![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 12, 2024, 6:04 PM IST
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್ 44.53 ಕೋಟಿ ಆಸ್ತಿ ಒಡತಿಯಾಗಿದ್ದಾರೆ. 97.28 ಲಕ್ಷ ಸಾಲ ಅವರ ಹೆಸರಲ್ಲಿದೆ.
ಡಾ| ಪ್ರಭಾ ಮಲ್ಲಿಕಾರ್ಜುನ್ ಅವರಲ್ಲಿ67,566 ರೂಪಾಯಿ ನಗದು, ವಿವಿಧ ಬ್ಯಾಂಕ್‌ಗಳಲ್ಲಿ 13,76,105 ರೂಪಾಯಿ ಠೇವಣಿ ಹೊಂದಿದ್ದಾರೆ. ಷೇರು, ಡಿಬೆಂಚರ್ ಇತರೆಡೆ 2,65,20,500 ರೂಪಾಯಿ ಬಂಡವಾಳ ಹೂಡಿಕೆ ಮಾಡಿದ್ದಾರೆ. 1.80 ಕೋಟಿ ಮೌಲ್ಯದ 3189.528 ಗ್ರಾಂ ಚಿನ್ನ, ಇತರೆ 5.976 ಗ್ರಾಂ ಆಭರಣಗಳಿವೆ. ಆದರೆ, ಬೆಳ್ಳಿ ಆಭರಣ ಯಾವುದೂ ಇಲ್ಲ. 10,23,009 ರೂಪಾಯಿ ಮೌಲ್ಯದ ಇತರೆ ಆಸ್ತಿಗಳು ಅವರ ಹೆಸರಲ್ಲಿ ಇವೆ. ಡಾ| ಪ್ರಭಾ ಮಲ್ಲಿಕಾರ್ಜುನ್ ಹೆಸರಲ್ಲಿ 1.54 ಕೋಟಿ ಮೌಲ್ಯದ 47.11ಎಕರೆ ಕೃಷಿ ಭೂಮಿ ಇದೆ.16.1 ಲಕ್ಷ ಮೌಲ್ಯದ 11050 ಚದರ ಅಡಿಯಷ್ಟು ಕೃಷಿಯೇತರ ಭೂಮಿ ಸಹ ಇದೆ. 21.4 ಲಕ್ಷ ಮೌಲ್ಯದ 34484 ಚದುರ ಅಡಿ ಮನೆಯ ಜತೆಗೆ 2500 ಚದುರ ಅಡಿ ಬಿಲ್ಡ್ ಏರಿಯಾ ಡಾ| ಪ್ರಭಾ ಮಲ್ಲಿಕಾರ್ಜುನ್ ಹೆಸರಲ್ಲಿದೆ.
ವೈಯಕ್ತಿಕವಾಗಿ ಯಾವುದೇ ಆಸ್ತಿ ಇಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿರುವ ಅವರು ಅವಿಭಕ್ತ ಕುಟುಂಬದ ಹಿನ್ನೆಲೆ ಯಲ್ಲಿ ತಮಗೆ2018-19 ರಲ್ಲಿ 6,05,320, 2019-20 ರಲ್ಲಿ6,48,080, 2020-21ರಲ್ಲಿ 7,18,300, 2021-22 ರಲ್ಲಿ7,18,300, 2021-22 ರಲ್ಲಿ8,40,600 ರೂಪಾಯಿ ಆಸ್ತಿ ದೊರೆತಿದೆ. ಒಟ್ಟು 44,53,14,286 ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಯ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.