LS Polls: ಜಾತಿ ವಿಷಬೀಜ ಬಿತ್ತಿ ಜನರ ಹಣ ಲೂಟಿ ಮಾಡಿದ್ದೇ ಕಾಂಗ್ರೆಸ್‌ ಸಾಧನೆ: ಗಾಯಿತ್ರಿ

ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಮೋದಿ ಮತ್ತೂಮ್ಮೆ ಪ್ರಧಾನಿಯಾಗೋದು ಅನಿವಾರ್ಯ

Team Udayavani, Apr 6, 2024, 10:08 AM IST

2-dvg

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಕಂಡು ಇಡೀ ವಿಶ್ವವೇ ಕೊಂಡಾಡುತ್ತಿದೆ. 60 ವರ್ಷದಲ್ಲಿ ಕಾಂಗ್ರೆಸ್‌ ಮಾಡದಿರುವ ಅಭಿವೃದ್ಧಿ ಕೆಲಸಗಳನ್ನು ಮೋದಿ ಅವರು ಕೇವಲ 10 ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ತಿಳಿಸಿದರು.

ಶುಕ್ರವಾರ ಚನ್ನಗಿರಿ ತಾಲೂಕಿನ ದೊಡ್ಡಣ್ಣಗೆರೆ, ಚಿಕ್ಕಣ್ಣಗೆರೆ, ಎಸ್‌.ಬಿ.ಆರ್‌ ಕಾಲೋನಿ, ಕಸ್ತೂರಿ ಬಾ ನಗರ, ಸಿದ್ಧನಮಠ, ಯಕ್ಕೆಗೊಂದಿ, ಕೊಮ್ಮಾರನಹಳ್ಳಿ, ತೊಪೇನಳ್ಳಿ, ಕಲ್ಲೇನಹಳ್ಳಿ, ಮೇದಿಕೆರೆ, ಮಂಗೇನಹಳ್ಳಿ, ಮರಡಿ, ತಣಿಗೆರೆ, ಉಪನಾಯಕನಹಳ್ಳಿ, ಭೀಮನೆರೆ, ಬೆಳ್ಳಿಗನೂಡು, ಚಿಕ್ಕಕೊಗಲೂರು, ಮಲ್ಲಾಪುರ, ಮಲ್ಲಾಪುರ ಗೋಮಾಳ, ಅಲೂರು, ಹಿರೇಕೊಗಲೂರು, ಗಿರಿಯಾಪುರ, ಈರಗನಹಳ್ಳಿ, ವೆಂಕಟೇಶ್ವರ ಕ್ಯಾಂಪ್‌, ಕೆಂಚನಹಳ್ಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಅವರು, ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾದರೆ ಮೋದಿ ಅವರ ಕೊಡುಗೆ ಅಪಾರ ಎಂದರು.

ಪ್ರಸ್ತುತ ವಾತಾವರಣದಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ದಾಪುಗಾಲು ಇಡುತ್ತಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದಲ್ಲೇ 3 ನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಲಿದೆ. 10 ವರ್ಷಗಳ ಹಿಂದೆ ಕಾಂಗ್ರೆಸ್‌ ಆಡಳಿತದಲ್ಲಿದ್ದ ಕಾರಣ ನನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳು ಮೋದಿ ಅವರ ಅಧಿಕಾರವಧಿಯಲ್ಲಿ ಪೂರ್ಣಗೊಂಡಿವೆ ಎಂದು ತಿಳಿಸಿದರು.

ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬೃಹತ್‌ ಯೋಜನೆಗಳ ಅನುಷ್ಠಾನದ ವೇಗ ಹೆಚ್ಚಿಸಲು ಪ್ರಧಾನ ಮಂತ್ರಿ ಗತಿಶಕ್ತಿ ಮಿಷನ್‌ ಜಾರಿಗೆ ತರಲಾಗಿದೆ. ಪ್ರಧಾನ ಮಂತ್ರಿ ಗತಿಶಕ್ತಿ ಅನುಷ್ಠಾನದ ಪರಿಣಾಮ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಒಳಗೊಂಡಂತೆ ಕಾಮಗಾರಿಗಳು ಕಾಲ ಮಿತಿಯೊಳಗೆ ಪೂರ್ಣಗೊಳ್ಳುತ್ತಿವೆ ಎಂದರು.

ಕಾಂಗ್ರೆಸ್‌ ಕೇವಲ ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಮೂಲಕ ದೇಶದ ಜನರನ್ನು 60 ವರ್ಷಗಳ ಕಾಲ ಕಗ್ಗತ್ತಿನಲ್ಲಿಟ್ಟು ನಾಗರಿಕರ ಹಣ ಲೂಟಿ ಮಾಡಿದೆ. ಮೋದಿ ಅವರ 10 ವರ್ಷದ ಆಡಳಿತದಲ್ಲಿ ದೇಶ ಇಷ್ಟು ಅಭಿವೃದ್ಧಿ ಆಗಿದೆ. ಆದರೆ ಅಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ನಿಂದ ಅಭಿವೃದ್ಧಿ ಮಾಡುವುದಕ್ಕೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.

ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಸ್ಪರ್ಧೆಯಲ್ಲಿದೆ. ಭಾರತ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಲು ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಬೇಕು. ಮುಂದಿನ 30 ದಿನಗಳ ಕಾಲ ವಿರಮಿಸದೆ ಕೆಲಸ ಮಾಡಬೇಕು. ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಕೊಡಿಸುವ ಒಂದೊಂದು ಮತವೂ ಮೋದಿ ಅವರ ಕೈಬಲಪಡಿಸಲಿದೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳೆಲ್ಲ ಅಲ್ಪ ಸಮಯಕ್ಕೆ ಪ್ರಯೋಜನಕ್ಕೆ ಬರುವ ಗ್ಯಾರಂಟಿಗಳು. ಆದರೆ, ಮೋದಿ ಅವರು ದೇಶಕ್ಕೆ ಮತ್ತು ನಾಗರಿಕರಿಗೆ ದೀರ್ಘ‌ಕಾಲದ ಪ್ರಯೋಜನ ಸಿಗುವಂತಹ ಯೋಜನೆ ನೀಡುತ್ತಿದ್ದಾರೆ. ಹೀಗಾಗಿ ಈ ದೇಶಕ್ಕೆ ಮೋದಿ ಅವರು ಮಾತ್ರ ಗ್ಯಾರಂಟಿ ಎಂದು ತಿಳಿಸಿದರು.

ಬಿಜೆಪಿ ಮುಖಂಡರಾದ ಮಾಡಾಳ್‌ ಮಲ್ಲಿಕಾರ್ಜುನ್‌, ಎಚ್‌. ಎಸ್‌. ಶಿವಕುಮಾರ್‌, ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಬೂತ್‌ ಮಟ್ಟದ ಸಾವಿರಾರು ಕಾರ್ಯಕರ್ತರು ಪ್ರಚಾರಕ್ಕೆ ಸಾಥ್‌ ನೀಡಿದರು.

ಸಂಸದರಿಂದ ಚನ್ನಗಿರಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ

ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರು ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ ಚನ್ನಗಿರಿ ತಾಲೂಕಿಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿಸಿದ್ದಾರೆ.

ಗ್ರಾಮ ಸಡಕ್‌ ಯೋಜನೆಯಡಿ 22 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ, ಆದರ್ಶ ಗ್ರಾಮ ಯೋಜನೆಯಡಿ ಎಸ್ಸಿ, ಎಸ್ಟಿ ಸಮುದಾಯ ಹೆಚ್ಚಾಗಿರುವ 21 ಗ್ರಾಮಗಳ ಅಭಿವೃದ್ಧಿಗೆ 15 ಕೋಟಿ ಅನುದಾನ ನೀಡಿದ್ದಾರೆ.

ಎಲ್ಲ ಗ್ರಾಮಗಳಲ್ಲಿ ಶಾಲಾ ಕೊಠಡಿ, ಸಮುದಾಯ ಭವನ, ಗ್ರಂಥಾಲಯ, ಅಂಗನವಾಡಿ, ರಂಗಮಂದಿರ, ಪ್ರಯಾಣಿಕರ ತಂಗುದಾಣಗಳ ನಿರ್ಮಾಣಕ್ಕೆ 11 ಕೋಟಿ , ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಚನ್ನಗಿರಿ ತಾಲೂಕಿನ 39 ಸಾವಿರ ಸಣ್ಣ ರೈತರಿಗೆ 102 ಕೋಟಿ ರೂಪಾಯಿ, 15 ಸಾವಿರ ಮಹಿಳೆಯರಿಗೆ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‌ ಸಂಪರ್ಕ ಕಲ್ಪಿಸಲಾಗಿದೆ.

ದೇವರಹಳ್ಳಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆ ಅಡಿ ಈಗಾಗಲೇ 9.59 ಕೋಟಿ ವೆಚ್ಚದಲ್ಲಿ ಕೋಲ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಶಾಂತಿಸಾಗರ ಅಭಿವೃದ್ಧಿಗೆ ಮಾಜಿ ಶಾಸಕರಾದ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರು 45 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಿದ್ದಾರೆ.

