ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ: ಬಸವರಾಜು ವಿ ಶಿವಗಂಗಾ
Team Udayavani, Dec 11, 2021, 12:29 PM IST
ಚನ್ನಗಿರಿ: ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೇಸತ್ತು ಸ್ವಯಂ ಪ್ರೇರಿರತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು.
ಹಿರೇಕೋಗಲೂರು ಗ್ರಾಮದಲ್ಲಿ ಕಿಸಾನ್ ಕಾಂಗ್ರೆಸ್ ನಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಈ ವಿಷಯ ತಿಳಿಸಿದರು.
ಕೆಪಿಸಿಸಿ ವತಿಯಿಂದ ರಾಜ್ಯದ್ಯಂತ ಏಕ ಕಾಲದಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಿಸಾನ್ ಕಾಂಗ್ರೆಸ್ 12 ಕಡೆ ಸದಸ್ಯತ್ವ ಅಭಿಯಾನ ನಡೆಸುತ್ತಿದೆ ಉಳಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಗಳ ಲ್ಲಿಯೂ ಪದಾಧಿಕಾರಿಗಳ ತಂಡ ಸದಸ್ಯತ್ವ ನಡೆಸಿದೆ ಎಂದರು.
ಕಾಂಗ್ರೆಸ್ ಪಕ್ಷ ಸದೃಧವಾಗಲು ಸಂಘಟನೆ ಮಾಡುತ್ತಿದ್ದು ಇಂದಿನ ಸದಸ್ಯತ್ವ ಅಭಿಯಾನಕ್ಕೆ ಸಿಕ್ಕ ಬೆಂಬಲವೇ ಸಾಕ್ಷಿ ಎಂದರು.
ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಪಕ್ಷದ ಮುಖಂಡರ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿದೆ ಇದು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ಸದಸ್ಯತ್ವ ಅಭಿಯಾನ ಮುಂದುವರೆಯಲಿದ್ದು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷವನ್ನ ಕಾರ್ಯಕರ್ತರೊಂದಿಗೆ ಸೇರಿ ಕಟ್ಟುತ್ತೇವೆ ಸದಸ್ಯತ್ವ ಅಭಿಯಾನ ಒಂದು ಇತಿಹಾಸ ಸೃಷ್ಟಿಸಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ನಾವು ಯಾರಿಗೂ ಸಹ ಒತ್ತಡ ಹಾಕುತ್ತಿಲ್ಲ ಜನರೇ ನಮ್ಮ ಪಕ್ಷದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ಬಸವರಾಜು ವಿ ಶಿವಗಂಗಾ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಗಿರೀಶ್ ಗ್ರಾ.ಪಂ. ಸದಸ್ಯರಾದ ಬನ್ನಿಹಟ್ಟಿ ಶಶಿಧರ್, ರಾಮಣ್ಣ ಹಾಗೂ ಪಕ್ಷದ ಮುಖಂಡರಾದ ಪ್ರಕಾಶ್, ರಾಜಣ್ಣ, ಮಹಾದೇವಪ್ಪ, ಗಿರಿಯಾಪುರ ಶಂಕರಪ್ಪ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.