ ಹಾಕಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾ ಲಯ ದಿನಕ್ಕೆ ಎರಡು ಬಾರಿ ಹಾಜರಾತಿಯನ್ನು ಹೊಸ ಆರ್ಥಿಕ ವರ್ಷ ಏಪ್ರಿಲ್‌ನಿಂದ ಕಡ್ಡಾಯ ಗೊಳಿಸಿದ್ದು ಇದು ಕಾರ್ಮಿಕರ ನಿದ್ದೆಗೆಡಿಸಿದೆ.

ಎರಡು ಬಾರಿ ಹಾಜರಾತಿ ಕಡ್ಡಾಯ

ಸರ್ಕಾರದ ಈ ನಿಯಮದಿಂದಾಗಿ ಕೂಲಿ ಕಾರ್ಮಿಕರು ಬೆಳಗ್ಗೆ 11 ಗಂಟೆಯೊಳಗೆ ಹಾಗೂ ಮಧ್ಯಾಹ್ನ 2ರಿಂದ 5 ಗಂಟೆಯೊಳಗೆ ಎರಡು ಬಾರಿ ಕೂಲಿಕಾರರ ಹಾಜರಾತಿ ಹಾಗೂ ಛಾಯಾಚಿತ್ರವನ್ನು ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕಾಗಿದೆ.

ಸಾಮಾನ್ಯವಾಗಿ ಕೂಲಿ ಕಾರ್ಮಿಕರು ಬೇಸಿಗೆ ದಿನಗಳಲ್ಲಿ ಬೆಳಗ್ಗೆ ಆರು ಗಂಟೆಯಿಂದಲೇ ಕೆಲಸಕ್ಕೆ ಬಂದು 11ರಿಂದ 12 ಗಂಟೆವರೆಗೆ ಕೆಲಸ ಮಾಡಿ ಹೋಗುತ್ತಿದ್ದರು. ಈ ಆ್ಯಪ್‌ ಹಾಜರಾತಿ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಇದರ ಪಾಲನೆ ನರೇಗಾ ಕೂಲಿ ಕಾರ್ಮಿಕರಿಗೆ ಕಷ್ಟವಾಗಿದೆ. ದಿನವೊಂದಕ್ಕೆ ನಿಗದಿಗೊಳಿಸಿದ ಕೆಲಸವನ್ನು ಬೆಳಗ್ಗೆ 6-7 ಗಂಟೆಗೆ ಬಂದು 12 ಗಂಟೆಯೊಳಗೆ ಮುಗಿಸಿದರೂ ಎರಡನೇ ಹಾಜರಾತಿಗಾಗಿ ಮಧ್ಯಾಹ್ನ 2 ಗಂಟೆವರೆಗೂ ಕಾಯಬೇಕಾದ ಈ ವ್ಯವಸ್ಥೆ ಕಾರ್ಮಿಕರ ಬೇಸಿಗೆ ಬೇಗೆಯನ್ನು ಇನ್ನಷ್ಟು ಹೆಚ್ಚಿಸಿದಂತಾಗಿದೆ.

ಬೇಸಿಗೆ ಸಮಯ ಎಷ್ಟು ಸರಿ?

ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಬೇಸಿಗೆ ದಿನಗಳಲ್ಲಿ ಕಚೇರಿ ಅವಧಿ ಬದಲಾಯಿಸಿ ಅನುಕೂಲ ಮಾಡಿಕೊಡುವ ಸರ್ಕಾರ, ಬಯಲಲ್ಲಿ ನಿಂತು ಕೆಲಸ ಮಾಡುವವರಿಗೆ ಈ ರೀತಿಯ ನಿಯಮಾವಳಿ ಹೇರುವುದು ಸರಿಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ನಿಯಮಗಳನ್ನು 20ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುವ ಕಾಮಗಾರಿಗಳಿಗೆ ಮಾತ್ರ ಕಡ್ಡಾಯಗೊಳಿಸಿದ್ದು ಇದರಿಂದ ದೊಡ್ಡ ಕಾಮಗಾರಿಗಳಲ್ಲಿ ಭಾಗವಹಿಸಲು ಕಾರ್ಮಿಕರು ಹಿಂದೇಟು ಹಾಕುವ ಪರಿಸ್ಥಿತಿಯೂ ನಿರ್ಮಾಣವಾಗಬಹುದು ಎಂಬುದು ಕಾರ್ಮಿಕ ಸಂಘಟನೆಗಳ ಆತಂಕ.

ಒಟ್ಟಾರೆ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಸರ್ಕಾರ ಆ್ಯಪ್‌ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ಕಡ್ಡಾಯಗೊಳಿಸಿದೆ. ಆದರೆ ಈ ನಿಯಮಾವಳಿಯಿಂದ ಬೇಸಿಗೆಯ 3 ತಿಂಗಳಾದರೂ ವಿನಾಯಿತಿ ನೀಡಬೇಕು ಎಂಬುದು ಕಾರ್ಮಿಕರ ಅಪೇಕ್ಷೆ.

ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಎರಡೂ ಹಾಜರಾತಿ ಪಡೆಯುವಂತಾಗಬೇಕು. ಎರಡನೇ ಹಾಜರಾತಿಗಾಗಿ ಮಧ್ಯಾಹ್ನದವರೆಗೆ ಬಿರುಬಿಸಿಲಲ್ಲಿ ಕಾಯಲು ಆಗದು. ಸರ್ಕಾರ ಹಾಜರಾತಿ ಸಮಯ ಬದಲಾವಣೆ ಮಾಡದಿದ್ದರೆ ನರೇಗಾ ಕೂಲಿಗೆ ಬರುವ ಕಾರ್ಮಿಕರ ಸಂಖ್ಯೆಯೂ ಕ್ಷೀಣಿಸುವ ಸಾಧ್ಯತೆ ಇದೆ. -ಕೋಗಳಿ ಮಲ್ಲೇಶ್‌, ಖಜಾಂಚಿ, ರಾಜ್ಯ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ದಿನಕ್ಕೆ ಎರಡು ಬಾರಿ ಕಾರ್ಮಿಕರ ಹಾಜರಾತಿಯನ್ನು ಏಪ್ರಿಲ್‌ನಿಂದ ಕಡ್ಡಾಯಗೊಳಿಸಲಾಗಿದೆ. ಬೆಳಗ್ಗೆ 11 ಗಂಟೆಯೊಳಗೆ ಮೊದಲ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯೊಳಗೆ ಎರಡನೇ ಹಾಜರಾತಿ ಹಾಕಬೇಕಾಗಿದೆ. -ಡಾ| ಎ.ಚನ್ನಪ್ಪ, ದಾವಣಗೆರೆ ಜಿಪಂ ಸಿಇಒ

-ಎಚ್. ಕೆ. ನಟರಾಜ್

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.