ಸಂತೇಬೆನ್ನೂರಿನ ಪುಷ್ಕರಣಿ, ಷಹಾಜಿ ಸಮಾಧಿ ದೇವರಹಳ್ಳಿ ರಂಗನಾಥಸ್ವಾಮಿ ದೇವಸ್ಥಾನ, ಅಮ್ಮನಗುಡ್ಡ ಸೇರಿದಂತೆ ಪ್ರಮುಖ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಹೆಚ್ಚು ಒತ್ತು ನೀಡುವುದಾಗಿ ಗಾಯಿತ್ರಿ ಸಿದ್ದೇಶ್ವರ್‌ ತಿಳಿಸಿದರು.

ಗಾಯಿತ್ರಿ ಸಿದ್ದೇಶ್ವರ್‌ ಗೆಲುವು ನಿಶ್ಚಿತ: ಮಲ್ಲಿಕಾರ್ಜುನ್‌

ದಾವಣಗೆರೆ: ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಗೆಲುವು ನಿಶ್ಚಿತ. ಈ ಬಾರಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಅವರು ಗೆಲ್ಲುವರು ಎಂದು ಬಿಜೆಪಿ ಮುಖಂಡ ಮಾಡಾಳ್‌ ಮಲ್ಲಿಕಾರ್ಜುನ್‌ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ ಅವರೊಂದಿಗೆ ಪ್ರಚಾರ ನಡೆಸಿದ ಅವರು, ಗಾಯಿತ್ರಿ ಸಿದ್ದೇಶ್ವರ್‌ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡುತ್ತೇವೆ ಎಂದು ಭವಿಷ್ಯ ನುಡಿದರು.

ದೇಶ ಮತ್ತು ಜಿಲ್ಲೆಯ ಅಭಿವೃದ್ಧಿಗಾಗಿ ಮೋದಿ ಅವರು ಪ್ರಧಾನಿ ಆಗಬೇಕು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯಿತ್ರಿಯಮ್ಮನವರು ಸಂಸದರಾಗಬೇಕು. ನಾನು ಶಿವಣ್ಣ (ಶಿವಕುಮಾರ್‌) ಇಬ್ಬರೂ ಜೊತೆಯಾಗಿ ಗಾಯಿತ್ರಿ ಸಿದ್ದೇಶ್ವರ್‌ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಗಾಯಿತ್ರಿ ಸಿದ್ದೇಶ್ವರ್‌ ಅವರು ಸಂಸದರಾದರೆ ನಾವು ನೇರವಾಗಿ ಹೋಗಿ ಭೇಟಿ ಆಗಬಹುದು. ಅಲ್ಲಿ ಯಾವುದೇ ತಡೆ ಇರೋದಿಲ್ಲ. ಅವರು ನಮ್ಮನ್ನು ಮಕ್ಕಳಂತೆ ಪ್ರೀತಿ ಮಾಡಿ ಕಷ್ಟ, ಸುಖಕ್ಕೆ ಆಗುತ್ತಾರೆ. ಹೃದಯವಂತೆ ಸಂಸತ್‌ ಪ್ರವೇಶಿಸಿದರೆ ದಾವಣಗೆರೆ ಜಿಲ್ಲೆಯ ಮೊದಲ ಸಂಸದೆ ಅನ್ನೋ ಇತಿಹಾಸ ಸೃಷ್ಟಿಯಾಗತ್ತೆ. ಅಂತಹ ಇತಿಹಾಸಕ್ಕೆ ನಾವು ಕಾರಣಕರ್ತರು ಎಂಬ ಹೆಮ್ಮೆ ನಮಗಿರಲಿದೆ. ಹಾಗಾಗಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಿತ್ರಿ ಸಿದ್ದೇಶ್ವರ್‌ ಅವರ ಪರ ಮತ ಹಾಕಿಸಬೇಕು ಎಂದು ಮನವಿ ಮಾಡಿದರು.

ತುಮ್ಕೋಸ್‌ ಮಾಜಿ ಅಧ್ಯಕ್ಷ ಎಚ್‌.ಎಸ್‌. ಶಿವಕುಮಾರ್‌ ಮಾತನಾಡಿ, ದಾವಣಗೆರೆ ಜಿಲ್ಲೆಗೆ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರ ಕೊಡುಗೆ ಅಪಾರ. 2 ದಶಕದಲ್ಲಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಈ ಬಾರಿ ಅವರ ಪತ್ನಿ ಗಾಯಿತ್ರಿ ಸಿದ್ದೇಶ್ವರ್‌ ಸ್ಪರ್ಧಿಸಿದ್ದಾರೆ. ನಾನು-ಸಹೋದರ ಮಲ್ಲಿಕಾರ್ಜುನ್‌ ಜೊತೆಯಾಗಿ ನಿಂತು ಚನ್ನ ಗಿರಿ ತಾಲೂಕಿನಿಂದ ಹೆಚ್ಚಿನ ಮತ ಹಾಕಿಸುವ ಮೂಲಕ ಅವರನ್ನು ಗೆಲ್ಲಿಸುತ್ತೇವೆ ಎಂದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.