ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ಆಕ್ರೋಶ
Team Udayavani, May 27, 2018, 11:57 AM IST
ದಾವಣಗೆರೆ: ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪಾಲಿಕೆ ಆವರಣದಲ್ಲಿ ಪ್ರತಿಭಟಿಸಿದರು. ಪಾಲಿಕೆ ಆವರಣದ ಗಾಂಧಿ ಪ್ರತಿಮೆ
ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಗೆ ತೀವ್ರ ಹೊರೆ ಆಗುತ್ತಿದೆ. ಪೆಟ್ರೋಲ್ ಬೆಲೆ ಲೀಟರ್‌ಗೆ 80 ರೂ. ಆಸುಪಾಸಿಗೆ ಬಂದಿದೆ. ಚುನಾವಣೆಗೂ ಮುನ್ನ ನರೇಂದ್ರ ಮೋದಿ ಜನರ ಜೀವನ ಸುಧಾರಣೆಗೆ ಭಾರೀ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಯಾವುದೇ ಅವರ ಭರವಸೆ ಕಾರ್ಯಗತ ಆಗಿಲ್ಲ ಎಂದರು.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದಿದ್ದರು. ಆದರೆ, ಇವರೆಗೆ ಅಂತಹ ಒಳ್ಳೆಯ ದಿನಗಳು ಸಾರ್ವಜನಿಕರ ಪಾಲಿಗೆ ಬರಲೇ ಅಲ್ಲ. ದೊಡ್ಡ ದೊಡ್ಡ ಕಂಪನಿಗಳ ಪಾಲಿಗೆ ಒಳ್ಳೆಯ ದಿನಗಳು ಬಂದಿವೆ. ದೊಡ್ಡ ದೊಡ್ಡ ವಂಚನೆಕೋರರು ದೇಶದ ಅಮಾಯಕ ಜನರ
ಹಣ ಕೊಳ್ಳೆ ಹೊಡೆದು ಓಡಿ ಹೋದರು. ಅವರ ಪಾಲಿಗೆ ಒಳ್ಳೆಯ ದಿನಗಳು ಬಂದಿವೆ. ಆದರೆ, ದೇಶದ ಸಾಮಾನ್ಯ ಜನರ ಪಾಲಿಗೆ ದಿನಂಪ್ರತಿ ಕಷ್ಟದ ದಿನಗಳೇ ಎದುರಾಗುತ್ತಿವೆ ಎಂದು ಅವರು ಆರೋಪಿಸಿದರು.
ನೋಟು ಅಮಾನ್ಯಕರಣದಿಂದ ಯಾರಿಗೂ ಲಾಭ ಆಗಲಿಲ್ಲ. ಭಯೋತ್ಪದನಾ ಚಟುವಟಿಕೆ ನಿಲ್ಲಲಿಲ್ಲ. ಇದರ ಜೊತೆಗೆ ಜಿಎಸ್‌ಟಿ ಜಾರಿಯಾಗಿ ಜನರು ದುಡ್ಡು ಖರ್ಚು ಮಾಡಲು ಹಿಂದೆ ಮುಂದೆ ಯೋಚಿಸುವಂತಹ ಸ್ಥಿತಿ ಬಂತು. ಇದರಿಂದಾಗಿ ಹಲವರಿಗೆ ಕೆಲಸ ಇಲ್ಲದಂತಾಗಿ ಹೋಯಿತು. ಇಂದು ಬಡ ಜನರು, ಶ್ರಮಿಕ ವರ್ಗ ಸಾಕಷ್ಟು ಸಮಸ್ಯೆಯಿಂದ ಜೀವನ ಮಾಡುವಂತೆ ಆಯಿತು ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಯುಪಿಎ ಸರ್ಕಾರ ಮಾಡಿದಂತೆ ತೆರಿಗೆ ಪ್ರಮಾಣ ಕಡಮೆ ಮಾಡಿ, ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಮೇಯರ್ ಶೋಭಾ ಪಲ್ಲಾಗಟ್ಟೆ, ಉಪ ಮೇಯರ್ ಚಮನ್ ಸಾಬ್, ಜಿಪಂ ಸದಸ್ಯ ಕೆ.ಎಚ್. ಓಬಳೇಶಪ್ಪ, ಮುಖಂಡರಾದ ಆಯೂಬ್ ಪೈಲ್ವಾನ್. ಪಿ. ರಾಜಕುಮಾರ, ಎ. ನಾಗರಾಜ, ಕೆ.ಜಿ. ಶಿವಕುಮಾರ, ಮುಜಾಹಿದ್ ಪಾಷ ಹೋರಾಟದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.